ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ
Published Date: 24-Feb-2025
ಉಜಿರೆ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉದ್ಘಾಟಿಸಿ ಶುಭ ಹಾರೈಸಿದರು. ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರವಿದೆ. ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.