ಉಜಿರೆ: ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ


Logo

Published Date: 13-Jun-2026

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಜೂ.21 ಆದಿತ್ಯವಾರ ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಸ್ತ್ರೀರೋಗ ತಪಾಸಣಾ ಶಿಬಿರ ನಡೆಯಲಿದೆ. ಸ್ತನದ ತಪಾಸಣೆ, ಗರ್ಭಾಶಯದ ತಪಾಸಣೆ, ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಗರ್ಭಕಂಠ ಮತ್ತು ಗರ್ಭಾಶಯದ ಕ್ಯಾನ್ಸರ್ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಸ್ತನದ ಕ್ಯಾನ್ಸರ್, ಮೂತ್ರನಾಳದ ಸೋಂಕು ತಪಾಸಣೆಗಳನ್ನು ನಡೆಸಲಾಗುವುದು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ, ಡಾ| ಪ್ರಿಯಾಂಕ ಜಯದೇವ್ ಇವರು ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ಉಚಿತ ತಪಾಸಣೆಯೊಂದಿಗೆ, ಉಚಿತ ಪ್ಯಾಪ್ ಸ್ಮಯರ್ ಪರೀಕ್ಷೆ, ಲ್ಯಾಬ್ ಪರೀಕ್ಷೆಗಳಲ್ಲಿ 25%, ರೇಡಿಯಾಲಜಿ ಸೇವೆಗಳಲ್ಲಿ 25%, ಪ್ರಕ್ರಿಯೆಗಳಲ್ಲಿ 25%, ಔಷಧಿಗಳ ಮೇಲೆ 10%, ಒಳರೋಗಿ ಶುಲ್ಕಗಳಲ್ಲಿ 10%, ಲ್ಯಾಪರೋಸ್ಕೋಪಿಕ್ ಶಸ್ತ್ರ ಚಿಕಿತ್ಸೆಯಲ್ಲಿ 25% ರಿಯಾಯತಿ ದೊರೆಯಲಿದೆ. ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img