ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮೇ 31ರವರೆಗೆ ಅವಕಾಶ


Logo

Published Date: 05-May-2024

ವಾಹನಗಳ ಮೇಲೆ ಹೈ ಸೇಫ್ಟಿ ರಿಜಿಸ್ಟ್ರೇಶನ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಮೇ 31 ವರೆಗೆ ಅವಕಾಶ ನೀಡಲಾಗಿದ್ದು, ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ವಿಧಿಸುವ ಸಾಧ್ಯತೆ ಇದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ. ಎರಡು ಗಡುವಿನ ವಿಸ್ತರಣೆಗಳ ಹೊರತಾಗಿಯೂ, ರಾಜ್ಯದಲ್ಲಿ ಕೇವಲ 34 ಲಕ್ಷ ಹೆಚ್‌ಎಸ್‌ಆರ್‌ಪಿಗಳು ಮಾತ್ರ ನೋಂದಾಯಿಸಲ್ಪಟ್ಟಿವೆ. ಹೆಚ್ಚುವರಿ ಸಾರಿಗೆ ಆಯುಕ್ತ (ಜಾರಿ) ಸಿ. ಮಲ್ಲಿಕಾರ್ಜುನ ಮಾತನಾಡಿ, ಫೆಬ್ರವರಿಯಿಂದ ಸುಮಾರು 18 ಲಕ್ಷ ನೋಂದಣಿಗಳು ನಡೆದಿವೆ ಮತ್ತು ಹೆಚ್ಚಿನ ವಾಹನಗಳು ಇನ್ನೂ ಹೆಚ್‌ಎಸ್‌ಆರ್‌ಪಿಯನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರು, ಮಧ್ಯಮ, ಭಾರಿ ವಾಣಿಜ್ಯ ವಾಹನಗಳು, ಟಿಲ್ಲರ್ & ಟ್ರಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ. ರಾಜ್ಯ ಸರ್ಕಾರವು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮೇ 31ರವರೆಗೆ ಅವಕಾಶ ನೀಡಿದೆ. ನಂತರ ಜೂ. 1 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img