Article Image

ಜಾಗೃತಿ ಕಾರ್ಯಕ್ರಮ

Article Image

ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಪುನರ್ಜನ್ಮ ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದಲ್ಲಿ ‘ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಣಿಕೆ ತಡೆ ದಿನ’ದಂದು ಆಳ್ವಾಸ್ ಹೋಮಿಯೋಪತಿ ಕಾಲೇಜು ಸಭಾಂಗಣದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಮೂಡುಬಿದಿರೆ ಪೋಲೀಸ್ ಠಾಣಾ ಉಪನಿರೀಕ್ಷಕಿ ಪ್ರತಿಭಾ ಮಾತನಾಡಿ, ಮಾದಕ ದ್ರವ್ಯಗಳ ವ್ಯಸನಕ್ಕೆ ಹೆಚ್ಚಾಗಿ ಯುವಕರು ಮತ್ತು ಯುವತಿಯರು ಬಲಿಯಾಗುತ್ತಿದ್ದಾರೆ. ಇವುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕ್ಷೀಣಿಸುತ್ತದೆ. ಇದರಿಂದ ಕೇವಲ ಸೇವಿಸುವವನಿಗೆ ಮಾತ್ರವಲ್ಲ, ಸಮಾಜಕ್ಕೂ ತೊಂದರೆಯಾಗುತ್ತಿದೆ. ಸಮಾಜದಲ್ಲಿ ನಡೆಯುವ ಅಪರಾಧ ಕೃತ್ಯಗಳಾದ ಕಳ್ಳತನ, ಕೊಲೆ, ಅತ್ಯಾಚಾರ ಇತ್ಯಾದಿಗಳಿಗೆ ತೊಡಗಿರುವ 70% ಆರೋಪಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗಿರುತ್ತಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಪುನರ್ಜನ್ಮ ವೈದ್ಯಕೀಯ ನಿರ್ದೇಶಕ ಡಾ. ವಿನಯ್ ಆಳ್ವ, ‘2019ರಲ್ಲಿ ಭಾರತದಲ್ಲಿ ನಡೆದ ಸಮೀಕ್ಷೆಯ ಪ್ರಕಾರ 17 ಕೋಟಿ ಮದ್ಯಪಾನ, 5.1 ಕೋಟಿ ಓಪಿಯಂ, 3.2 ಕೋಟಿ ಗಾಂಜಾ ಸೇವಿಸುವವರಿದ್ದು, ಆದರೆ ಕೇವಲ 612 ನೋಂದಾಯಿಸಲ್ಪಟ್ಟ ದುಶ್ಚಟ ನಿವಾರಣಾ ಕೇಂದ್ರಗಳಿವೆ. ಇವುಗಳ ನಡುವೆ ಇರುವ ವ್ಯತ್ಯಾಸ ದುಶ್ಚಟ ನಿವಾರಣಾ ಕೇಂದ್ರಗಳಿಗಿರುವ ಬೇಡಿಕೆಯನ್ನು ತಿಳಿಸುತ್ತದೆ. ಮಾದಕ ದ್ರವ್ಯಗಳ ವ್ಯಸನ ಒಂದು ಸಾಂಕ್ರಾಮಿಕ ರೋಗ. ಅದು ಕೇವಲ ವ್ಯಕ್ತಿಯಲ್ಲಿ ಮಾತ್ರವಲ್ಲ ಕುಟುಂಬದ ಮೇಲೂ ಪರಿಣಾಮ ಬೀರುತ್ತದೆ. ಇದನ್ನು ತಡೆಗಟ್ಟಲು ನಾವೆಲ್ಲರೂ ಪ್ರತಿಜ್ಞೆಯನ್ನು ಸ್ವೀಕರಿಸಿ, ಮುನ್ನಡೆಯಬೇಕು ಎಂದರು. ಬೆಳ್ತಂಗಡಿ ಜನ ಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ, ನಮ್ಮ ಕಣ್ಣ ಮುಂದಿರುವ ಅತೀ ದೊಡ್ಡ ಶತ್ರು ಮಾದಕ ವಸ್ತುಗಳು. ಮಾನವರು ಸಾಮಾನ್ಯವಾಗಿ ಕೆಟ್ಟ ಚಟಗಳೆಡೆಗೆ ಬೇಗನೆ ಆಕರ್ಷಿತರಾಗುತ್ತಾರೆ. ಶರೀರ ಒಂದು ಕಾರ್ಖಾನೆಯಂತೆ. ದೇಹಕ್ಕೆ ನೀಡುವ ಪದಾರ್ಥಗಳ ಮೇಲೆ ಅದು ವರ್ತಿಸಲಾರಂಭಿಸುತ್ತದೆ. ಮಾದಕ ವಸ್ತುಗಳ ಸೇವನೆಯಿಂದ ದೇಹದ ಅಂಗಾಂಗಗಳು ಸರಿಯಾಗಿ ಕೆಲಸ ಮಾಡಲಾಗದೆ ಆರೋಗ್ಯ ಹದಗೆಡುತ್ತದೆ, ಮನಸ್ಸೂ ಅಶಾಂತವಾಗುತ್ತದೆ. ದುಶ್ಚಟಗಳಿಗೆ ಒಳಗಾದವರು ಶಾರೀರಿಕವಾಗಿ, ಮಾನಸಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸುಧಾರಿಸುವುದಿಲ್ಲ. ಮನಸ್ಥಿತಿ ಉತ್ತಮವಿದ್ದಲ್ಲಿ ಮಾತ್ರ ಪರಿಸ್ಥಿತಿಯ ಉತ್ತಮವಿರುತ್ತದೆ ಎಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ ರೋಷನ್ ಪಿಂಟೋ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಳ್ವಾಸ್ ಪುರ್ನಜನ್ಮದ ಆಪ್ತಸಮಾಲೋಚಕಿ ಸುಮನ್ ಪಿಂಟೋ ಸ್ವಾಗತಿಸಿ, ಬೆನ್ಸನ್ ಡಿಸೋಜ ವಂದಿಸಿ, ಮುಖ್ಯ ಆಪ್ತಸಮಾಲೋಚಕ ಲೋಹಿತ್ ಬಂಟ್ವಾಳ ನಿರೂಪಿಸಿದರು.

ಆಳ್ವಾಸ್ ಸ್ನಾತಕೋತ್ತರ ಸಮಾಜಕಾರ್ಯ ಫೋರಮ್‌ನ ಸಮಾರೋಪ ಸಮಾರಂಭ

Article Image

ಆಳ್ವಾಸ್ ಸ್ನಾತಕೋತ್ತರ ಸಮಾಜಕಾರ್ಯ ಫೋರಮ್‌ನ ಸಮಾರೋಪ ಸಮಾರಂಭ

ವಿದ್ಯಾಗಿರಿ: ಕಾಲೇಜು ವಿದ್ಯಾಭ್ಯಾಸವನ್ನು ಮುಗಿಸಿ ವೃತ್ತಿ ಜೀವನಕ್ಕೆ ಕಾಲಿಡುವ ಪ್ರತಿ ವಿದ್ಯಾರ್ಥಿಯೂ ಸಂದರ್ಶನವನ್ನು ಎದುರಿಸುವ ಕಲೆಯನ್ನು ಕರಗತ ಪಡಿಸಿಕೊಂಡಿರಬೇಕು. ಪ್ರತಿ ನಿರ್ಧಾರವನ್ನು ಜಾಗರೂಕತೆಯಿಂದ ತೆಗೆದುಕೊಳ್ಳುವ ಮನೋಭಾವವನ್ನು ಬೆಳೆಸಿಕೊಂಡರೆ ಯಶಸ್ಸು ಸುಲಭ ಸಾಧ್ಯ ಎಂದು ಬನ್ನಡ್ಕ ಎಸ್ ಕೆಎಫ್ ಎಲಿಕ್ಸರ್ ಪ್ರೈವೇಟ್ ಲಿಮಿಟೆಡ್‌ನ ಮಾನವ ಸಂಪನ್ಮೂಲ ವ್ಯವಸ್ಥಾಪಕ ವಿವೇಕ್ ವಲ್ಲಭ್ ನುಡಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ "ಸಮಾಜಕಾರ್ಯ ಫೋರಮ್‌ನ’ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ವೃತ್ತಿ ಬದುಕಿಗೆ ಕಾಲಿಡುವಾಗ ವೃತ್ತಿಪರತೆಯನ್ನು ರೂಡಿಸಿಕೊಳ್ಳುವುದರೊಂದಿಗೆ ಹೊಸ ಉದ್ಯಮಕ್ಕಿಂತ ಸ್ಥಾಪಿತ ಕಂಪನಿಗೆ ಸೇರುವುದು ಉತ್ತಮ. ಪ್ರತಿ ಹಂತದಲ್ಲೂ ಅಲ್ಲಿ ಸಿಗುವ ವೃತ್ತಿಯ ಅನುಭವ ಮತ್ತಷ್ಟು ವೈಯಕ್ತಿಕ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಸಮಾಜಕಾರ್ಯ ಎನ್ನುವುದು ಎಂದಿಗೂ ಸಮುದಾಯವನ್ನು ಕಟ್ಟುವ ಮತ್ತು ಅಭಿವೃದ್ಧಿ ಪೋಷಿಸುವ ಕಾರ್ಯದಲ್ಲಿ ತನ್ನೊಂದಿಗೆ ತನ್ನವರನ್ನು ಬೆಳೆಸುವ ಕ್ಷೇತ್ರ. ಹಾಗಾಗಿ ಎಂತಹ ಪರಿಸ್ಥಿಯಲ್ಲಿಯೂ ಮನುಷತ್ವವನ್ನು ಮರೆತು ವರ್ತಿಸದಿರಿ. ನಿಮ್ಮ ಸುತ್ತಮುತ್ತಲಿನ ಸಮುದಾಯದ ಒಳಿತಿಗೆ ಸದಾ ಶ್ರಮಿಸುತ್ತಿರಿ ಎಂದು ಆಳ್ವಾಸ್ (ಸ್ವಾಯತ್ತ ) ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಶುಭ ಹಾರೈಸಿದರು. ಬಳಿಕ, ಅತ್ಯುತ್ತಮ ಸಮಾಜಕಾರ್ಯ ವಿದ್ಯಾರ್ಥಿ ಹಾಗೂ ಸಮುದಾಯ ಶಿಬಿರದ ಅತ್ಯುತ್ತಮ ಶಿಬಿರಾರ್ಥಿ ಪ್ರಶಸ್ತಿಯನ್ನು ಕ್ರಮವಾಗಿ ಲಾವಣ್ಯ ಹಾಗೂ ಮಹೇಶ್‌ಗೆ ನೀಡಿ ಅಭಿನಂದಿಸಲಾಯಿತು. ಆಳ್ವಾಸ್ ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ ಮಧುಮಾಲ ಕೆ, ಸಮಾಜಕಾರ್ಯ ಫೋರಮ್ ಸಂಯೋಜಕ ಕೃಷ್ಣಮೂರ್ತಿ ಬಿ, ವಿದ್ಯಾರ್ಥಿ ಸಂಯೋಜಕ ಶ್ರೇಯಸ್, ಫೋರಮ್ ಪದಾಧಿಕಾರಿಗಳು ಮತ್ತು ಶಿಕ್ಷಕ ವೃಂದದವರು ಭಾಗಿಯಾಗಿದ್ದರು.

ಉಜಿರೆ: ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Article Image

ಉಜಿರೆ: ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ಡಿ. ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ದಿನಾಂಕ 22-06-2025ನೇ ಆದಿತ್ಯವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ನಡೆಯಿತು. ಜನರಲ್ ಸರ್ಜನ್ ಡಾ| ಕಿರಣ್ ಕುಮಾರ್ ಶಿಬಿರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಂಗಳೂರಿನಂತ ನಗರದ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸಾ ಸೌಲಭ್ಯ ಈ ಗ್ರಾಮೀಣ ಆಸ್ಪತ್ರೆಯಲ್ಲಿ ದೊರೆಯುತ್ತದೆ. ಇಲ್ಲಿನ ವೈದ್ಯಕೀಯ ಸೇವೆ ನಗರದ ಆಸ್ಪತ್ರೆಗಳಿಗೆ ಸಮಾನವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡುತ್ತಾ, ಒಳ್ಳೆಯ ಮನಸ್ಸು ಮತ್ತು ಸೇವಾ ಮನೋಭಾವ ಹೊಂದಿರುವ ಅನುಭವಿ ತಜ್ಞ ವೈದ್ಯರ ತಂಡ, ತರಬೇತಿ ಹೊಂದಿದ ನುರಿತ ದಾದಿಯರು ಮತ್ತು ಟೆಕ್ನಿಶಿಯನ್ಸ್ ಇಲ್ಲಿ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ. ಇಲ್ಲಿ ನಡೆಸಲಾಗುವ ಉಚಿತ ಶಿಬಿರಗಳ ಮೂಲಕ ಹಲವಾರು ಮಂದಿಯ ಆರೋಗ್ಯ ಸಮಸ್ಯೆಗೆ ಸೂಕ್ತ ಪರಿಹಾರ ನೀಡಲಾಗಿದೆ ಎಂದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಪಿ, ಜನರಲ್ ಸರ್ಜನ್ ಡಾ| ಬಾಲಾಜಿ ಪ್ರಭಾಕರನ್ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಶಿಬಿರದಲ್ಲಿ ಸಾಮಾನ್ಯ ಶಸ್ತçಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು, ಕಿಬ್ಬೊಟ್ಟೆಯ ನೋವು, ಕಾಮಾಲೆ, ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾದಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು ಮತ್ತು ಗೆಡ್ಡೆಗಳ ತಪಾಸಣೆ ನಡೆಸಲಾಯಿತು. 75ಕ್ಕಿಂತಲೂ ಅಧಿಕ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.

ಮೂಡುಬಿದಿರೆ: ಯೋಗ ಸಂಗಮ -2025

Article Image

ಮೂಡುಬಿದಿರೆ: ಯೋಗ ಸಂಗಮ -2025

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಕಾಲೇಜು, ಪುಣೆಯ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ‘ಯೋಗ ಸಂಗಮ -2025’ ಕಾರ‍್ಯಕ್ರಮ ನಡೆಯಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳ 1500 ವಿದ್ಯಾರ್ಥಿಗಳು ಏಕಕಾಲದಲ್ಲಿ ಸಾಮಾನ್ಯ ಯೋಗ ಪ್ರೋಟೋಕಾಲನ್ನು ಅನುಸರಿಸಿ 45 ನಿಮಿಷಗಳ ಸಾಮೂಹಿಕ ಯೋಗ ಪ್ರದರ್ಶನವನ್ನು ನೀಡಿದರು. ದೇಶದ ಒಂದು ಲಕ್ಷಕ್ಕೂ ಅಧಿಕ ಭಾಗಗಳಲ್ಲಿ ಈ ಯೋಗ ಸಂಗಮ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಾದ ಅನಂತ ಕೃಷ್ಣ ಸಿ. ವಿ ಮತ್ತು ತ್ರಿಶಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ನ್ಯಾಚುರೋಪತಿ ವಿಭಾಗದ ಪ್ರಾಂಶುಪಾಲ ಡಾ. ವನಿತಾ ಶೆಟ್ಟಿ, ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ, ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ. ರೋಶನ್ ಪಿಂಟೋ, ಆಳ್ವಾಸ್ ಆಯುರ್ವೇದ ಕಾಲೇಜಿನ ಡಾ.ಸಜಿತ್ ಎಂ, ಆಳ್ವಾಸ್ ಫಾರ್ಮಸಿ ಕಾಲೇಜಿನ ಪ್ರಾಚರ‍್ಯ ಡಾ.ಮಂಜುನಾಥ ಸೆಟ್ಟಿ, ಆಳ್ವಾಸ್ ದೈಹಿಕ ಶಿಕ್ಷಣ ಸ್ನಾತಕೋತ್ತರ ಕಾಲೇಜಿನ ಡಾ. ಮಧು ಜಿ ಆರ್, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್, ಆಳ್ವಾಸ್ ನ್ಯಾಚುರೋಪತಿ ಕಾಲೇಜಿನ ಉಪ ಪ್ರಾಂಶುಪಾಲೆ ಹಾಗೂ ಯೋಗ ವಿಭಾಗದ ಮುಖ್ಯಸ್ಥ ಡಾ. ವಿದ್ಯಾ ನ್ಯಾಚುರೋಪತಿ ಮತ್ತು ಯೋಗ ವಿಭಾಗದ ಡೀನ್. ಡಾ.ಅರ್ಚನಾ ಇದ್ದರು.

