ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನ


Logo

Published Date: 05-Aug-2026

ಬೆಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಜಂಟಿ ಸಹಯೋಗದೊಂದಿಗೆ ನೀಡಲಾಗುತ್ತಿರುವ ಉಚಿತ ಉನ್ನತ ಶಿಕ್ಷಣ ಯೋಜನೆ ಅಡಿಯಲ್ಲಿ ಪ್ರವೇಶಾತಿ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಆ.10ರವರೆಗೆ ವಿಸ್ತರಿಸಲಾಗಿದೆ. ಉನ್ನತ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರೆಯಲಿದೆ. 2026-27ನೇ ಸಾಲಿನ ಯುಜಿಸಿ ಅನುಮೋದಿತ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ ಗಳಿಗೆ ಈ ಯೋಜನೆಯಡಿ ಉಚಿತ ಪ್ರವೇಶಾತಿ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ 98805-26439 / 90195-26439 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img