Article Image

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಅಂತರ್ ಕಾಲೇಜು ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವ ವೆಂಚುರ- 2025

Article Image

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಅಂತರ್ ಕಾಲೇಜು ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವ ವೆಂಚುರ- 2025

ಉಜಿರೆ, ಮಾ. 15: ಪ್ರತಿಯೊಂದು ವಿಚಾರವನ್ನು ನೇರವಾಗಿ ಒಪ್ಪದೇ ಅದನ್ನು ಪ್ರಶ್ನಿಸುವ ಅಭ್ಯಾಸ ಬೆಳೆಸಿಕೊಂಡಾಗ ಕ್ರಿಯಾಶೀಲತೆ ಹೆಚ್ಚಾಗುತ್ತದೆ ಎಂದು ಬೆಂಗಳೂರಿನ ಅಮೆಜಾನ್ ಡೆವಲಪ್ ಮೆಂಟ್ ಸೆಂಟರ್ನ ರಿಸ್ಕ್ ಇನ್ವೆಸ್ಟಿಗೇಷನ್ ಮ್ಯಾನೇಜರ್ ದೀಪಕ್ ರಾಜ್ ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ವಾಣಿಜ್ಯ ಮತ್ತು ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗಗಳ ಆಶ್ರಯದಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ (ಸಿ.ಸಿ.ಎ.) ಇಂದು (ಮಾ. 15) ಆಯೋಜಿಸಿದ್ದ ರಾಜ್ಯ ಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವ 'ವೆಂಚುರ- 2025' ಉದ್ಘಾಟಿಸಿ ಅವರು ಮಾತನಾಡಿದರು. "ಪ್ರತಿಯೊಂದು ವಿಚಾರದಲ್ಲೂ ಏನು ಮತ್ತು ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ನಮ್ಮಲ್ಲಿರಬೇಕು. ಆ ಸ್ಪಷ್ಟತೆ ಇದ್ದರೆ ಮಾತ್ರ ಯಶಸ್ಸು ನಮ್ಮದಾಗುತ್ತದೆ. ಪ್ರಪಂಚವು ಅನ್ವೇಷಕರನ್ನು (Inventors) ಸದಾ ನೆನಪಿನಲ್ಲಿ ನೆನಪಿಟ್ಟುಕೊಳ್ಳುತ್ತದೆ. ಹಾಗಾಗಿ ಕುತೂಹಲ ಇರುವ ಮನಸ್ಸುಗಳು ಮಾತ್ರ ಇನ್ವೆಂಟರ್ ಆಗಲು ಸಾಧ್ಯ. ಪ್ರತೀ ದಿನ 5 ನಿಮಿಷ ನಮ್ಮನ್ನು ಅವಲೋಕನ ಮಾಡಲು ಸಮಯ ನೀಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ನಮ್ಮನ್ನು ನಾವು ಅರಿತುಕೊಳ್ಳಬೇಕು" ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ)ದ ಸಂಯೋಜಕ ಗಜಾನನ ಆರ್. ಭಟ್ ಮಾತನಾಡಿ, "ವಾಣಿಜ್ಯ ಮತ್ತು ಉದ್ಯಮ ಎನ್ನುವುದು ಎಲ್ಲಾ ಅಪಾಯಗಳ ವಿರುದ್ಧ ಹೋರಾಡುವುದನ್ನು ಕಲಿಸುವ ಪ್ರಪಂಚವಾಗಿದೆ. ಉದ್ಯಮಿಗಳು ಈ ದೇಶವನ್ನು ನಿರ್ಮಾಣ ಮಾಡುವವರು. ಹಣ ಎನ್ನುವುದು ನಮಗೆ ಹೂಡಿಕೆ, ಗಳಿಸುವಿಕೆಯನ್ನು ಕಲಿಸುತ್ತದೆ" ಎಂದರು. ಇದೇ ಸಂದರ್ಭದಲ್ಲಿ, ಕಾಲೇಜಿನ ವಾಣಿಜ್ಯ ನಿಕಾಯದ ಡೀನ್, ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗ ಮುಖ್ಯಸ್ಥೆ ಶಕುಂತಲಾ ಅವರಿಗೆ ನಿವೃತ್ತ ಪ್ರಾಂಶುಪಾಲ ಡಾ. ಉದಯಚಂದ್ರ ಪಿ.ಎನ್. ಅವರು ಸಂಶೋಧನೆಗೆ ನೆರವಾಗಲು ಪ್ರೋತ್ಸಾಹಧನ ನೀಡಿದರು. ಫೆಸ್ಟ್ ಅಂಗವಾಗಿ ಆಯೋಜಿಸಿದ್ದ ಅಂತರ್ ತರಗತಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಿ.ಎಸ್.ಇ.ಇ.ಟಿ. ಮತ್ತು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ., ಕಾರ್ಯಕ್ರಮ ಸಂಯೋಜಕರಾದ ವಿನುತಾ ಡಿ.ಎಂ. ಮತ್ತು ಗುರುರಾಜ್ ಜಿ., ಸಿ.ಸಿ.ಎ. ಸಿಇಒ ದೀಕ್ಷಿತಾ, ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ವಿವಿಧ ಕಾಲೇಜುಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಶಕುಂತಲಾ ಸ್ವಾಗತಿಸಿದರು. ಕ್ಷಿತಿ ಮತ್ತು ತಂಡ ಪ್ರಾರ್ಥಿಸಿದರು. ಸಿ.ಸಿ.ಎ. ಕಾರ್ಯದರ್ಶಿ ಸಹನಾ ಡೋಂಗ್ರೆ ವಂದಿಸಿದರು. ಸುಶ್ಮಿತಾ ಬಿ., ಜಯಸೂರ್ಯ ನಾಯಕ್, ಕ್ಷಿತಿ ಕೆ. ರೈ, ಐಶ್ರೀ ಕೆ., ಶರ್ಮಿಳಾ ಎಂ.ಆರ್., ಭೂಮಿಕಾ ಕೆ.ಎಲ್. ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ಮಂಗಳೂರು ವಿವಿ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟ

Article Image

ಮಂಗಳೂರು ವಿವಿ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟ

ಮೂಡುಬಿದಿರೆ: ಕುಂದಾಪುರದ ಭಂಡಾರಕರ‍್ಸ್ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಹಿಳಾ ಮತ್ತು ಪುರುಷರ ಎರಡು ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಮಹಿಳಾ ತಂಡವು ಒಟ್ಟು 6 ಚಿನ್ನ, 2 ಬೆಳ್ಳಿ ಪದಕ ಪಡೆದು ಒಟ್ಟು 58 ಅಂಕ ಪಡೆದು ಈ ಸಾಧನೆ ಮೆರೆದಿದೆ. ಪುರುಷರ ವಿಭಾಗವು 4 ಚಿನ್ನ, 4 ಬೆಳ್ಳಿ, 1 ಕಂಚಿನ ಪದಕ ಗಳಿಸಿ ಒಟ್ಟು 55 ಅಂಕಗಳೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. 55ಕೆಜಿ ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕಾಲೇಜಿನ ಪ್ರಶಾಂತ್ ‘’ಬೆಸ್ಟ್ ಲಿಫ್ಟರ್’ ವೈಯಕ್ತಿಕ ಪ್ರಶಸ್ತಿಯನ್ನು ಪಡೆದರು. ಪುರುಷರ ವಿಭಾಗದಲ್ಲಿ ಪ್ರಶಾಂತ್, ಸಂತೋಷ್, ಪ್ರತ್ಯೂಶ್, ಜೋಸುವ ರಾಜ್‌ಕುಮಾರ್ ಚಿನ್ನದ ಪದಕ ಪಡೆದರೆ, ನಾಗರಾಜ್, ನಾಗೇಂದ್ರ ಅಣ್ಣಪ್ಪ, ದರ್ಶನ್, ಶಶಾಂಕ್ ಬೆಳ್ಳಿ ಪದಕ ಪಡೆದರು. ಮಹಿಳಾ ವಿಭಾಗದಲ್ಲಿ ಶ್ರಾವ್ಯ, ಸೀಮಾ, ಅನುಷಾ, ತನುಷಾ, ವಿತಶ್ರೀ, ದಿವ್ಯಾ ಚಿನ್ನದ ಗಳಿಸಿದರೆ, ಮಲ್ಲಮ್ಮ, ನಾಗಶ್ರೀ ಬೆಳ್ಳಿ ಪದಕ ಮಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