2025-26 ನೇ ಸಾಲಿನ ಪದವಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಅಂಕುರ

Article Image

2025-26 ನೇ ಸಾಲಿನ ಪದವಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಅಂಕುರ

ಮೂಡುಬಿದಿರೆ: ಆಳ್ವಾಸ್ ಕಾಲೇಜು (ಸ್ವಾಯತ್ತ) ವತಿಯಿಂದ 2025-26 ನೇ ಸಾಲಿನ ಪದವಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ 'ಅಂಕುರ' ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಶಿಕ್ಷಣ ಸಂಸ್ಥೆಗಳು ಬಹುಮಹಡಿ ಕಟ್ಟಡಗಳಿದ್ದ ಮಾತ್ರಕ್ಕೇ ಶ್ರೇಷ್ಠ ವೆನಿಸಿಕೊಳ್ಳಲಾರವು. ಆ ಕಟ್ಟಡಗಳಿಗೆ ಜೀವಕಳೆ ವಿದ್ಯಾರ್ಥಿಗಳಿಂದ ಮಾತ್ರ ತುಂಬಲು ಸಾಧ್ಯ. ಅಂತಹ ವಿದ್ಯಾರ್ಥಿ ಸಮೂಹ ನೀವಾಗಬೇಕು. ಆಳ್ವಾಸ್ ನ ವಿದ್ಯಾರ್ಥಿಗಳೇ ‘ಆಳ್ವಾಸ್ ಬ್ರ್ಯಾಂಡ್’ ಎಂದರು. ವಿದ್ಯಾರ್ಥಿಗಳು ಪದವಿ ಕಾಲೇಜಿಗೆ ಸೇರುವ ಮೂಲ ಉದ್ದೇಶವನ್ನು ಅರಿಯಬೇಕು. ಆಳ್ವಾಸ್ ಶಿಕ್ಷಣ ಸಂಸ್ಥೆ ತನ್ನ ಸಮಕಾಲೀನ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ಪ್ರಪಂಚದ ಆಧುನಿಕ ಅಗತ್ಯಗಳಿಗೆ ತಕ್ಕಂತಹ ಜ್ಞಾನ ಮತ್ತು ಕೌಶಲಗಳನ್ನು ಸದಾ ನೀಡುತ್ತಿದೆ. ಸ್ವಾಯತ್ತ ಕಾಲೇಜಿನ ನೆಲೆಯಲ್ಲಿ ನಿತ್ಯ ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆ, ತಂತ್ರಜ್ಞಾನ, ಸಾಮಾಜಿಕ ಬದಲಾವಣೆಗಳಿಗೆ ತಕ್ಕಂತೆ ಪಠ್ಯ ಕ್ರಮವನ್ನು ರೂಪಿಸಲಾಗುತ್ತಿದೆ. ಇವು ವಿದ್ಯಾರ್ಥಿಗಳಲ್ಲಿ ವಾಸ್ತವಿಕ ಜ್ಞಾನ, ತಂತ್ರಜ್ಞಾನಾಧಾರಿತ ಕೌಶಲಗಳು, ಸೃಜನಾತ್ಮಕತೆ ಮತ್ತು ವಿಶ್ಲೇಷಣಾತ್ಮಕ ಚಿಂತನೆಯ ಸಾಮರ್ಥ್ಯಗಳನ್ನು ಬೆಳೆಸುತ್ತದೆ ಎಂದರು. ಆಳ್ವಾಸ್ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಪದವಿ ಹಂತದಲ್ಲಿ ಪೋಷಕರು ಮಕ್ಕಳ ಬೆಳೆವಣಿಗೆಯನ್ನು ಹತ್ತಿರದಿಂದ ಗಮನಿಸುವ ಕೆಲಸವನ್ನು ಮಾಡಬೇಕು. ಈ ಮೂರು ವರ್ಷ ಬರೀ ಶಿಕ್ಷಣ ಮಾತ್ರವಲ್ಲದೇ ಅದರ ಹೊರತಾಗಿ ಸಾಮರ್ಥ್ಯಗಳ ವೃದ್ಧಿಯತ್ತಾ ಗಮನಕೊಡಬೇಕು. ವಿದ್ಯಾರ್ಥಿಗಳು ದಿನಕ್ಕೆ ಕನಿಷ್ಠ ಎರಡು ಗಂಟೆಯಾದರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಕಾಲೇಜಿನೊಂದಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಸೇರಿಕೊಂಡು ಕೆಲಸ ಮಾಡಿದಾಗ ಅದ್ಭುತವನ್ನು ಸೃಷ್ಟಿಸಬಹುದು ಎಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜು (ಸ್ವಾಯತ್ತ) ಶೈಕ್ಷಣಿಕ ಕುಲಸಚಿವ ಡಾ. ಟಿ.ಕೆ . ರವೀಂದ್ರನ್, ಪರೀಕ್ಷಾಂಗ ಕುಲಸಚಿವ ಡಾ ನಾರಾಯಣ ಶೆಟ್ಟಿ, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ನಿರೂಪಿಸಿ, ವಂದಿಸಿದರು.

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Article Image

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು. ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಹೆಗ್ಗಡೆಯವರು ಶುಭ ಹಾರೈಸಿದರು. ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ತಾಲ್ಲೂಕುಗಳಲ್ಲಿ 44,119 ರೈತರನ್ನು ಪ್ರೇರೆಪಿಸಿ 1,00,254 ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಶೋಧನಾ ಕಾರ್ಯಾಗಾರ

Article Image

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಶೋಧನಾ ಕಾರ್ಯಾಗಾರ

ಉಜಿರೆ, ಜೂನ್ 18: ಭಾರತದ ಸಮೃದ್ಧ ಜ್ಞಾನ ಪರಂಪರೆಯ ಹಲವು ವಿಶೇಷತೆಗಳ ಸೊಗಡಿನ ರಕ್ಷಣೆಗೆ ಬೌದ್ಧಿಕ ಆಸ್ತಿ ಹಕ್ಕು ಸಹಾಯಕವಾಗುತ್ತದೆ ಎಂದು ನಿಟ್ಟೆ ಡೀಮ್ಡ್ ಟುಬಿ ಯುನಿವರ್ಸಿಟಿಯ ಎನ್‌ಎಂಎಎಂ ಇನ್ಸ್ಟಿಟೂಟ್ ಆಫ್ ಟೆಕ್ನಾಲಜಿ ಮಾನವಿಕ ವಿಭಾಗದ ಪ್ರಾಧ್ಯಾಪಕ ಡಾ.ರಾಮಕೃಷ್ಣ ಬಿ. ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸಂಶೋಧನೆ ಮತ್ತು ಅಭಿವೃದ್ಧಿ ಘಟಕವು ‘ಇನ್ನೋವೇಟ್ ಆ್ಯಂಡ್ ಪ್ರೊಟೆಕ್ಟ್: ಪೇಟೆಂಟ್ಸ್, ಟ್ರೇಡ್‌ಮಾರ್ಕ್ಸ್, ಪಬ್ಲಿಷಿಂಗ್ ರೈಟ್ಸ್’ ಕುರಿತು ಬುಧವಾರ ಆಯೋಜಿಸಿದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಪಾರಂಪರಿಕ ಜ್ಞಾನ ಅಗಾಧವಾದುದು. ಈ ಜ್ಞಾನದ ಆವರಣದಲ್ಲಿ ಲಭ್ಯವಾಗಿರುವ ಅಪರೂಪದ ಮಾದರಿಗಳನ್ನು ಕದ್ದು ತಮ್ಮದೆಂದು ಪ್ರತಿಪಾದಿಸುವ ಪ್ರಯತ್ನಗಳು ವಿಶ್ವಮಟ್ಟದಲ್ಲಿ ಆಗುತ್ತಿವೆ. ಇಂತಹ ಪ್ರಯತ್ನಗಳನ್ನು ತಡೆದು ಭಾರತದ್ದೇ ಆದ ಪಾರಂಪರಿಕ ಜ್ಞಾನದ ಅಸ್ಮಿತೆಯನ್ನು ಎತ್ತಿಹಿಡಿಯುವುದಕ್ಕೆ ಬೌದ್ಧಿಕ ಆಸ್ತಿ ಹಕ್ಕು ಪೂಕರವಾಗಿರುವುದು ವಿವಿಧ ಪ್ರಕರಣಗಳಲ್ಲಿ ದೃಢವಾಗಿದೆ ಎಂದರು. ಜಪಾನ್ ನಮ್ಮ ಗಾಯಿತ್ರಿ ಮಂತ್ರ ತನ್ನದೆಂದು ಹೇಳಿಕೊಂಡು ಪೇಟೆಂಟ್ ಪಡೆಯಲು ಮುಂದಾಗಿತ್ತು. ಅರಿಷಿಣದ ಚಿಕಿತ್ಸಕ ಗುಣದ ವಿಶೇಷತೆಯನ್ನು ಅರಿತು ಅಮೆರಿಕದವರು ತಮ್ಮದೆಂದು ವಾದಿಸಿ ಪೇಟೆಂಟ್ ಪಡೆಯಲು ಮುಂದಾಗಿದ್ದರು. ಅರೇಬಿಕ್ ಸಾಹಿತ್ಯದಲ್ಲಿ ಉಲ್ಲೇಖಿತ ವಿವರವೊಂದು ಅರಿಷಿಣ ಭಾರತದ್ದು ಎಂಬುದನ್ನು ಸಾಬೀತುಪಡಿಸಿತ್ತು. ಭಾರತದ ಜ್ಞಾನ ಪರಂಪರೆಯ ಒಳಗೆ ಲಭ್ಯವಿರುವ ಇಂತಹ ಹಲವು ಪ್ರಯೋಜನಕಾರಿ ಅಂಶಗಳನ್ನು ಪತ್ತೆ ಹಚ್ಚಿ ಅಭಿವೃದ್ಧಿ ಹೊಂದಿದ ದೇಶಗಳು ತಮ್ಮದನ್ನಾಗಿಸಿಕೊಳ್ಳುವ ಹುನ್ನಾರ ನಡೆಸುತ್ತಿವೆ. ಇಂತಹ ಹುನ್ನಾರಗಳಿಗೆ ತಡೆಯೊಡ್ಡುವ ಏಕೈಕ ಮಾರ್ಗ ಎಂದರೆ ಬೌದ್ಧಿಕ ಆಸ್ತಿ ಹಕ್ಕಿನ ಸಮರ್ಪಕ ಬಳಕೆ ಮತ್ತು ಅನ್ವಯಿಸಿಕೊಳ್ಳುವಿಕೆ ಎಂದು ಅವರು ತಿಳಿಸಿದರು. ಈಗಾಗಲೇ ಭಾರತೀಯ ಜ್ಞಾನ ಪರಂಪರೆಯ ವೈವಿಧ್ಯಮಯ ಅಂಶಗಳನ್ನು ಕಳೆದುಕೊಂಡಿದ್ದೇವೆ. ಇದೀಗ ಎಚ್ಚೆತ್ತುಕೊಳ್ಳುವ ಕಾಲ. ಮುಂಬರುವ ದಿನಗಳಲ್ಲಿ ನಮ್ಮ ಭಾರತೀಯ ಜ್ಞಾನದ ವಿಭಿನ್ನ ಅಂಶಗಳನ್ನು ಗೊತ್ತುಮಾಡಿಕೊಂಡು ಅವುಗಳ ಮೇಲೆ ಹಕ್ಕುಸ್ವಾಮ್ಯ ಸ್ಥಾಪಿಸುವ ಉಳಿದ ದೇಶಗಳ ಹುನ್ನಾರಗಳನ್ನು ತಡೆಯಬೇಕು. ಈ ನಿಟ್ಟಿನಲ್ಲಿ ಭಾರತ ಸರ್ಕಾರ ವಿಶೇಷ ನಿಗಾವಹಿಸಿ ಕಟ್ಟುನಿಟ್ಟಿನ ಹೆಜ್ಜೆಗಳನ್ನಿರಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ಶೈಕ್ಷಣಿಕ ಕಲಿಕೆಯೊಂದಿಗೆ ಸಂಶೋಧನಾತ್ಮಕ ಹೆಜ್ಜೆಗಳಿಗೂ ಹೆಚ್ಚಿನ ಆದ್ಯತೆ ನೀಡುವ ಟ್ರೆಂಡ್‌ಗೆ ಅನುಗುಣವಾಗಿ ಎಸ್.ಡಿ.ಎಂ ಸಂಶೋಧನೆ ಮತ್ತು ಅಭಿವೃದ್ಧಿ ಘಟಕವು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು. ದೇಶದ ಶೈಕ್ಷಣಿಕ ವಲಯವು ಸಂಶೋಧನೆಯನ್ನು ಪ್ರಧಾನ ಆದ್ಯತೆಯ ಭಾಗವಾಗಿ ಪರಿಗಣಿಸುತ್ತಿದೆ. ಇದನ್ನು ದೃಷ್ಟಿಯಲ್ಲಿರಿಸಿಕೊಂಡು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಸಂಶೋಧನೆಯ ಬಹು ಆಯಾಮಗಳನ್ನು ಪರಿಚಯಿಸುವ ಕಾರ್ಯಾಗಾರ, ವಿಚಾರ ಸಂಕಿರಣಗಳನ್ನು ಆಯೋಜಿಸುತ್ತಿದೆ ಎಂದರು. ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ನಿರ್ದೇಶಕಿ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ ಅವರು ಸ್ವಾಗತಿಸಿದರು. ಡಾ. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಘಟಕದ ಸಂಘಟನಾ ಕಾರ್ಯದರ್ಶಿ ಡಾ. ನೆಫಿಸತ್ ವಂದಿಸಿದರು. ಉದ್ಘಾಟನಾ ಸಮಾರಂಭದ ‘ಪೇಟೆಂಟಿಂಗ್ ಟು ಪ್ರೊಟೆಕ್ಟ್ ದ ಇಂಟಲೆಕ್ಚುವಲ್ ಪ್ರಾಪರ್ಟಿ, ಐಪಿ ಮ್ಯಾನೇಜ್‌ಮೆಂಟ್ ಫಾರ್ ಸ್ಟಾರ್ಟ್ಅಪ್ಸ್’ ಕುರಿತು ಡಾ.ರಾಮಕೃಷ್ಣ ಬಿ ವಿಚಾರಗಳನ್ನು ಮಂಡಿಸಿದರು.

ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

Article Image

ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಮೂಡುದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ ಗೌರವ ಸಲಹೆಗಾರ ಪುರುಷೋತ್ತಮ ಪೂಜಾರಿ, ಮೂಡಬಿದಿರೆ ಅನೇಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ಆಳ್ವಾಸ್ ಸಂಸ್ಥೆಯ ಮೂಲಕ ದೇಶಕ್ಕೆ ಕೊಡುಗೆಯಾಗಿ ನೀಡಿದೆ. ದಕ್ಷಿಣ ಕನ್ನಡದ ಜಿಲ್ಲೆಯ 8 ತಾಲೂಕುಗಳಲ್ಲಿ ಮೂಡುಬಿದಿರೆಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಾರ‍್ಯನಿರ್ವಹಿಸುತ್ತಿದೆ. ಮೂಡುಬಿದಿರೆಯಲ್ಲಿ ಅಸೋಸಿಯೇಶನ್ ನಿರ್ಮಾಣವಾಗುವುದರ ಮೂಲಕ ಕಬಡ್ಡಿಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ ಕೋಟ್ಯಾನ್ ಮಾತನಾಡಿ, ಹಿಂದಿನ ಕಾಲದಲ್ಲಿ ಹೆಚ್ಚಿನ ಖರ್ಚಿಲ್ಲದೆ ಆಡುತ್ತಿದ್ದ ಆಟ ಕಬಡ್ಡಿ. ಇದೊಂದು ಹಳ್ಳಿಯ ಕ್ರೀಡೆ. ಪ್ರೋಕಬ್ಬಡಿ ಬಂದ ನಂತರ ಇದರ ಖ್ಯಾತಿ ಹಾಗೂ ಆಟಗಾರರಿಗೆ ಮನ್ನಣೆ ಅಂತರಾಷ್ಟ್ರೀಯ ಮಟ್ಟದಲ್ಲಿ ಲಭಿಸುತ್ತಿದೆ. ಮೂಡುಬಿದಿರೆ ತಾಲೂಕಿನ ನೂತನ ಅಧ್ಯಕ್ಷರು, ಯುವಕರು ಹಾಗೂ ಹಿಡಿದ ಕೆಲಸವನ್ನು ಅಷ್ಟೇ ಆಸ್ಥೆಯಿಂದ ಮಾಡುವವರು. ಮುಂದಿನ ದಿನಗಳಲ್ಲಿ ಮೂಡುಬಿದಿರೆ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಖ್ಯಾತಿಗೊಳ್ಳಲಿ ಎಂದು ಆಶಿಸಿದರು. ತಾಲೂಕು ಕಬಡ್ಡಿ ಅಸೋಸಿಯೇಶನ್ ಮಹಾಪೋಷಕರು ಹಾಗೂ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ ನಾನೊಬ್ಬ ಕ್ರೀಡಾಪಟುವಿನ ಮಗ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ತನ್ನ ತಂದೆ 1926ರಲ್ಲಿ ಮೈಸೂರು ಮಹಾರಾಜ ಕಾಲೇಜಿನ ಕ್ರಿಕೆಟ್ ತಂಡದ ನಾಯಕತ್ವ ವಹಿಸಿದ್ದರು. 1929ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿಯವರೊಂದಿಗೆ ಕ್ರಿಕೆಟ್ ಆಡಿದ್ದರು. ಆ ಹಿನ್ನಲೆಯಿಂದ ನಾನು ಕ್ರೀಡಾಸಚಿವನಾಗಿದ್ದ ಸಂದರ್ಭದಲ್ಲಿ ಕ್ರೀಡಾ ಕ್ಷೇತಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಹಕಾರಿಯಾಯಿತು. ನಾವೆಲ್ಲ ರಾಜಕೀಯವನ್ನು ಬದಿಗಿಟ್ಟು ಕ್ರೀಡಾಪಟುಗಳಿಗೆ ಬೆಂಬಲವನ್ನ ನೀಡುವ ಕೆಲಸ ಮಾಡಬೇಕು. ಕ್ರೀಡೆಯಲ್ಲಿ ತೊಡಗಿಸಿಕೊಂಡು ಉತ್ತಮ ಭವಿಷ್ಯವನ್ನ ರೂಪಿಸಿಕೊಳ್ಳಬಹುದು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಹಾಗೂ ಮೂಡಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ನಿಯೋಜಿತ ಅಧ್ಯಕ್ಷ ವಿವೇಕ್ ಆಳ್ವ ಮಾತನಾಡಿ, ನಮ್ಮ ಸಂಸ್ಥೆ ಹಾಗೂ ಸಂಸ್ಥೆಯ ಅಧ್ಯಕ್ಷರು ಕ್ರೀಡೆಗೆ ನೀಡಿದ ಕೊಡುಗೆಯಿಂದ ನನಗೆ ಈ ಗೌರವ ಲಭಿಸಿದೆ. ವಿವಿಧ ಸಂಘ ಸಂಸ್ಥೆಗಳಿಂದ ಉನ್ನತ ಹುದ್ದೆಯ ಅವಕಾಶಗಳು ಬಂದಾಗ ಸದಾ ನಿರಾಕರಿಸುತ್ತಾ ಬಂದ ನಾನು, ಈ ಹುದ್ದೆಯನ್ನು ಪ್ರೀತಿಯಿಂದ ಒಪ್ಪಿಕೊಂಡಿದ್ದೇನೆ. ದಕ್ಷಿಣ ಕನ್ನಡದಲ್ಲಿ ಕಬಡ್ಡಿಗೆ ವಿಶೇಷ ಸ್ಥಾನವಿದೆ. ಈ ಕ್ರೀಡೆಯ ಮೂಲಕ ಯುವ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವ ಕೆಲಸವನ್ನು ನಾವೆಲ್ಲ ಜೊತೆಯಾಗಿ ಮಾಡಬೇಕು. ಮುಂದಿನ ದಿನಗಳಲ್ಲಿ ಮೂಡುಬಿದಿರೆಯ 30 ಶಾಲೆಗಳ ವಿದ್ಯಾರ್ಥಿಗಳಿಗೆ ಕಬಡ್ಡಿ ಕ್ಷೇತ್ರಕ್ಕೆ ಬೇಕಾದ ಅಗತ್ಯ ತರಬೇತಿ ಹಾಗೂ ಸೌಲಭ್ಯವನ್ನು ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು. ಈ ಹಿನ್ನಲೆಯಲ್ಲಿ ಶಾಸಕರಾದಿಯಾಗಿ ಎಲ್ಲಾ ಮಹಾಪೋಷಕರು ಸಹಕಾರವನ್ನು ನೀಡುವಂತೆ ಕೋರಿಕೊಂಡರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ ಕರ್ಣ, ಮಾಹಾಪೋಷಕರುಗಳಾದ ಶ್ರೀಪತಿ ಭಟ್, ತಿಮ್ಮಯ ಶೆಟ್ಟಿ, ಸುನಿಲ್ ಆಳ್ವ, ನಾರಾಯಣ ಪಿಎಂ, ಪ್ರೇಮನಾಥ ಶೆಟ್ಟಿ, ಅಬುಲಾಲ್, ಸುಚರಿತ ಶೆಟ್ಟಿ, ಸುದರ್ಶನ್ ಇದ್ದರು. ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಶಿಯೇಶನ್ ಸದಸ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಮೂಡಬಿದಿರೆ ತಾಲೂಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಕಾರ್ಯಧ್ಯಕ್ಷ ಪ್ರಮೋದ್ ಸ್ವಾಗತಿಸಿ, ಕಾರ್ಯದರ್ಶಿ ಹಂಸವತಿ ಸಿಎಚ್ ವಂದಿಸಿ, ಸದಸ್ಯ ನವೀನ್ ಅಂಬೂರಿ ನಿರೂಪಿಸಿದರು.

ಆಳ್ವಾಸ್: ಮೂರು ದಿನಗಳ ಯೂತ್ ಯೋಗ ಫೆಸ್ಟ್

Article Image

ಆಳ್ವಾಸ್: ಮೂರು ದಿನಗಳ ಯೂತ್ ಯೋಗ ಫೆಸ್ಟ್

ಮಿಜಾರು: ಯೋಗದಲ್ಲಿ ಮುಖ್ಯವಾಗಿ ಎರಡು ಅಂಶಗಳು. ಒಂದು ತತ್ವಶಾಸ್ತ್ರ ಇನ್ನೊಂದು ಅಭ್ಯಾಸ. ಆದರೆ ಈ ಎರಡು ಅಂಶಗಳು ಒಟ್ಟಿಗೆ ಮೇಳೈಸಬೇಕಾದಾಗ, ಮೊದಲು ತತ್ತ್ವಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಅಭ್ಯಾಸ ಮಾಡಲು ಮೊದಲು ಯೋಗವನ್ನು ಸರಿಯಾಗಿ ಅರ್ಥ ಮಾಡಿಕೊಂಡಿರಬೇಕು ಎಂದು ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಉಪಪ್ರಾಂಶುಪಾಲೆ ಹಾಗೂ ಡೀನ್ ಡಾ. ಸುಜಾತ ದಿನೇಶ್ ಹೇಳಿದರು. ಆಳ್ವಾಸ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರ ಪರಿಷತ್ತು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಇವುಗಳ ಜಂಟಿ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 16 ರಿಂದ 19ರವರೆಗೆ `ಯೂತ್ ಯೋಗ ಫೆಸ್ಟಿವಲ್' ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನ್ಯಾಚುರೋಪಥಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಬರುವ ಅಡೆತಡೆಗಳನ್ನು ಯೋಗತತ್ವಶಾಸ್ತ್ರ ಸಿದ್ಧಾಂತಗಳ ನೆಲೆಯಲ್ಲಿ ಪರಿಹರಿಸಿಕೊಳ್ಳಬೇಕು. ನಮ್ಮ ಭವಿಷ್ಯವನ್ನು ನಮ್ಮ ವರ್ತಮಾನ ನಿರ್ಧರಿಸುತ್ತದೆ. ಆದುದರಿಂದ ನಾವು ತಿನ್ನುವ ಆಹಾರ ಹಾಗೂ ನಿದ್ರೆ ನಮ್ಮ ಭವಿಷ್ಯದ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಯೋಗ ಅಭ್ಯಾಸ ಮಾಡುವುದರಿಂದ ನಮ್ಮ ಆರೋಗ್ಯದಲ್ಲಿ ಧನಾತ್ಮಕ ಶಕ್ತಿ ಹೆಚ್ಚಳವಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಕೇಂದ್ರೀಯ ಸಂಶೋಧನಾ ಮಂಡಳಿ ನಾಗಮಂಡಲ ಇಲ್ಲಿನ ಸಂಶೋಧನಾ ಅಧಿಕಾರಿ ಡಾ. ನಿತೀಶ್ ಎಂ ಕೆ, ಈ ವರ್ಷ ಭಾರತ ಆಯುಷ್ ಸಚಿವಾಲಯವು ಅಂತರರಾಷ್ಟ್ರೀಯ ಯೋಗ ದಿನದ 10 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. 2014ರಲ್ಲಿ ಪ್ರಧಾನಿಯವರಿಂದ ಈ ಅಂತರರಾಷ್ಟ್ರೀಯ ಯೋಗ ದಿನವನ್ನು ಪ್ರಾರಂಭಿಸಲಾಯಿತು. ಇಂದು ಯೋಗವು 190ಕ್ಕೂ ಹೆಚ್ಚಿನ ದೇಶಗಳಲ್ಲಿ ಜೀವನ ಪದ್ದತಿಯ ಭಾಗವಾಗಿ ಆಳವಡಿಸಿಕೊಳ್ಳಲಾಗಿದೆ ಮತ್ತು 144 ದೇಶಗಳು ಪ್ರಕೃತಿ ಚಿಕಿತ್ಸೆಯನ್ನು ಸ್ವೀಕರಿಸಿವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ 2022ರ ಯೋಗಸಮೀಕ್ಷೆಯ ಪ್ರಕಾರ ಯುಎಸ್‌ನಲ್ಲಿ 38.4 ಮಿಲಿಯನ್ ಜನರು ಯೋಗವನ್ನು ಅನುಸರಿಸುತ್ತಿದ್ದಾರೆ. ಸಾಮನ್ಯವಾಗಿ ಜನರು ಒತ್ತಡ ನಿವಾರಣೆ, ನಮ್ಯತೆ, ಮಾನಸಿಕ ಸ್ಪಷ್ಟತೆಗೆ ಯೋಗವನ್ನು ಅನುಸರಿಸುತ್ತಾರೆ. ಆದರೆ ಯೋಗದೊಂದಿಗೆ ನಾವು ತಿನ್ನುವ ಆಹಾರ ಕೂಡಾ ಪರಿಣಾಮ ಬೀರಬಲ್ಲದು. ಯೋಗವನ್ನು ಅನುಸರಿಸುವುದರ ಜೊತೆಯಲ್ಲಿ, ಆಹಾರ ಕ್ರಮವನ್ನು ಸರಿಯಾಗಿ ಪಾಲಿಸಬೇಕು ಎಂದರು. ಕಾರ್ಯಕ್ರಮದ ಆರಂಭದಲ್ಲಿ ಪತಂಜಲಿ ಮಹರ್ಷಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮೂರು ದಿನಗಳ ಕಾಲ ನಡೆದ ಯೂತ್ ಯೋಗ ಫೆಸ್ಟಿವಲ್‌ನಲ್ಲಿ ಯೋಗ ಒಲಿಂಪಿಯಾಡ್, ಯೋಗ ಸ್ಕಿಟ್, ಯೋಗ ಡ್ಯಾನ್ಸ್ ಫ್ಯೂಷನ್, ಯೋಗ ಡಿಬೇಟ್, ಯೋಗ ರೀಲ್ಸ್, ಯೋಗ ಗಿಬ್ಲಿ, ಯೋಗ ಪೋಸ್ಟರ್ ಸ್ಪರ್ಧೆಗಳು ನಡೆಯಲಿವೆ. ಎಸ್‌ಡಿಎಮ್ ಕಾಲೇಜ್ ಉಜಿರೆ, ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು, ಶಾರದಾ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು, ಮುನಿಯಾಲ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಹಾಗೂ ಆಳ್ವಾಸ್ ಶಾಲೆ ಹಾಗೂ ಪದವಿ ಕಾಲೇಜುಗಳ ಸುಮಾರು 200 ರಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ, ಹಾಗೂ ಉಪಪ್ರಾಂಶುಪಾಲೆ ಡಾ. ವಿದ್ಯಾರಾಣಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸರೀನಾ ರೊಡ್ರಿಗಸ್ ನಿರೂಪಿಸಿದರು.

ಡರ್ಮಾ ಅಡ್ವಾನ್ಸ್ 2025ರ ಮೊದಲ ದಿನದ ಕಾರ್ಯಕ್ರಮ

Article Image

ಡರ್ಮಾ ಅಡ್ವಾನ್ಸ್ 2025ರ ಮೊದಲ ದಿನದ ಕಾರ್ಯಕ್ರಮ

ಸತ್ತೂರು, ಧಾರವಾಡ: ಡರ್ಮಾ ಅಡ್ವಾನ್ಸ್ 2025ರ ಮೊದಲ ದಿನದ ಕಾರ್ಯಕ್ರಮ ಜೂನ್ 14ರಂದು ಧಾರವಾಡದ ಎಸ್ಡಿಎಂ ಮೆಡಿಕಲ್ ಸೈನ್ಸಸ್ ಅಂಡ್ ಹಾಸ್ಪಿಟಲ್ (SDMCMSH) ನಲ್ಲಿ ಆರಂಭವಾಯಿತು. ಈ ಕಾರ್ಯಕ್ರಮವು ವಿಶೇಷವಾಗಿ ಸ್ನಾತಕೋತ್ತರ ಚರ್ಮರೋಗ ತರಬೇತಿಗೆ ಹೋಲಿಸಿದ ಶೈಕ್ಷಣಿಕ ಕೇಂದ್ರೀಕೃತತೆಗೆ ಸಾಕ್ಷಿಯಾದ ದಿನವಾಯಿತು. ದಿನವು ಕ್ಲಿನಿಕಲ್ ಜ್ಞಾನವನ್ನು ಗಟ್ಟಿಗೊಳಿಸುವುದರೊಂದಿಗೆ ಪರೀಕ್ಷಾ ಸಿದ್ಧತೆಯನ್ನು ಹೆಚ್ಚಿಸುವ ಗಂಭೀರವಾದ, ಪರೀಕ್ಷಾ ಆಧಾರಿತ ಅಧಿವೇಶನಗಳಿಂದ ಕೂಡಿತ್ತು. ಕರ್ನಾಟಕದ ಎಲ್ಲೆಡೆ ಹಾಗೂ ಇತರ ರಾಜ್ಯಗಳಿಂದ ಬಂದ ಸ್ನಾತಕೋತ್ತರ ವಿದ್ಯಾರ್ಥಿಗಳು, ಪ್ರತಿನಿಧಿಗಳು ಮತ್ತು ಬೋಧಕವರ್ಗದವರು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಅಧಿವೇಶನಗಳು ಪರಸ್ಪರ ಸಂವಾದಾತ್ಮಕವಾಗಿದ್ದು, ಪ್ರಕರಣಾಧಾರಿತವಾಗಿದ್ದವು ಮತ್ತು ಇತ್ತೀಚಿನ ಪರೀಕ್ಷಾ ಮಾದರಿಗಳಿಗೆ ತಕ್ಕಂತೆ ರೂಪುಗೊಂಡಿದ್ದವು. ಇದರಿಂದಾಗಿ ಭಾಗವಹಿಸಿದವರಿಗೆ ಸಮೃದ್ಧವಾದ ಹಾಗೂ ಪ್ರಾಯೋಗಿಕ ಅಧ್ಯಯನ ಅನುಭವವನ್ನು ಒದಗಿಸಿತು. ಈ ಕಾರ್ಯಕ್ರಮವನ್ನು ಈ ಕೆಳಗಿನ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಔಪಚಾರಿಕವಾಗಿ ಉದ್ಘಾಟಿಸಲಾಯಿತು: ಡಾ. ನಿರಂಜನ್ ಕುಮಾರ್, ಉಪಕುಲಪತಿ, ಎಸ್ಡಿಎಂ ವಿಶ್ವವಿದ್ಯಾಲಯ; ಡಾ. ಚಿದೇಂದ್ರ ಶೆಟ್ಟರ್, ರಿಜಿಸ್ಟ್ರಾರ್, ಎಸ್ಡಿಎಂ ವಿಶ್ವವಿದ್ಯಾಲಯ; ಡಾ. ವಿಜಯ ಕುಲಕರ್ಣಿ, ಪ್ರಾಚಾರ್ಯರು, SDMCMSH; ಡಾ. ನವೀನ್ ಕೆ. ಎನ್., ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಚರ್ಮರೋಗ ವಿಭಾಗ, SDMCMSH; ಡಾ. ಮಂಜುನಾಥ ಹುಲಿಮಣಿ, ಅಧ್ಯಕ್ಷರು, IADVL ಕರ್ನಾಟಕ; ಡಾ. ಮಹೇಶ್ ಕುಮಾರ್, ಗೌರವ ಕಾರ್ಯದರ್ಶಿ, IADVL ಕರ್ನಾಟಕ; ಡಾ. ಎಸ್. ಬಿ. ಅಥಣಿಕರ್, ಆಯೋಜನಾ ಸಹ-ಅಧ್ಯಕ್ಷರು; ಡಾ. ಶ್ವೇತಾ ಆರ್. ಪ್ರಭು, ಆಯೋಜನಾ ಕಾರ್ಯದರ್ಶಿ ಮತ್ತು ಇತರ ಗಣ್ಯರುಯವರ ಸಾನ್ನಿಧ್ಯವು ಕಾರ್ಯಕ್ರಮಕ್ಕೆ ಗೌರವ ಹಾಗೂ ಮಹತ್ವವನ್ನು ನೀಡಿತು. ಅತ್ಯುತ್ತಮ ಭಾಗವಹಿಸುವಿಕೆ, ಶೈಕ್ಷಣಿಕ ಕಟ್ಟುನಿಟ್ಟು ಮತ್ತು ಗುರಿಯುತ ವಿಷಯ ವಸ್ತುಗಳೊಂದಿಗೆ, ಮೊದಲ ದಿನವೇ ಈ ಸಮಾವೇಶದ ಮುಂದಿನ ದಿನಗಳಿಗೊಂದು ಶಕ್ತಿಯುತ ಹಾಗೂ ಪ್ರೇರಣಾದಾಯಕ ಶೈಲಿಯನ್ನು ಸ್ಥಾಪಿಸಿತು.

ಎಕ್ಸಲೆಂಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Article Image

ಎಕ್ಸಲೆಂಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ನೂತನ್ ಕೃಷ್ಣ 599 (99.9328752), ಖುಷಿ ವಿನಯ್ ರಾಚೋಟಿ 588 (99.8864355), ರೋಹಿತ್ ಕಾಮತ್ 582 (99.8504968), ಸೋಹನ್ ಯಡಾಲ್ 572 (99.7700194), ಲಿಖಿತ್ ಸಿ ಪಿ 570 , ಶ್ರೇಯಸ್ ಹೆಚ್ ಎಸ್ 547, ಧ್ರುವ ಎಸ್ ಪಿ 536 , ಹೆಚ್ ಎ0 ದೇವಸೇನ್ 533, ಚಿನ್ಮಯಿ ಕೆ ಎಲ್ 529, ಚೇತನ್ ಕೆ ಎಸ್ 523, ನಮೃತಾ ಕೆ 518, ಪ್ರೀತಮ್ ಗೌಡ 516, ಮನೋಜ್ ಕೆ 514, ಪವನ್ ಗೌಡ 512, ಪ್ರತ್ಯೂಶ್ ಬಿ ಪಿ 508, ಸಮೃದ್ಧಿ ಎ ಎ0 507, ಲೇಖನ್ ಕುಮಾರ್ ಎ0 ಎಸ್ 506 ಯಶಸ್ ನಾಯ್ದು 502 , ಸ0ಪ್ರೀತ್ ಸಿ 500 ಅಂಕಗಳನ್ನು ಗಳಿಸಿರುತ್ತಾರೆ ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾ0ತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ಎಸ್.ಡಿ.ಎಂ. ಆರೋಗ್ಯ ಸಂವಾದಕ್ಕೆ ಸಾವಿರ ಸಂಚಿಕೆಯ ಸಂಭ್ರಮ

Article Image

ಎಸ್.ಡಿ.ಎಂ. ಆರೋಗ್ಯ ಸಂವಾದಕ್ಕೆ ಸಾವಿರ ಸಂಚಿಕೆಯ ಸಂಭ್ರಮ

ಪ್ರತೀ ಮಂಗಳವಾರ ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ಸಂಜೆ 7.00ರಿಂದ 7.30ರ ಕೃಷಿರಂಗ ಕಾರ್ಯಕ್ರಮದಲ್ಲಿ ಮೂಡಿ ಬರುವ ಎಸ್.ಡಿ.ಎಂ. ಆಸ್ಪತ್ರೆ ಪ್ರಾಯೋಜಿತ ಕಾರ್ಯಕ್ರಮವೇ ಎಸ್.ಡಿ.ಎಂ. ಆರೋಗ್ಯ ಸಂವಾದ. 2006 ಎಪ್ರಿಲ್ ತಿಂಗಳಲ್ಲಿ ಆರಂಭವಾದ ಈ ಆರೋಗ್ಯ ಸಂವಾದ ಕಾರ್ಯಕ್ರಮವು ಕಳೆದ 20 ವರ್ಷಗಳಲ್ಲಿ ಒಂದೂ ಮಂಗಳವಾರ ತಪ್ಪದೆ ಜನರಿಗೆ ಆರೋಗ್ಯ ಸೇವಾ ಸಲಹೆಯನ್ನು ನೀಡುತ್ತಾ ಬಂದಿದೆ. 2003-04ರಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪನೆಗೊಂಡಾಗ ಆಕಾಶವಾಣಿ ಧಾರವಾಡ ಕೇಂದ್ರದವರ ಕೋರಿಕೆಯ ಮೇರೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಆರೋಗ್ಯ ಸಂವಾದ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಇಲ್ಲಿಯವರೆಗೆ ನಿರಂತರವಾಗಿ ನಡೆದು ಬಂದ ಈ ಆರೋಗ್ಯ ಸಂವಾದ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಆಸ್ಪತ್ರೆಯ ನೂರಾರು ವೈದ್ಯರುಗಳಿಂದ ಉತ್ತರ ಕರ್ನಾಟಕದ ಸಾವಿರಾರು ಮಂದಿ ತಮ್ಮ ಆರೋಗ್ಯ ಸಮಸ್ಯೆಗೆ ಪರಿಹಾರವನ್ನು ಕಂಡುಕೊಂಡಿದ್ದಾರೆ. ಇದೀಗ ನಿರಂತರ ವಿಂಶತಿ (20ನೇ) ವರ್ಷಕ್ಕೆ ಪಾದಾರ್ಪಣೆ ಮಾಡಿ, ಇದೇ ಜೂನ್ 17, 2025ಕ್ಕೆ 1000ನೇ ಸಂಚಿಕೆಯಾಗಿ ಮೂಡಿ ಬರುತ್ತಿರುವ ಕಾರ್ಯಕ್ರಮ ದೇಶದ ಆಕಾಶವಾಣಿ ಕೇಂದ್ರಗಳಲ್ಲೇ ಇನ್ನೊಂದಿಲ್ಲ ಎಂದರೆ ತಪ್ಪಾಗಲಾರದು. ಇದರ ಪ್ರಯುಕ್ತ ದಿನಾಂಕ 17 ಜೂನ್, 2025ರಂದು ಮದ್ಯಾಹ್ನ 12.00ರಿಂದ 1.00ಗಂಟೆಯವರೆ ವಿಶೇಷ ನೇರ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆಯೆಂದು ಈ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಯೋಗಪಟುಗಳಿಗೆ 8 ಚಿನ್ನ

Article Image

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಯೋಗಪಟುಗಳಿಗೆ 8 ಚಿನ್ನ

ಮೂಡುಬಿದಿರೆ: ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಸಬ್‌ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ - ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ - ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ - ಕಲಾತ್ಮಕ ಯೋಗಾಸನ ಹಾಗೂ ಪೃಥ್ವಿಚಾರ್ - ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗಿಯರ ವಿಭಾಗದಲ್ಲಿ ಹಿಮಜ - ಸಂಪ್ರದಾಯಿಕ ಯೋಗಾಸನ ಹಾಗೂ ಅನನ್ಯ ಗುರವ್ - ಕಲಾತ್ಮಕ ಯೋಗಾಸನದಲ್ಲಿ ಚಿನ್ನ, ಸೀನಿಯರ್ ಹುಡುಗಿಯರ ವಿಭಾಗದಲ್ಲಿ ನಿರ್ಮಲ ಸುಭಾಷ್ ಕೊಡ್ಲಿಕರ್ - ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆಯುವುದರ ಮೂಲಕ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದರು. ಪದಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

ಎಸ್.ಡಿ.ಎಂ ವೃತ್ತಿಪರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Article Image

ಎಸ್.ಡಿ.ಎಂ ವೃತ್ತಿಪರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಉಜಿರೆ: ಯುವಕರ ಆಸಕ್ತಿಗೆ ಅನುಗುಣವಾದ ಉದ್ಯೋಗಾವಕಾಶಗಳ ಲಭ್ಯತೆ ಮತ್ತು ಸದ್ಭಳಕೆಯಿಂದ ಭಾರತವು ವಿವಿಧ ರಂಗಗಳಲ್ಲಿ ವಿಶ್ವಮಟ್ಟದ ಸ್ಪರ್ಧೆಯನ್ನೊಡ್ಡಿ ಮುಂಚೂಣಿ ಸ್ಥಾನ ಗಳಿಸಬಹುದು ಎಂದು ಧರ್ಮಸ್ಥಳದ ಎಸ್‌ಕೆಡಿಆರ್‌ಡಿಪಿ ಬಿ.ಸಿ ಟ್ರಸ್ಟ್ ಸಿ.ಇ.ಒ ಅನಿಲ್ ಕುಮಾರ್ ಎಸ್.ಎಸ್‌. ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ರಿಲಯನ್ಸ್ ಫೌಂಡೇಶನ್ ಸಹಯೋಗದಲ್ಲಿ ಆಯೋಜಿತ ಮೂರು ದಿನಗಳ ವೃತ್ತಿಪರತರಬೇತಿ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆ ಪೂರಕ ಕೌಶಲ್ಯವಿಲ್ಲದೆ ಉದ್ಯೋಗ ಕ್ಷೇತ್ರಕ್ಕೆ ಕಾಲಿಟ್ಟರೆ ವೃತ್ತಿಪರತೃಪ್ತಿ ಸಾಧ್ಯವಾಗುವುದಿಲ್ಲ. ಕೌಶಲ್ಯದ ಅಭಾವವು ವ್ಯಕ್ತಿಯ ವಿಕಾಸವನ್ನುತಡೆಯುವುದಷ್ಟೇ ಅಲ್ಲ, ದೇಶದ ಉತ್ಪಾದಕತೆ ಮತ್ತು ನಾವೀನ್ಯತೆಯ ಮೇಲೆಯೂ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಕೆಲ ಕಾರ್ಪೊರೇಟ್ ಸಂಸ್ಥೆಗಳು ವಿದ್ಯಾರ್ಥಿಗಳನ್ನು ವಿವಿಧ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳುತ್ತಿವೆ. ಕಡಿಮೆ ವೇತನ, ಉಚಿತ ಇಂಟರ್ನ್ಷಿಪ್ ಹೆಸರಲ್ಲಿ ಮೂಲಭೂತ ಅಗತ್ಯಗಳನ್ನು ಪೂರೈಸದೇ ಅಗತ್ಯ ಅವಧಿಗಿಂತ ಹೆಚ್ಚಾಗಿ ದುಡಿಸಿಕೊಳ್ಳಲಾಗುತ್ತಿದೆ. ಸ್ಪಷ್ಟ ವೃತ್ತಿಪರ ಮಾರ್ಗದರ್ಶನವಿಲ್ಲದ್ದರಿಂದ ಈ ರೀತಿಯ ಶೋಷಣೆಗಳಾಗುತ್ತವೆ. ಈ ಬಗೆಯ ಶೋಷಣೆಯು ಭವಿಷ್ಯದಲ್ಲಿ ಸಮರ್ಥ ಯುವಕರ ಹಿನ್ನಡೆಗೆ ಕಾರಣವಾಗುತ್ತದೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಂಗಳೂರಿನ ಮ್ಯಾಜಿಕ್ ಬಸ್ ಫೌಂಡೇಶನ್ ಎಂಸಿಎಸ್‌ಆರ್ ಪ್ರಾಜೆಕ್ಟ್ ಮ್ಯಾನೇಜರ್ ಧವನ್‌ಗೌಡ ಮಾತನಾಡಿದರು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರಲ್ಲಿನ ವ್ಯಾವಹಾರಿಕ ಕೌಶಲ್ಯ ಹಾಗೂ ಸಾಫ್ಟ್ ಸ್ಕಿಲ್ಸ್ ಅಭಿವೃದ್ಧಿಗೆ ಒತ್ತು ನೀಡುವುದು ಬಹಳ ಅಗತ್ಯವಾಗಿದೆ. ಸಮಾಜಕಾರ್ಯ ವೃತ್ತಿಯು ನೇರವಾಗಿ ಜನರಜೊತೆ ಸಂಪರ್ಕ ಹೊಂದಿರುವ ಕ್ಷೇತ್ರ. ವಿದ್ಯಾರ್ಥಿಗಳು ಉತ್ತಮಗ್ರಹಿಸುವಿಕೆ, ಸಂವೇದನೆ, ಸ್ಪಷ್ಟ ಸಂವಹನ ಕೌಶಲ್ಯ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸಮಯ ನಿರ್ವಹಣೆ, ಸಮಸ್ಯೆ ಪರಿಹಾರ ಗುಣ ಮತ್ತು ನಾಯಕತ್ವದ ಗುಣಗಳನ್ನು ಹೊಂದಿರುವುದು ಬಹುಅಗತ್ಯವಾಗಿದೆ ಎಂದರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಪುಸ್ತಕ ಜ್ಞಾನವಷ್ಟೇ ಮುಖ್ಯವಲ್ಲ. ಆತ್ಮವಿಶ್ವಾಸ ಹಾಗೂ ನಿರ್ಧಾರ ತೆಗೆದುಕೊಳ್ಳುವ ಧೈರ್ಯವು ವ್ಯಕ್ತಿತ್ವದ ಅವಿಭಾಜ್ಯ ಅಂಶಗಳು. ವೃತ್ತಿಪರ ಕೌಶಲ್ಯತರಬೇತಿ ಕಾರ್ಯಾಗಾರಗಳಿಂದ ಈ ಆತ್ಮವಿಶ್ವಾಸ, ಧೈರ್ಯ ಸಾಧ್ಯವಾಗುತ್ತದೆ ಎಂದರು. ವಿದ್ಯಾರ್ಥಿಗಳಲ್ಲಿ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಲು ತರಬೇತಿ ಕಾರ್ಯಾಗಾರಗಳು, ಪ್ರಾಯೋಗಿಕ ಚಟುವಟಿಕೆಗಳು ಹಾಗೂ ಕ್ಷೇತ್ರಕಾರ್ಯದ ಅನುಭವಗಳು ಸಹಾಯಕವಾಗುತ್ತವೆ. ವೃತ್ತಿಜೀವನದ ಸಾಮರ್ಥ್ಯವನ್ನು ರೂಢಿಸುತ್ತವೆ. ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ. ರವಿಶಂಕರ್‌ ಕೆ.ಆರ್. ಉಪಸ್ಥಿತರಿದ್ದರು. ಡಾ. ಅತುಲ್ ಎಸ್. ಸೆಮಿತ್ ಸ್ವಾಗತಿಸಿದರು. ಸ್ವಾತಿ ಬಿ. ಸ್ವಾಗತಿಸಿದರು, ಡಾ. ದಾನೇಶ್ವರಿ ವಂದಿಸಿದರು.

