ಮೂಡುಬಿದಿರೆ: ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
Published Date: 10-Jun-2026
ಕಲ್ಲಬೆಟ್ಟುವಿನಲ್ಲಿ ಪ್ರಸಾದ್ ನೇತ್ರಾಲಯ ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣ ವಿಭಾಗ ಮಂಗಳೂರು ದಕ್ಷಿಣ ಕನ್ನಡ, ಲಯನ್ಸ್ ಕ್ಲಬ್ ಮೂಡುಬಿದಿರೆ, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಹಾಗೂ ನಮ್ಮ ಕ್ಲಿನಿಕ್ ಗಂಟಲ್ ಕಟ್ಟೆ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವು ಗಂಟಲ್ ಕಟ್ಟೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟಣೆಯನ್ನು ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾಕ್ಟರ್ ಮಾನಸರವರು ಉದ್ಘಾಟಿಸಿ, ಜನರಿಗೆ ಕಣ್ಣಿನ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆಯ ಆಡಳಿತ ವೈದ್ಯಾಧಿಕಾರಿಯವರಾದ ಡಾಕ್ಟರ್ ಅಕ್ಷತಾ ನಾಯಕ್, ನ್ಯಾಯವಾದಿ ಎಂ ಬಾಹುಬಲಿ ಪ್ರಸಾದ್, ಸುರೇಶ್ ಕೋಟ್ಯಾನ್, ಕೃಷ್ಣರಾಜ ಹೆಗ್ಡೆ, ಪದ್ಮಯ ಬಿ ಸುವರ್ಣ, ಶ್ರೀಧರ್, ಶಾರದಾದೇವಿ, ಮುಖ್ಯೋಪಾದ್ಯಾಯಿನಿ ನಿಶಾ ಹಾಗೂ ಕ್ಲಿನಿಕ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸುಮಾರು 105 ಜನ ಫಲಾನುಭವಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು.