ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ
ವೇಣೂರು: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪ ಮೂಡ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನಾ ಸಮಾರಂಭವು ಫೆ.12 ರಂದು ನಡೆಯಿತು. ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಇವರು ಈ ಸ್ಟಾಂಪಿಂಗ್ ಉದ್ಘಾಟಿಸಿ ಶುಭ ಹಾರೈಸಿದರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವೇಣೂರು ಇದರ ಪ್ರಬಂಧಕರಾದ ರಂಜಿತ್ ದೀಪ ಬೆಳಗಿಸಿದರು. ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಜಕೀಯ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿ ಇದರ ಸೇವೆಯನ್ನು ಎಲ್ಲ ಗ್ರಾಹಕರು ಪಡೆದುಕೊಂಡು ಸಂಘದಲ್ಲಿ ಉತ್ತಮ ರೀತಿಯಲ್ಲಿ ವ್ಯವಹರಿಸಿ ಸಂಘದ ಶ್ರೇಯೋಭಿವೃದ್ಧಿಗಾಗಿ ಸಹಕರಿಸಬೇಕಾಗಿ ವಿನಂತಿಸಿದರು. ವೇಣೂರು ಮೂರ್ತದಾರರ ಅಧ್ಯಕ್ಷ ರಮೇಶ್ ಪೂಜಾರಿ, ವೆಂಕಟರಮಣ ಕೋ ಆಪರೇಟಿವ್ ವೇಣೂರು ಶಾಖಾ ವ್ಯವಸ್ಥಾಪಕ ಗಾಯನ್ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನಾಡಿ, ಜಯಶಂಕರ ಕಾನ್ಸ್‌ಲೆ, ಅರುಣ್ ಕುಮಾರ್ ಎಮ್, ಆಶಿಶ್ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಎಜಿಎಂ ಶಿಲ್ಪಾ ಉಪಸ್ಥಿತರಿದ್ದರು. ನಿರ್ದೇಶಕ ಆರುಣ್ ಕುಮಾರ್ ಸ್ವಾಗತಿಸಿದರು, ಶಾಖಾ ವ್ಯವಸ್ಥಾಪಕ ವಿಜಯ ಕೆ ವಂದಿಸಿದರು.