ಆಳ್ವಾಸ್: ವರ್ಷದ 3ನೇ ಉಚಿತ ನೇತ್ರ ತಪಾಸಣೆ

Article Image

ಆಳ್ವಾಸ್: ವರ್ಷದ 3ನೇ ಉಚಿತ ನೇತ್ರ ತಪಾಸಣೆ

ವಿದ್ಯಾಗಿರಿ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವರ್ಷದ ಮೂರನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಶಿಬಿರದ ಉದ್ಘಾಟನಾ ಕ್ರಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ, ಕಳೆದ ಬಾರಿ ವಿವಿಧ ಸಮುದಾಯಗಳ ಸಹಯೋಗದಲ್ಲಿ 9 ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ನಡೆಸಲಾಗಿತ್ತು. ಇದರಲ್ಲಿ 1478 ಜನರು ಪಾಲ್ಗೊಂಡು, 784 ಜನರಿಗೆ ಉಚಿತ ಕನ್ನಡಕ ಹಾಗೂ 109 ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಕೈಗೊಳ್ಳಲಾಗಿದೆ ಎಂದರು. ಜೂನ್ 16ಕ್ಕೆ ಮುಂದಿನ ಹಂತದ ಉಚಿತ ನೇತ್ರ ತಪಾಸಣಾ ಶಿಬಿರವು ನಡೆಯಲಿದೆ ಎಂದು ತಿಳಿಸಿದರು. ಈ ಬಾರಿಯ ಒಟ್ಟು ಮೂರು ಹಂತದ ಶಿಬಿರಗಳಲ್ಲಿ 348 ಮಂದಿ ಭಾಗಿಯಾಗಿ 178 ಜನರು ಉಚಿತ ಕನ್ನಡಕ ಪಡೆಯಲು ಹಾಗೂ 39 ಜನರು ಶಸ್ತ್ರ ಚಿಕಿತ್ಸೆಯನ್ನು ಪಡೆಯಲು ಹೆಸರು ನೋಂದಾಯಿಸಿಕೊಂಡರು. ಕಾರ್ಯಕ್ರಮದಲ್ಲಿ ಮಂಗಳೂರಿನ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹ ಪ್ರಾಧ್ಯಾಪಕಿ ಡಾ. ಆಕಾಂಕ್ಷ ಶೆಟ್ಟಿ, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಸಜಿತ್ ಎಂ, ಮೂಡುಬಿದಿರೆಯ ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ, ಮೂಡುಬಿದಿರೆಯ ಭಾರತೀಯ ಜೈನ ಮಿಲನ್ ಕೋಶಾಧಿಕಾರಿ ಪುಷ್ಪರಾಜ್ ಜೈನ್, ಜಂಟಿ ಕಾರ್ಯದರ್ಶಿ ಅನಂತವೀರ್ ಜೈನ್, ಅಶ್ವಥ್ಥಪುರದ ಶ್ರೀಸೀತಾರಾಮಚಂದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣಮೂರ್ತಿ, ಮರಾಠಿ ಸಮಾಜ ಸೇವಾ ಸಂಘದ ಮೂಡುಬಿದಿರೆಯ ಅಧ್ಯಕ್ಷ ರಾಮಚಂದ್ರ ಕೆಂಬಾರೆ, ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಶೀನ ಎಂ, ಮಿಜಾರು-ಎಡಪದವು ಗಾಣಿಗ ಯಾನೆ ಸಫಲಿಗ ಸೇವಾ ಸಂಘದ ಅಧ್ಯಕ್ಷ ಭಾಸ್ಕರ ಸಫಲಿಗ, ಯುವವಾಹಿನಿ ಮೂಡುಬಿದಿರೆ ಘಟಕದ ಉಪಾಧ್ಯಕ್ಷ ವಿದೇಶ ಎಂ ಉಪಸ್ಥಿತರಿದ್ದರು. ಕಾರ‍್ಯಕ್ರಮವನ್ನು ಕಿರಿಯ ವೈದ್ಯ ಡಾ ಸುಮಂತ್ ನಿರ್ವಹಿಸಿದರು.

ಧಾರವಾಡ: ವಿಶ್ವ ಪರಿಸರ ದಿನಾಚರಣೆ

Article Image

ಧಾರವಾಡ: ವಿಶ್ವ ಪರಿಸರ ದಿನಾಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು ಫಿಸಿಯೋಥೆರಪಿ ಮತ್ತು ನರ್ಸಿಂಗ್ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ಎಸ್.ಡಿ.ಎಂ. ಫಿಸಿಯೋಥೆರಪಿ - ನರ್ಸಿಂಗ್ ಕಾಲೇಜಿನಲ್ಲಿ "ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ ಹಾಡುವುದು” ಎಂಬ ಧ್ಯೆಯೆಯೊಂದಿಗೆ “ವಿಶ್ವ ಪರಿಸರ ದಿನ”ವನ್ನು ಆಚರಿಸಲಾಯಿತು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ವೈದ್ಯಕೀಯ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಪರಿಸರ ತಜ್ಞರಾದ ಡಾ. ಮೂಕ್ಕಯ್ಯಸ್ವಾಮಿ ವಿ. ಕಳಸೂರಮಠ ಅವರು ಮುಖ್ಯ ಅತಿಥಿಯಾಗಿದ್ದರು. ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳು ಸಸಿಗಳನ್ನು ನೆಟ್ಟು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ತಮ್ಮ ಸ್ವಂತ ಪ್ರಯೋಜನಕ್ಕಾಗಿ ಪರಿಸರವನ್ನು ರಕ್ಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. ಪ್ರಕೃತಿ ದೇವರ ಕೊಡುಗೆ ಮತ್ತು ಪ್ರಕೃತಿಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ಲಾಸ್ಟಿಕ್ ಬಳಕೆಯನ್ನು ಕ್ರಮೇಣ ಕಡಿಮೆ ಮಾಡಿ ಮತ್ತು ಬಟ್ಟೆ, ಕಾಗದದ ವಸ್ತುಗಳನ್ನು ಹೆಚ್ಚಾಗಿ ಬಳಸಬೇಕು. ನಾವು ಮೊದಲು ನಮ್ಮ ಮನೆಯ ಪರಿಸರವನ್ನು ಹಸಿರು ಮತ್ತು ಸ್ವಚ್ಛವಾಗಿಡಬೇಕು ಪ್ರಕೃತಿ ನಮ್ಮ ಜೀವನದ ಅಂತರ್ಗತ ಭಾಗವಾಗಿದೆ ಮತ್ತು ಪ್ರಕೃತಿಯು ಅನೇಕ ರೋಗಗಳನ್ನು ಗುಣಪಡಿಸುತ್ತದೆ ಎಂದು ಹೇಳಿದರು. ಡಾ. ನಿರಂಜನ್ ಕುಮಾರ್ ಅವರು ಡಾ. ಕಳಸೂರಮಠ ಅವರನ್ನು ಸನ್ಮಾನಿಸಿದರು. ಡಾ. ಬಲರಾಮ್ ನಾಯಕ್, ಡಾ. (ಕರ್ನಲ್) ಯು.ಎಸ್. ದಿನೇಶ್, ಡಾ. ಸಂಜಯ್ ಪರ್ಮಾರ್, ಡಾ. ಪ್ರಸನ್ನ ದೇಶಪಾಂಡೆ, ಡಾ. ಕೆ. ಸತ್ಯಮೂರ್ತಿ, ಭೌತಚಿಕಿತ್ಸೆಯ ಮತ್ತು ನರ್ಸಿಂಗ್ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನರ್ಸಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ಮಲ್ಲಿಕಾರ್ಜುನ್ ಪಿ. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಫಿಸಿಯೋಥೆರಪಿ ಕಾಲೇಜಿನ ಸಂಯೋಜರಾದ ಡಾ. ಸಂಗೀತಾ ಅಪ್ಪಣ್ಣವರ್ ವಂದನಾರ್ಪಣೆ ಸಲ್ಲಿಸಿದರು. ಎಸ್.ಡಿ.ಎಂ. ಜೈವಿಕ ವಿಜ್ಞಾನಗಳ ಸಂಶೋಧನಾ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸತ್ತೂರಿನ ಆಶ್ರಯ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಶಾಲಾ ಆವರಣವನ್ನು ಸ್ವಚ್ಛಗೊಳಿಸಿ, ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ, ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಸ್ವಚ್ಛತೆಯ ಬಗ್ಗೆ ಜಾಗೃತಿ ನೀಡಿದರು. ಡಾ. ಅಜಯ ಕುಮಾರ್ ಓಲಿ, ಪ್ರೋ. ಕ್ಲೇಮೆಂಟ್ ಚೆಲ್ಲಿ, ಪ್ರದೀಪ ಶೆಟ್ಟಿ, ಗುರುಪ್ರಸಾದ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ಡಾ. ರೇಣುಕಾರಾಧ್ಯ ಮಠ ಮತ್ತು ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ. ಫಿಸಿಯೋಥೆರಪಿ - ನರ್ಸಿಂಗ್ ವಿದ್ಯಾರ್ಥಿಗಳಿಂದ ಪರಿಸರ ರಕ್ಷಣೆಯ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು.

ಕಾಮೆಡ್‌ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

Article Image

ಕಾಮೆಡ್‌ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

ಖಾಸಗಿ ಎಂಜಿನಿಯರಿಂಗ್ ಪದವಿ ಕಾಲೇಜುಗಳಲ್ಲಿ ಸೀಟ್ ಪಡೆಯಲು ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಶಿಶಿರ್ ಹೆಚ್ ಶೆಟ್ಟಿ ಮೊದಲ (1 st Rank) ರ‍್ಯಾಂಕ್ ಗಳಿಸಿದ್ದಾರೆ. ರಾಷ್ಟ್ರದಾದ್ಯಂತ 1,13,111 ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯನ್ನು ಬರೆದಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜ್ ಗಮನಾರ್ಹ ಸಾಧನೆ ಮಾಡಿದೆ. ಮೂಡುಬಿದಿರೆ ಹರೀಶ ಶೆಟ್ಟಿ ಮತ್ತು ಸುಮಿತಾ ಶೆಟ್ಟಿ ಮಗನಾದ ಶಿಶಿರ್ ಹೆಚ್ ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664 ನೇ ಸ್ಥಾನ. ಜೆ.ಇ.ಇ ಮೈನ್ಸ್ ನಲ್ಲಿ 99.971 ಪರ್ಸಂಟೈಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 4ನೇರ‍್ಯಾಂಕ್, ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ದ್ವಿತೀಯ ಪಿಯುಸಿಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ‍್ಯಾಂಕ್ (593 ಅಂಕಗಳು) ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳು, ಉತ್ಕ್ರಷ್ಠ ಸಾಧನೆ ತೋರಿಸಿದ್ದು ಬೋರ್ಡ್ ಪರೀಕ್ಷೆಯಲ್ಲಿ ಒಟ್ಟು 15 ರ‍್ಯಾಂಕ್‌ಗಳು, ಜೆಇಇ ಅಡ್ವಾನ್ಸ್ ನಲ್ಲಿ ರಾಷ್ಟ್ರಮಟ್ಟದಲ್ಲಿ 5000 ರ‍್ಯಾಂಕ್‌ನ ಒಳಗೆ 6 ವಿದ್ಯಾರ್ಥಿಗಳು, ಸಿಇಟಿಯಲ್ಲಿ ನಾನಾ ವಿಭಾಗಗಳಲ್ಲಿ 100 ರೊಳಗೆ 13 ರ‍್ಯಾಂಕ್, 500 ರೊಳಗೆ 38 ರ‍್ಯಾಂಕ್, 1000 ರೊಳಗೆ 64 ರ‍್ಯಾಂಕ್ ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ. ಎನ್‌ಡಿಎ, ನಾಟ ಲಿಖಿತ ಪರೀಕ್ಷೆಗಳಲ್ಲಿ ಸಂಸ್ಥೆಯ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಷ್ಟ್ರೀಯ ಮೆರಿಟೈಮ್ ಯೂನಿವರ್ಸಿಟಿ ಮುಕ್ತ ಸ್ಪರ್ಧೆಯಲ್ಲಿ 124ನೇ ಸ್ಥಾನ ಪಡೆಯುದರೊಂದಿಗೆ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆ ಗುಣಮಟ್ಟದ ಶಿಕ್ಷಣದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ದಾಖಲೆ ಫಲಿತಾಂಶವನ್ನು ಸಾಧಿಸಿದೆ. ಅತ್ಯುತ್ತಮ ದಾಖಲೆಗಳೊಂದಿಗೆರಾಷ್ಟ್ರಮಟ್ಟದಲ್ಲಿ 1ನೇ ರ‍್ಯಾಂಕ್ ಪಡೆದಿರುವ ಶಿಶಿರ್ ಹೆಚ್ ಶೆಟ್ಟಿ ಇವರನ್ನು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಾಧನೆ ಬಗ್ಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹರ್ಷವ್ಯಕ್ತಪಡಿಸಿದ್ದಾರೆ. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಮನೋಜ್ ಕುಮಾರ್, ಸ್ಪರ್ಧಾತ್ಮಕ ಪರೀಕ್ಷೆಗಳ ವಿಭಾಗದ ಮುಖ್ಯಸ್ಥರಾದ ರಾಮಮೂರ್ತಿ, ಡಾ, ದಯಾನಂದ, ವಿದ್ಯಾರ್ಥಿಯ ತಂದೆ ಹರೀಶ್ ಶೆಟ್ಟಿ ಇವರು ಉಪಸ್ಥಿತರಿದ್ದರು. ಉಪನ್ಯಾಸ ವಿಕ್ರಮ ನಾಯಕ್ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಎಕ್ಸಲೆ0ಟ್ ಮೂಡುಬಿದಿರೆ : ಜೆ ಇ ಇ ಅಡ್ವಾನ್ಸ್ಡ್ ರಾ‌ಷ್ಟ್ರಮಟ್ಟದ ಸಾಧನೆ

Article Image

ಎಕ್ಸಲೆ0ಟ್ ಮೂಡುಬಿದಿರೆ : ಜೆ ಇ ಇ ಅಡ್ವಾನ್ಸ್ಡ್ ರಾ‌ಷ್ಟ್ರಮಟ್ಟದ ಸಾಧನೆ

ಮೂಡುಬಿದಿರೆ: ಇತ್ತೀಚೆಗೆ ನಡೆದ ರಾ‌ಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆ0ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅ0ಕಗಳನ್ನು ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ರಾ‌ಷ್ಟ್ರಮಟ್ಟದಲ್ಲಿ 664 ನೇ ಸ್ಥಾನ (OPEN), ಕಾರ್ತಿಕ್ ಎಸ್ 12072 ನೇ ಸ್ಥಾನ (OPEN) , ಶ್ರೇಯಾಂಕ್ ಮನೋಹರ್ ಪೈ 4601ನೇ ಸ್ಥಾನ (C), ಶೌರ್ಯ್ ಬಿ ತಲ್‌ವಾರ್ 610ನೇ ಸ್ಥಾನ (C) , ಸ್ಮಿರಾ ತಲ್‌ವಾರ್ 27 ನೇ ಸ್ಥಾನ (C), ಪೂರ್ಣಚಂದ್ರ ಎಸ್ 2367 ನೇ ಸ್ಥಾನ (C), ಪಡೆದು ಉತ್ತಮ ಸ್ಥಾನ ಗಳಿಸುವುದರ ಮೂಲಕ ಸ0ಸ್ಥೆಗೆ ಕೀರ್ತಿ ತ0ದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾ0ಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಸ್ಪರ್ಧಾತ್ಮಕ ಪರೀಕ್ಷಾ ನಿರ್ದೇಶಕರಾದ ಡಾ. ಪ್ರಶಾಂತ್ ಹೆಗ್ಡೆ , ಜೆಇಇ ಸ0ಯೋಜಕರಾದ ವಿ ಅರುಣ್, ಹಾಗೂ ಉಪನ್ಯಾಸಕ ವೃ0ದದವರು ವಿದ್ಯಾರ್ಥಿಗಳನ್ನು ಅಭಿನ0ದಿಸಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ: ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

Article Image

ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ: ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್ನಲ್ಲಿ 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ‘ಸತಿ ಉಲೂಪಿ’ ಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು. ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಮ್ಮ ನಾಡಿನ ವಿವಿಧ ಯಕ್ಷಗಾನ ಮೇಳಗಳಲ್ಲಿ ವೃತ್ತಿಪರವಾಗಿ ದುಡಿಯುತ್ತಿದ್ದು ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಈ ಮೊದಲು ಹಲವಾರು ಸ್ಪರ್ಧೆಗಳನ್ನು ಗೆದ್ದು ಬಹುಮಾನಗಳನ್ನು ಪಡೆದುಕೊಂಡಿರುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ವಿಜೇತ ತಂಡವನ್ನು ಅವರು ಅಭಿನಂದಿಸಿದ್ದಾರೆ.

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Article Image

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಮೂಡುಬಿದಿರೆ : ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಬಹಳ ವಿಜೃಂಭಣೆಯಿಂದ ನೆರವೇರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ರವರು ಹಾಗೂ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ದೀಪವನ್ನು ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನರವರು ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸುತ್ತಾ, ವಿದ್ಯಾರ್ಥಿಗಳು ಗುರುಹಿರಿಯರನ್ನು ಗೌರವಭಾವದಿಂದ ಕಾಣುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನವನ್ನು ಸಂತೋಷದಿಂದ ಮುಂದುವರಿಸಿ, ಕ್ರಿಯಾಶೀಲರಾಗಿ ಬೆಳೆಯಬೇಕು ಎಂದು ಶುಭ ಹಾರೈಸಿದರು. ಈ ಸುಸಂದರ್ಭದಲ್ಲಿ ಶೈಕ್ಷಣಿಕ ನಿರ್ದೇಶಕರಾದ ಪುಷ್ಪರಾಜ್ ಬಿ, ಟ್ರಸ್ಟಿನ ಸದಸ್ಯರಾದ ನಟರಾಜ, ಶಾಲಾ ಪ್ರಾಂಶುಪಾಲರಾದ ಪ್ರಸಾದ್, ಸಿಬಿಎಸ್ಇ ಸಂಯೋಜಕರಾದ ವಿಮಲಾ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯಾದ ಸ್ವಾತಿ ನೆರವೇರಿಸಿ, ಹರ್ಷಿತಾರವರು ಸ್ವಾಗತಿಸಿ, ಪದ್ಮಾವತಿಯವರು ವಂದಿಸಿದರು.

ಸತ್ತೂರು, ಧಾರವಾಡ: ಕ್ರೀವಾ-2025 ಸಾಂಸ್ಕೃತಿಕ ಕಾರ್ಯಕ್ರಮ

Article Image

ಸತ್ತೂರು, ಧಾರವಾಡ: ಕ್ರೀವಾ-2025 ಸಾಂಸ್ಕೃತಿಕ ಕಾರ್ಯಕ್ರಮ

ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜು “ಕ್ರೀವಾ 2025” - “ಅಸ್ತಿತ್ವದ ಸಾರ” ಎಂಬ ಧ್ಯೇಯೆಯೊಂದಿಗೆ 28ರಿಂದ 31 ಮೇ, 2025ರ ವರೆಗೆ ನಾಲ್ಕು ದಿನಗಳ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ಕ್ರೀವಾ 2025 ಕಲೆ, ಸಂಸ್ಕೃತಿ ಮತ್ತು ಸಂಗೀತಗಳನ್ನೋಳಗೊಂಡ ವಾರ್ಷಿಕ ಸಾಂಸ್ಕೃತಿಕ ವೇದಿಕೆಯಾಗಿದೆ. ಯುವ ಗಾಯಕ ಮತ್ತು ಸಂಗೀತ ಸಂಯೋಜಕರಾದ ವಿಶ್ವನಾಥ ಹಾವೇರಿ ಅವರು ಮುಖ್ಯ ಅತಿಥಿಗಳಾಗಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಗೌರವ ಅತಿಥಿಗಳಾಗಿ ಕ್ರೀವಾ-2025 ಲಾಂಛನವನ್ನು ಅನಾವರಣಗೊಳಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ ಕುಮಾರ, ಹಣಕಾಸು ಅಧಿಕಾರಿಗಳಾದ ವಿ. ಜಿ. ಪ್ರಭು, ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಪರಮಾರ ಉಪಸ್ಥಿತರಿದ್ದರು. ಡಾ. ಸಂಗೀತಾ ಅಪ್ಪಣ್ಣವರ ಅತಿಥಿಗಳನ್ನು ಸ್ವಾಗತಿಸಿದರು. ನಿತೀಶ ಶೆಟ್ಟಿ ಕ್ರೀವಾದ ಅವಲೋಕನ ನೀಡಿದರು. ಚಾಂದನಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಲಲಿತಾ ಮತ್ತು ಹಾರ್ದಿಕ ಕಾರ್ಯಕ್ರಮವನ್ನು ನಿರೂಪಿಸಿದರು. ವೆದಾಂಗ ವಂದನಾರ್ಪಣೆ ಸಲ್ಲಿಸಿದರು.

ಸತ್ತೂರು, ಧಾರವಾಡ: ನಾನ್ ಇನ್ವ್ಸಿವ್ ವೆಂಟಿಲೇಷನ್ ಕುರಿತು ಒಂದು ದಿನದ ಕಾರ್ಯಾಗಾರ

Article Image

ಸತ್ತೂರು, ಧಾರವಾಡ: ನಾನ್ ಇನ್ವ್ಸಿವ್ ವೆಂಟಿಲೇಷನ್ ಕುರಿತು ಒಂದು ದಿನದ ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗದಿಂದ 25 ಮೇ 2025 ರಂದು “ಆಮ್ಲಜನಕ ವಿತರಣಾ ಸಾಧನಗಳು” ಎಂಬ ವಿಷಯದೊಂದಿಗೆ “ನಾನ್ ಇನ್ವ್ಸಿವ್ ವೆಂಟಿಲೇಷನ್” ಕುರಿತು ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಉತ್ತರ ಕರ್ನಾಟಕದ ವಿವಿಧ ವೈದ್ಯಕೀಯ ಕಾಲೇಜುಗಳಿಂದ ಸುಮಾರು 170ಕ್ಕೂ ಹೆಚ್ಚು ಅಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಶ್ವಾಸಕೋಶ ವಿಭಾಗದ ಮುಖ್ಯಸ್ಥರಾದ ಡಾ. ಸಂಜಯ್, ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅರವಳಿಕೆ ವಿಭಾಗದ ಮುಖ್ಯಸ್ಥರಾದ ಡಾ. ಮಾಧುರಿ ಕುರ್ದಿ, ಕೆ.ಎಲ್.ಇ ಬೆಳಗಾವಿಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಿವಾಸ್ ಕುಲಕರ್ಣಿ, ಹುಬ್ಬಳ್ಳಿಯ ಜೆಜಿಎಂಎಂ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್ ಹಿರೇಮಠ, ಬಿಜಾಪುರದ ಬಿ.ಎಲ್.ಡಿ.ಇ. ತುರ್ತು ಚಿಕಿತ್ಸಾ ವಿಭಾಗದ ಡಾ. ಉದಯಕುಮಾರ್ ಜೆ ಖಾಸಗೆ, ಕೆ.ಎಲ್.ಇ. ಬೆಳಗಾವಿಯ ಡಾ. ಗುರುಪ್ರಸಾದ್ ಆಂಟಿನ್ ಕಾರ್ಯಾಗಾರದ ಕುರಿತು ವಿಶೇಷ ತಜ್ಞ ಉಪನ್ಯಾಸ ನೀಡಿದರು. ಡಾ. ಸುಚಿತಾ ಹಾಗೂ ಡಾ. ನರೇಂದ್ರ ರೆಡ್ಡಿ ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಲಕ್ಷ್ಮೀ ಕಾರ್ಯಗಾರದ ಪ್ರಾಸ್ತಾವಿಕ ಭಾಷಣವನ್ನು ನೀಡಿದರು. ಡಾ. ರಜನಿಕಾಂತ ವಂದನಾರ್ಪಣೆ ಸಲ್ಲಿಸಿದರು.

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Article Image

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ಇ0ಜಿನಿಯರಿ0ಗ್ ವಿಭಾಗದಲ್ಲಿ 4 ನೇ ರ‍್ಯಾಂಕ್, ನೂತನ್ ಕೃಷ್ಣ ಬಿ.ಬಿ.ಎನ್.ವೈ.ಎಸ್. ನಲ್ಲಿ 4 ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ 5 ನೇ ರ‍್ಯಾಂಕ್, ಬಿ ಎಸ್ಸಿ ನರ್ಸಿ0ಗ್ ಮತ್ತು ವೆಟರಿನರಿ ಸಾಯನ್ಸ್ ನಲ್ಲಿ 6 ನೇ ರ‍್ಯಾಂಕ್ ನ್ನು ಗಳಿಸಿರುತ್ತಾನೆ. ವಿವಿಧ ವಿಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ನೂರರ ಒಳಗೆ 13 ರ‍್ಯಾಂಕ್, ಐದುನೂರರ ಒಳಗೆ 38 ರ‍್ಯಾಂಕ್, ಸಾವಿರದ ಒಳಗೆ 64 ರ‍್ಯಾಂಕ್ ಗಳನ್ನು ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ ಶೆಟ್ಟಿ, ಮತ್ತು ಉಪನ್ಯಾಸಕ ವೃ0ದ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

ಉಜಿರೆ, ಮೇ.21: ಭಯೋತ್ಪಾದನಾ ವಿರೋಧಿ ದಿನಾಚರಣೆಯ ಪ್ರಯುಕ್ತ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿವಿಧ ತರಗತಿಗಳ ವಿದ್ಯಾರ್ಥಿಗಳಿಗೆ ಉಗ್ರಗಾಮಿ ಚಟುವಟಿಕೆಗಳ ವಿರುದ್ಧದ ಪ್ರಮಾಣ ವಚನವನ್ನು ಬೋಧಿಸಲಾಯಿತು. ಆಯಾ ತರಗತಿಗಳ ಬೋಧಕರು ಕಾಲೇಜಿನ ಆರಂಭಿಕ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿಗಳಿಂದ ಅಹಿಂಸೆ, ಸಹನೆಯೊಂದಿಗೆ ಗುರುತಿಸಿಕೊಳ್ಳುವ ಭಾರತದ ಅಸ್ಮಿತೆಗೆ ಅನುಗುಣವಾಗಿ ದೃಢವಿಶ್ವಾಸದ ಹೆಜ್ಜೆಗಳನ್ನಿರಿಸುವ ಸಂಕಲ್ಪದ ಧ್ವನಿ ಈ ಸಂದರ್ಭದಲ್ಲಿ ವ್ಯಕ್ತವಾಯಿತು. ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ಎದುರಿಸುವ ಪ್ರತಿಜ್ಞೆ ಮೊಳಗಿತು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸುವ ಆಕಾಂಕ್ಷೆ ವ್ಯಕ್ತವಾಯಿತು. ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡುವ ಪಣವನ್ನು ವಿದ್ಯಾರ್ಥಿಗಳು ತೊಟ್ಟರು. ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸುವ ನಿರ್ಧಾರಕ್ಕೆ ಅನುಗುಣವಾಗಿ ಈ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಪಹಲ್ಗಾಮ್ ಘಟನೆಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರತವು ಭಯೋತ್ಪಾದನಾ ಕೃತ್ಯಗಳನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂಬ ಸಂದೇಶ ರವಾನಿಸುವ ದೃಷ್ಟಿಯಿಂದ ಯುವಮನಸುಗಳಿಗೆ ಬೋಧಿತವಾದ ಈ ಪ್ರತಿಜ್ಞಾವಿಧಿ ಮಹತ್ವಪೂರ್ಣ ಎನ್ನಿಸಿತು.

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

Article Image

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ಕಳೆಂಜ : ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಐಡಿಎ ಪುತ್ತೂರು ಘಟಕ, ಕೆವಿಜಿ ಡೆಂಟಲ್ ಕಾಲೇಜು ಮತ್ತು ಹಾಸ್ಪಿಟಲ್ ಸುಳ್ಯ, ಜೆಸಿಐ ಕೊಕ್ಕಡ ಕಪಿಲಾ ಮತ್ತು ಇತರೆ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮಪಂಚಾಯತ್ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲೆತಡ್ಕದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್ ಮತ್ತು ರೋ. ಡಾ. ರಾಘವೇಂದ್ರ ಪಿದಮಲೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೋ. ಸಂದೇಶ್ ಕುಮಾರ್ ರಾವ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಸುಸಜ್ಜಿತವಾದ ಆಸ್ಪತ್ರೆಯ ಸವಲತ್ತುಗಳ ಅಗತ್ಯವಿರುತ್ತದೆ. ರೋಟರಿಯಂತಹ ಸಂಘ ಸಂಸ್ಥೆಗಳು ಹಲವರ ಸಹಕಾರದಿಂದ ಆರೋಗ್ಯದ ಸವಲತ್ತುಗಳನ್ನು ಗ್ರಾಮೀಣ ಭಾಗಕ್ಕೆ ತಲುಪಿಸಿದಾಗ ಅತ್ಯಂತ ಉಪಯುಕ್ತವಾಗುತ್ತದೆ. ಜನರ ಆರೋಗ್ಯ ಜಾಗೃತಿಯ ದೃಷ್ಟಿಕೋನದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಸಾಮಾನ್ಯವಾಗಿ ಆಸ್ಪತ್ರೆ ಮತ್ತು ಡಾಕ್ಟರ್ ಗಳ ಬಳಿಗೆ ಅನಾರೋಗ್ಯಗೊಂಡವರು ತೆರಳುತ್ತಾರೆ ಆದರೆ ಶಿಬಿರದಂತ ಕಾರ್ಯಕ್ರಗಳಲ್ಲಿ ವೈದ್ಯರೇ ಗ್ರಾಮೀಣ ಪ್ರದೇಶದ ಜನರ ಬಳಿಗೆ ಬಂದಿರುವುದು ನಿಜಕ್ಕೂ ಫಲಕಾರಿ. ಇದನ್ನು ಚಿಕಿತ್ಸೆಯ ಅವಶ್ಯಕ ಇರುವವರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರೋ. ಡಾ. ರಾಘವೇಂದ್ರ ಪಿದಮಲೆ ಅಭಿಪ್ರಾಯ ಪಟ್ಟರು. ಶಿಬಿರದಲ್ಲಿ ಕೆವಿಜಿ ಡೆಂಟಲ್ ಕಾಲೇಜು ಮತ್ತು ಹಾಸ್ಪಿಟಲ್ ನ ವೈದ್ಯರು ಸೇರಿದಂತೆ ನುರಿತ ತಜ್ಞರಿಂದ ಉಚಿತ ತಪಾಸಣೆ ಹಾಗು ಅಗತ್ಯವಿದ್ದವರಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ 60 ಕ್ಕೂ ಹೆಚ್ಚು ಜನರು ದಂತ ಭರ್ತಿ, ದಂತ ಶುಚಿಗೊಳಿಸುವಿಕೆ, ಹಲ್ಲು ಹೊರತೆಗೆಯುವಿಕೆ, ಕೃತಕ ಹಲ್ಲುಗಳ ಜೋಡಣೆಯಂತಹ ವಿವಿಧ ದಂತ ಚಿಕಿತ್ಸೆಗಳನ್ನು ಪಡೆದರು. ಈ ಸಂದರ್ಭದಲ್ಲಿ ಆನ್. ಡಾ. ದೀಪಾಲಿ ಡೊಂಗ್ರೆ, ರೋ. ಉದಯ ಶಂಕರ್ ಸೇರಿದಂತೆ ಗ್ರಾಮಸ್ಥರು, ಜೆಸಿಐ ಕೊಕ್ಕಡ ಕಪಿಲಾ ಸದಸ್ಯರು ಹಾಗೂ ಶಾಲೆಯ ಆಡಳಿತ ಮಂಡಳಿ ಭಾಗಿಯಾಗಿದ್ದರು. ಶಿಬಿರವನ್ನು ಜೆಸಿಐ ಕೊಕ್ಕಡ ಕಪಿಲಾ ಅಧ್ಯಕ್ಷೆ ಶೋಭಾ ಪಿ ನಿರೂಪಿಸಿ, ವಂದಿಸಿದರು. ಜನರ ಸೇವೆ ಮಾಡುವಂತಹ ಅವಕಾಶವನ್ನು ಮತ್ತು ಜವಾಬ್ದಾರಿಯನ್ನು ಬೆಳ್ತಂಗಡಿ ರೋಟರಿ ಸಂಸ್ಥೆ ನಮಗೆ ನೀಡಿದೆ. ಗ್ರಾಮೀಣ ಜನರ ಆರೋಗ್ಯ ಜಾಗೃತಿಯ ಉದ್ದೇಶದಿಂದ ಹಲವರ ಸಹಕಾರದೊಂದಿಗೆ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದ್ದು, ಇದರಿಂದ ಎಲ್ಲ ವರ್ಗದ ಜನರು ಉಪಯೋಗ ಪಡೆದುಕೊಂಡಿದ್ದಾರೆ. - ಸಂದೇಶ್ ಕುಮಾರ್ ರಾವ್ ಕಾರ್ಯದರ್ಶಿ ಬೆಳ್ತಂಗಡಿ ರೋಟರಿ ಕ್ಲಬ್

ಉಜಿರೆ ಎಸ್.ಡಿ.ಎಂ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Article Image

ಉಜಿರೆ ಎಸ್.ಡಿ.ಎಂ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

ಸಂಬಂಧಿಕರೇ ಕೆಲವೊಂದು ರೋಗಿಗಳ ಶುಶ್ರೂಷೆ ಮಾಡಲು ಹಿಂಜರಿಯುತ್ತಾರೆ. ಆದರೆ ದಾದಿಯರು ಮತ್ತು ವೈದ್ಯರು ಅದನ್ನು ಕರ್ತವ್ಯದ ದೃಷ್ಟಿಯಿಂದ ಯಾವುದೇ ಹಿಂಜರಿಕೆ ಇಲ್ಲದೆ ರೋಗಿಗಳ ಸೇವೆ ಮಾಡುತ್ತಾರೆ. ಮಧ್ಯರಾತ್ರಿಯೂ ನಿದ್ದೆ ಇಲ್ಲದೆ ರೋಗಿಗಳ ಸೇವೆ ಮಾಡುವ ದಾದಿಯರ ಸೇವೆ ನಿಜವಾಗಿಯೂ ಶ್ಲಾಘನೀಯ. ರೋಗಿಗಳ ಸೇವೆ ಮಾಡುವ ಎಲ್ಲಾ ದಾದಿಯರ ಬಗ್ಗೆ ಅತ್ಯಂತ ಹೆಚ್ಚು ಕಾಳಜಿ ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ದಂಪತಿಗಳ ಶುಭಾಶೀರ್ವಾದ ದಾದಿಯರ ಪಾಲಿಗೆ ಸದಾ ಇದೆ ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಹೇಳಿದರು. ಅವರು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ದಾದಿಯರ ದಿನಾಚರಣೆಯ ಪ್ರಯುಕ್ತ ದಾದಿಯರನ್ನು ಗೌರವಿಸಿ ಮಾತನಾಡುತ್ತಾ ವೈದ್ಯಕೀಯ ಕ್ಷೇತ್ರದ ಸೇವೆಯಲ್ಲಿ ಅತೀ ಹೆಚ್ಚು ಪ್ರಾಮುಖ್ಯತೆಯ ಸೇವೆ ದಾದಿಯರದ್ದು ಎಂದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ದಾದಿಯರಿಗೆ ಶುಭ ಹಾರೈಸಿದರು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಶುಭ ಹಾರೈಸಿ ಮಾತನಾಡಿ, ವೈದ್ಯರಿಗೆ ರೋಗಿಗಳ ಸೇವೆ ಮಾಡಲುದಾದಿಯರ ಸಹಾಯ ಅತ್ಯಂತ ಅಗತ್ಯ. ಅದರಲ್ಲೂ ನಮ್ಮ ಆಸ್ಪತ್ರೆಯ ದಾದಿಯರ ಸೇವೆ ಅಮೋಘವಾದದ್ದು ಎಂದರು. ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಇವರು ಎಲ್ಲಾ ದಾದಿಯರಿಗೆ ಕರ್ತವ್ಯದ ಪ್ರತಿಜ್ಞಾವಿಧಿ ಬೋಧಿಸಿ, ಮಾತನಾಡುತ್ತಾ, ದಾದಿಯರು ವೈದ್ಯಕೀಯ ಕ್ಷೇತ್ರದ ಬೆನ್ನೆಲುಬು, ಪೂಜ್ಯ ಹೆಗ್ಗಡೆಯವರು ಮತ್ತು ಅವರ ಪರಿವಾರದವರ ಪ್ರೀತಿ, ಇಲ್ಲಿನ ವ್ಯವಸ್ಥಾಪಕ ನಿರ್ದೇಶಕರ ಕಾಳಜಿ ಮತ್ತು ಪ್ರೋತ್ಸಾಹ, ವೈದ್ಯರ ಬೆಂಬಲದೊಂದಿಗೆ ಈ ಸಂಸ್ಥೆಯಲ್ಲಿ ದುಡಿಯುವ ಸದಾವಕಾಶ ನಮಗೆ ದೊರೆತಿದೆ. ಪೂಜ್ಯರ ಸಂಸ್ಥೆಯಲ್ಲಿ ಸೇವೆ ಸಲ್ಲಿಸುವುದೇ ನಮ್ಮೆಲ್ಲರ ಸೌಭಾಗ್ಯ ಎಂದರು. ಇದೇ ಸಂದರ್ಭದಲ್ಲಿ ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಇವರನ್ನು ಸನ್ಮಾನಿಸಲಾಯಿತು. ಎಲ್ಲಾ ದಾದಿಯರಿಗೆ ಉಡುಗೊರೆ ನೀಡಿ ಗೌರವಿಸಲಾಯಿತು. ಆಸ್ಪತ್ರೆಯ ವೈದ್ಯರು, ದಾದಿಯರು ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

Article Image

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

ಉಜಿರೆ: ಮನುಷ್ಯರು ವ್ಯಸನಗಳ ದಾಸರಾಗಬಾರದು. ಚಟಗಳಿಂದಾಗಿ ಹಣ, ಆರೋಗ್ಯ, ಮರ್ಯಾದೆ, ಪ್ರೀತಿ-ವಿಶ್ವಾಸ ಎಲ್ಲವನ್ನೂ ಮದ್ಯವ್ಯಸನಿಗಳು ಕಳೆದುಕೊಳ್ಳುತ್ತಾರೆ. ವ್ಯಸನಮುಕ್ತರು ನರಕವನ್ನು ದಾಟಿ ಬಂದ ನಾಯಕರು ಎಂದು ಶಿರಹಟ್ಟಿ ಭಾವೈಕ್ಯತಾ ಪೀಠದ ಪೂಜ್ಯ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಆಯೋಜಿಸಿದ ೨೯೦೦ ಮಂದಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಸರ್ಕಾರ ಮದ್ಯ ಕುಡಿಸಬೇಕು ಎಂದು ಹೇಳಿದರೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮದ್ಯಪಾನ ಬಿಡಿಸಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಸರ್ಕಾರ ಮದ್ಯದಂಗಡಿಗಳನ್ನು ಹೆಚ್ಚಿಸುವುದಲ್ಲದೆ ಮದ್ಯಪಾನ ನಿಯಂತ್ರಣ ಮಂಡಳಿಗೂ ಕೋಟಿಗಟ್ಟಲೆ ಹಣ ವೆಚ್ಚ ಮಾಡುತ್ತಿದೆ. ಆರೋಗ್ಯಪೂರ್ಣ ಸಭ್ಯ, ಸುಸಂಸ್ಕೃತ ಸಮಾಜ ರೂಪಿಸಲು ಹೆಗ್ಗಡೆಯವರು ಮಾಡುತ್ತಿರುವ ಸೇವೆ-ಸಾಧನೆಗಳ ಬಗ್ಗೆ ಶಾಲಾ-ಕಾಲೇಜುಗಳ ಪಠ್ಯದಲ್ಲಿ ಮಾಹಿತಿ ನೀಡಬೇಕು. ವಿಶ್ವವಿದ್ಯಾಲಯಗಳಲ್ಲಿ ಕೂಡಾ ಈ ಬಗ್ಗೆ ಸಂಶೋಧನಾತ್ಮಕ ಅಧ್ಯಯನ ನಡೆಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಮದ್ಯಪಾನ ನಿಷೇಧ ಮಾಡುವ ಸರ್ಕಾರ ಬಂದರೆ ಮಾತ್ರ ರಾಜ್ಯದ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ. ವ್ಯಸನಗಳ ಚಟದಿಂದಾಗಿ ಇಂದು ಪುರುಷರ ಬಂಜೆತನವೂ ಹೆಚ್ಚಾಗುತ್ತಿರುವುದು ಖೇದಕರವಾಗಿದೆ ಎಂದು ಅವರು ತಿಳಿಸಿದರು. ವ್ಯಸನಮುಕ್ತರು ಮುಂದೆ ದೃಢಸಂಕಲ್ಪದೊಂದಿಗೆ ಸಾರ್ಥಕ ಜೀವನ ನಡೆಸಿ ಪರಿಸರದವರಿಗೂ ವ್ಯಸನಮುಕ್ತರಾಗುವ ಪ್ರೇರಣೆ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಬೆಂಗಳೂರಿನ ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾಅಮಿತ್ ಸ್ವಸ್ಥ್ಯಾಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಮದ್ಯವ್ಯಸನಿಗಳು ಅನ್ಯಾಯ, ಅತ್ಯಾಚಾರ ಮಾಡುತ್ತಾ ಸಂಸ್ಕಾರಕ್ಕೂ ಸಮಾಜಕ್ಕೂ ಹೊರೆಯಾಗುತ್ತಾರೆ. ವ್ಯಸನಮುಕ್ತರಾಗಿ ಹೊಸ ಬದುಕನ್ನು ಆರಂಭಿಸಿದವರು. ಪಂಚೇಂದ್ರಿಯಗಳ ನಿಗ್ರಹದೊಂದಿಗೆ ಮಾನಸಿಕ ಮಾಲಿನ್ಯರಹಿತರಾಗಿ ಆದರ್ಶ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ವ್ಯಸನಮುಕ್ತರು ಕುಟುಂಬದ ಸದಸ್ಯರೊಂದಿಗೆ ಪ್ರೀತಿ-ವಿಶ್ವಾಸದಿಂದ ಮುಕ್ತವಾಗಿ ಬೆರೆಯಬೇಕು. ಮತ್ತೆ ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು. ವ್ಯಸನಮುಕ್ತರು ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಇಂದು ದೇವರ ದರ್ಶನ ಮಾಡಿರುವುದರಿಂದ ವಿಶೇಷ ಅನುಗ್ರಹಕ್ಕೆ ಪಾತ್ರರಾಗಿರುವಿರಿ ಎಂದು ಹೇಳಿ ಶುಭ ಹಾರೈಸಿದರು. ವ್ಯಸನಮುಕ್ತರ ಪರವಾಗಿ ರಾಮದುರ್ಗದ ಶಂಕರಪ್ಪ ಮತ್ತು ಉಡುಪಿಯ ಶಶಿಕಲರಾಜು ಅನಿಸಿಕೆ ವ್ಯಕ್ತಪಡಿಸಿದರು. ಮೂಡಬಿದಿರೆ ಡಾ. ವಿನಯ್ ಆಳ್ವ ಜಾಗೃತಿಅಣ್ಣ ಮತ್ತು ಜಾಗೃತಿಮಿತ್ರ ಪ್ರಶಸ್ತಿ ಪ್ರದಾನ ಮಾಡಿದರು. ಡಾ. ಪಿ. ವಿ. ಭಂಡಾರಿ, ಡಾ. ಶ್ರೀನಿವಾಸ ಭಟ್, ವಿ.ರಾಮಸ್ವಾಮಿ, ಪದ್ಮನಾಭ ಶೆಟ್ಟಿ ಮತ್ತು ಕಾಸಿಂ ಉಪಸ್ಥಿತರಿದ್ದರು. ಅನಿಲ್ ಕುಮಾರ್ ಆಶಯ ನುಡಿಗಳನ್ನು ಆಡಿ ಶುಭ ಹಾರೈಸಿದರು. ವಿವೇಕ್ ವಿ. ಪಾಯಸ್ ಸ್ವಾಗತಿಸಿದರು. ನಟರಾಜ್ ಬಾದಾಮಿ ಧನ್ಯವಾದವಿತ್ತರು. ಯೋಜನಾಧಿಕಾರಿಗಳಾದ ನಾಗರಾಜ್ ಮತ್ತು ರಾಜೇಶ್ ಕಾರ್ಯಕ್ರಮ ನಿರ್ವಹಿಸಿದರು.

ಎಸ್.ಡಿ.ಎಂ. ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಝಿನ್ ಮನ್ನಣೆ

Article Image

ಎಸ್.ಡಿ.ಎಂ. ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಝಿನ್ ಮನ್ನಣೆ

ಉಜಿರೆ, ಮೇ 21: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಹೊರತಂದ ‘ಮನೀಷಾ’ ವಾರ್ಷಿಕ ಸಂಚಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮೊದಲ ಬಹುಮಾನಿತ ಆದ್ಯತೆಯೊಂದಿಗೆ ‘ಅತ್ಯುತ್ತಮ ಕಾಲೇಜು ಮ್ಯಾಗಝಿನ್’ ಎಂಬ ಮನ್ನಣೆಗೆ ಪಾತ್ರವಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ಅವರಿಗೆ ‘ಮನೀಷಾ’ ಸಂಚಿಕೆಯ ಅನನ್ಯ ಪ್ರಯೋಗಶೀಲತೆಗಾಗಿ ಪ್ರಥಮ ಬಹುಮಾನಿತ ಮನ್ನಣೆಯ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಆಡಳಿತಾಂಗ ಕುಲಸಚಿವರಾದ ಕೆ.ರಾಜು ಮೊಗವೀರ, ಪರೀಕ್ಷಾಂಗ ಕುಲಸಚಿವರಾದ ಡಾ.ಎಚ್.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಡಾ.ಸಂಗಪ್ಪ ವೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕಿ ಡಾ.ಪರಿಣಿತಾ ಅವರ ಅಧ್ಯಕ್ಷತೆಯ ಕಾಲೇಜು ಮ್ಯಾಗಝೀನ್ ತಜ್ಞರ ಆಯ್ಕೆ ಸಮಿತಿಯು ವಿ.ವಿ. ವ್ಯಾಪ್ತಿಯ ಸಂಯೋಜಿತ ಕಾಲೇಜುಗಳ ವಾರ್ಷಿಕ ಸಂಚಿಕೆಗಳನ್ನು ಪರಿಶೀಲಿಸಿ ‘ಮನೀಷಾ’ ಸಂಚಿಕೆಯನ್ನು ಮೊದಲ ಬಹುಮಾನಕ್ಕೆ ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಡಾ.ಪರಿಣಿತಾ ಅವರು ‘ಮನೀಷಾ’ ಸೇರಿದಂತೆ ಸ್ಪರ್ಧೆಗೆ ಪರಿಗಣಿತವಾದ ವಿವಿಧ ಕಾಲೇಜುಗಳು ಹೊರತಂದ ಸಂಚಿಕೆಗಳ ವಿಶೇಷತೆಯನ್ನು ಪರಿಚಯಿಸಿದರು. ಸ್ಪರ್ಧೆಗೆ ಬಂದ ಕಾಲೇಜು ಸಂಚಿಕೆಗಳ ವಿದ್ಯಾರ್ಥಿ ಬರಹಗಳು ಪ್ರಚಲಿತ ಘಟನೆಗಳನ್ನು ಕೇಂದ್ರೀಕರಿಸಿಕೊಂಡಿದ್ದವು. ಬಹಳ ಮುಖ್ಯವಾಗಿ ಸ್ಥಳೀಯ ಸಂಸ್ಕೃತಿಯನ್ನು ಅನಾವರಣಗೊಳಿಸುವ ಬರಹಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಅಲ್ಲದೇ, ಜ್ಞಾನ ಸಂವಹನದ ಉದ್ದೇಶದ ಬರಹಗಳಿಗಿಂತ ಬಹಳ ಮುಖ್ಯವಾಗಿ ಗಮನ ಸೆಳೆದದ್ದು ಆದರ್ಶ ಮೌಲ್ಯಗಳು ಮತ್ತು ಸಂಸ್ಕಾರಯುತ ಚಿಂತನೆಯನ್ನು ಕಾಣಿಸುವ ಲೇಖನಗಳು. ಅಲ್ಲದೇ, ಈ ಸಲದ ಬಹಳಷ್ಟು ಸಂಚಿಕೆಗಳಲ್ಲಿ ಜನರಿಗೆ ಸಾಮಾಜಿಕವಾಗಿ ನೆರವಾಗಿ ಜನಜನಿತರಾದ ಸ್ಥಳೀಯ ವ್ಯಕ್ತಿತ್ವಗಳ ಹಿರಿಮೆಯನ್ನು ಧ್ವನಿಸುವ ಬರಹಗಳು ಇದ್ದವು. ಅಲ್ಲದೇ ಉಚಿತ ಬಸ್ ಪ್ರಯಾಣದ ಕುರಿತ ನಿಲುವುಗಳನ್ನು ವಿದ್ಯಾರ್ಥಿ ಬರಹಗಾರರು ಈ ಸಂಚಿಕೆಗಳ ಮೂಲಕ ಅಭಿವ್ಯಕ್ತಿಸಿದ್ದಾರೆ ಎಂದು ಡಾ.ಪರಿಣಿತಾ ತಿಳಿಸಿದರು. ಪ್ರಚಲಿತ ಘಟನೆಗಳು, ಮೌಲಿಕ ಪುಸ್ತಕಗಳ ಪರಿಚಯಾತ್ಮಕ ನಿಲುವುಗಳು, ತಾರುಣ್ಯದ ಹೊಸಿಲಲ್ಲಿರುವ ಯುವ ಮನಸುಗಳ ತವಕ-ತಲ್ಲಣಗಳು, ಹೊಸ ಕಾಲವನ್ನು ವ್ಯಾಖ್ಯಾನಿಸುವ ಕಾವ್ಯಾತ್ಮಕ ಧ್ವನಿ, ಸ್ವಾನುಭವಗಳ ವಿನೂತನ ಅಭಿವ್ಯಕ್ತಿಯ ಆಶಯಗಳನ್ನು ಈ ಬಹುಮಾನಿತ ಸಂಚಿಕೆ ಒಳಗೊಂಡಿದೆ. ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯನ್ನು ಧ್ವನಿಸುವ ಭಾಷಿಕ ಸೊಗಡಿನ ಬರಹಗಳು ಮಾತ್ರವಲ್ಲದೇ ವಿವಿಧ ಭಾಷೆಗಳಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳು ಬರೆದ ಬರಹಗಳು ‘ಮನೀಷಾ’ ಸಂಚಿಕೆಯಲ್ಲಿವೆ. ಇವುಗಳ ಮೌಲಿಕತೆಯನ್ನು ಪರಿಗಣಿಸಿ ಒಟ್ಟು 350 ಅಂಕಗಳಲ್ಲಿ 266 ಅಂಕಗಳನ್ನು ತಜ್ಞರ ಸಮಿತಿ ನೀಡಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಮನೀಷಾ’ ಸಂಚಿಕೆಯ ಎಸ್.ಡಿ.ಎಂ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಬಿ.ಗಣೇಶ್‌ನಾಯಕ್, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ಸೌಮ್ಯ ಬಿ.ಪಿ, ‘ಮನೀಷಾ’ ಸಂಪಾದಕೀಯ ಮಂಡಳಿಯ ಸಂಯೋಜಕರಾದ ಡಾ.ರಾಜಶೇಖರ ಹಳೆಮನೆ, ಸದಸ್ಯ ವಿರಾಟ್ ಪದ್ಮನಾಭ ಅವರು ಭಾಗವಹಿಸಿದ್ದರು.

ಯೋಗ ಮತ್ತು ಪ್ರಕೃತಿ ಚಿಕಿತ್ಸೆ: ಮೂರನೆ ಅಂತರರಾಷ್ಟ್ರೀಯ ಸಮ್ಮೇಳನ ಸಮಾರೋಪ ಸಮಾರಂಭ

Article Image

ಯೋಗ ಮತ್ತು ಪ್ರಕೃತಿ ಚಿಕಿತ್ಸೆ: ಮೂರನೆ ಅಂತರರಾಷ್ಟ್ರೀಯ ಸಮ್ಮೇಳನ ಸಮಾರೋಪ ಸಮಾರಂಭ

ಉಜಿರೆ: ದೇಹ ಮತ್ತು ಮನಸ್ಸಿಗೆ ಅವಿನಾಭಾವ ಸಂಬಂಧವಿದ್ದು, ಔಷಧಿರಹಿತ ಪ್ರಕೃತಿಚಿಕಿತ್ಸೆ ಮೂಲಕ ನಾವು ಆರೋಗ್ಯಭಾಗ್ಯವನ್ನು ಹೊಂದಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು ಎಂದು ಕೇಂದ್ರ ಸಚಿವ ಅರ್ಜುನ್‌ರಾಮ್ ಮೇಘವಾಲ್ ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಆಯುಷ್ ಇಲಾಖೆ ಮತ್ತು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ ಯೋಗ ಮತ್ತು ಪ್ರಕೃತಿಚಿಕಿತ್ಸೆ ಬಗ್ಗೆ ಮೂರನೆ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಸಮಾರೋಪ ಭಾಷಣ ಮಾಡಿದರು. ನಮ್ಮ ದೇಹ ಮತ್ತು ನಮ್ಮ ಸುತ್ತಲಿನ ಪ್ರಕೃತಿ, ಪರಿಸರ ಪಂಚಭೂತಗಳಿಂದ ರೂಪಿಸಲ್ಪಟ್ಟಿದೆ. ಎಲ್ಲದರಲ್ಲಿಯೂ ಅಧಿಕ ಪ್ರಮಾಣದಲ್ಲಿ ನೀರಿನ ಅವಶ್ಯಕತೆ ಇದೆ. ಆಹಾರ-ವಿಹಾರಕ್ಕೆ ದೇಹ ಸಹಕಾರಿಯಾದರೆ ಪ್ರೀತಿ-ವಿಶ್ವಾಸ, ಸೇವೆ, ಅನುಕಂಪ ಮೊದಲಾದ ಮಾನವೀಯಮೌಲ್ಯಗಳ ಉದ್ದೀಪನಕ್ಕೆ ಮನಸ್ಸು ಪ್ರೇರಕವಾಗಿದೆ. ಪರಿಶುದ್ಧ ಮನದೊಂದಿಗೆ ನಾವು ಎಲ್ಲರೊಂದಿಗೆ ಪ್ರೀತಿ-ವಿಶ್ವಾಸದಿಂದ ಬೆರೆತಾಗ ಸುಖ-ಶಾಂತಿ, ನೆಮ್ಮದಿಯ ಬದುಕು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಧರ್ಮಸ್ಥಳದಲ್ಲಿ ನಿತ್ಯವೂ ನಡೆಯುತ್ತಿರುವ ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತು ಅಭಯದಾನ ಎಂಬ ಚತುರ್ವಿಧ ದಾನಪರಂಪರೆ ತ್ಯಾಗ, ಸೇವೆ ಹಾಗೂ ಲೋಕಕಲ್ಯಾಣ ಕಾರ್ಯಗಳನ್ನು ಅವರು ಶ್ಲಾಘಿಸಿ ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಿದರು. ಇಂತಹ ಕಲ್ಯಾಣಕಾರ್ಯಗಳಿಂದ ಭಾರತ “ವಿಶ್ವಗುರು” ಮಾನ್ಯತೆ ಹೊಂದಿದೆ. ತಾವು ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರನ್ನು ದೆಹಲಿಯಲ್ಲಿ ತಮ್ಮ ಮನೆಗೆ ಆಹ್ವಾನಿಸಿ ಗೌರವಿಸುವುದಾಗಿ ಸಚಿವರು ತಿಳಿಸಿದರು. ಸಚಿವರು ಪ್ರಶ್ನೋತ್ತರ ರೂಪದಲ್ಲಿ ಪ್ರತಿನಿಧಿಗಳಿಂದಲೆ ಮಾಹಿತಿ ಪಡೆದು ತಮ್ಮ ಭಾಷಣವನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ಯಶಸ್ವಿಯಾದರು. ಪ್ರತಿನಿಧಿಗಳ ಪರವಾಗಿ ಉತ್ತರ ಪ್ರದೇಶದ ಡಾ. ನೀರಜ್, ಆಂಧ್ರಪ್ರದೇಶದ ಡಾ. ಶಶಿಕಲಾ ಮತ್ತು ಪುತ್ತೂರಿನ ಡಾ. ಸುಲೇಖಾ ವರದರಾಜ್ ತಮ್ಮ ಅಭಿಪ್ರಾಯ, ಅನಿಸಿಕೆ ವ್ಯಕ್ತಪಡಿಸಿದರು. ಬೆಂಗಳೂರಿನ ಡಾ. ಸೀತಾರಾಮ ಜಿಂದಾಲ್ ಅವರ ವಿಶೇಷ ಸೇವೆ, ಸಾಧನೆಗಾಗಿ ಜೀವಮಾನ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಪರವಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಡಾ. ಬಬಿನಾ ಪ್ರಶಸ್ತಿ ಸ್ವೀಕರಿಸಿದರು. ಪ್ರಕೃತಿ ಚಿಕಿತ್ಸಾ ಕ್ಷೇತ್ರದಲ್ಲಿ ವಿಶೇಷ ಸೇವೆ ಮಾಡಿದ ಡಾ. ನವೀನ್ ಕೆ.ವಿ. ಡಾ. ಕನಕಸೋನಿ, ಡಾ. ಗಾಯತ್ರಿ, ಡಾ. ನಿತೇಶ್, ಡಾ. ರಾಘವೇಂದ್ರ ರಾವ್, ಡಾ. ಬಬಿನಾ, ಡಾ. ಮಂಜುನಾಥ್ ಮತ್ತು ಡಾ. ಅಖಿಲಾ ಅವರನ್ನು ಸನ್ಮಾನಿಸಲಾಯಿತು. ಡಾ. ನವೀನ್ ಕೆ.ವಿ. ವರದಿ ಸಾದರಪಡಿಸಿದರು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ ಪ್ರಕೃತಿಚಿಕಿತ್ಸಾ ಪದ್ಧತಿಯಿಂದ ಔಷಧಿ ರಹಿತವಾಗಿ ಹೆಚ್ಚಿನ ರೋಗಗಳನ್ನು ಶಮನಗೊಳಿಸಬಹುದು. ಆಧುನಿಕ ಜೀವನಶೈಲಿ, ಆಹಾರ-ವಿಹಾರ ಹಾಗೂ ಪ್ರಕೃತಿಯಿಂದ ನಾವು ವಿಮುಖರಾಗಿರುವುದೇ ಹೆಚ್ಚಿನ ರೋಗಗಳು ಬರಲು ಕಾರಣ ಎಂದು ಅವರು ಹೇಳಿದರು. ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಡಿ. ಹರ್ಷೇಂದ್ರ ಕುಮಾರ್, ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸ್ವಾಗತಿಸಿದರು. ಉಪಪ್ರಾಂಶುಪಾಲ ಡಾ. ಸುಜಾತ ಧನ್ಯವಾದವಿತ್ತರು.

ಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಗೆ ಶೇ. 100 ಫಲಿತಾಂಶ

Article Image

ಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಗೆ ಶೇ. 100 ಫಲಿತಾಂಶ

ಮೂಡುಬಿದಿರೆ : ಮೂಡುಬಿದಿರೆಯ ಕಲ್ಲಬೆಟ್ಟುಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಯ ಅಂತಿಮ ಪರೀಕ್ಷೆಯಲ್ಲಿ ಶೇ. 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 20 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ. ರುಚಿರಾ ಕುಂದರ್ ಶೇ. 91% ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಶೇ. 90% ಅಂಕ ಗಳಿಸಿದ ಆಂಥಿಯಾ ಶೈನ, ಮಿರಂಡಾ ದ್ವಿತೀಯ ಸ್ಥಾನ ಹಾಗೂ ಶಿಖಾ ಶೆಟ್ಟಿ ಶೇ 86.6 % ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಸಂಸ್ಥೆಯ ಅಧ್ಯಕ್ಷರು ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

First Previous

Showing 5 of 15 pages

Next Last