ಆಳ್ವಾಸ್ ನಲ್ಲಿ 2 ದಿನದ ಟೆಕ್ ಉತ್ಸವ್ - 2025

Article Image

ಆಳ್ವಾಸ್ ನಲ್ಲಿ 2 ದಿನದ ಟೆಕ್ ಉತ್ಸವ್ - 2025

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನಡೆಯಲಿರುವ 2 ದಿನಗಳ ಟೆಕ್ ಉತ್ಸವ್ - 2025, ಅಂತರಕಾಲೇಜು ತಂತ್ರಜ್ಞಾನ ಸಂಬAಧಿ ಸ್ಪರ್ಧೆಗಳಿಗೆ ವಿದ್ಯಾಗಿರಿಯ ಡಾ ವಿ ಎಸ್ ಅಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಜ್ಯುಗೊ ಸ್ಟುಡಿಯೋ ಪ್ರೈ. ಲಿ. ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರಿದAತೆ ಅವುಗಳ ಬಳಕೆಗೆ ಅಗತ್ಯವಿರುವ ಪರಿಣತಿಯನ್ನು ಪಡೆದುಕೊಳ್ಳುವುದು ಬಹಳ ಅವಶ್ಯ. ಬದಲಾಗುತ್ತಿರುವ ತಂತ್ರಜ್ಞಾನದ ಅವಶ್ಯಕತೆ ಹಾಗೂ ಅವುಗಳ ಬಳಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಳೆದ 15 ವರ್ಷಗಳ ತಾಂತ್ರಿಕ ಬದಲಾವಣೆ ಗಣನೀಯವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯು ಇನ್ನಷ್ಟು ಪ್ರಗತಿ ಹೊಂದಲಿದೆ. ಟೆಕ್ಕಿಗಳು, ಇಂಜಿನಿಯರ್ ಗಳು ತಂತ್ರಜ್ಞಾನವನ್ನು ಬಳಸುವ ವಿಧಾನದ ಮೇಲೆ ಒಟ್ಟು ಸಮಾಜದ ರೀತಿ ಅವಲಂಬಿತವಾಗಿರುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ತಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಫೆಸ್ಟ್ಗಳಿಗೆ ಯಾವ ರೀತಿಯ ಹೆಚ್ಚು ಮಹತ್ವ ನೀಡುತ್ತಾರೋ ಅದೇ ರೀತಿ ತಮ್ಮ ಜೀವನದ ಕೌಶಲ್ಯಗಳ ವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು. ಸರ್ಟಿಫಿಕೇಟ್ ಪಡೆಯುವುದಕ್ಕಾಗಿ ಕಲಿಕೆಯನ್ನ ಸೀಮಿತಗೊಳಿಸದೆ ಕಲಿತ ಪಾಠವನ್ನು ಅಳವಡಿಸಿಕೊಳ್ಳುವ ಪ್ರಯತ್ನವಿರಬೇಕು ಆಗ ಮಾತ್ರ ಬದುಕಿನಲ್ಲಿ ಒಂದು ಉನ್ನತಿಯೆಡೆಗಿನ ಪಯಣ ಸಾಧ್ಯ. ಐಟಿ ಯುಗದಲ್ಲಿರುವ ನಾವುಗಳು ನೂತನ ತಂತ್ರಜ್ಞಾನಗಳ ಮಾಹಿತಿಯನ್ನು ತಿಳಿಯುವುದು ಹಾಗೂ ಅವುಗಳನ್ನು ಬಳಸಿಕೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಗತ್ಯ ಎಂದರು. ಉದ್ಘಾಟನೆಯ ಬಳಿಕ ಐಟಿ ಕ್ವಿಜ್ , ಕಲ್ಚರಲ್ ಡಾನ್ಸ್, ಐಟಿ ಮ್ಯಾನೇಜರ್, ವೆಬ್ ಡಿಸೈನಿಂಗ್, ಕೊಡಿಂಗ್, ವೀಡಿಯೊಗ್ರಾಫಿ ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಎರಡು ದಿನಗಳ ಟೆಕ್ ಉತ್ಸವ್‌ದಲ್ಲಿ ವಿವಿಧ ಭಾಗಗಳಿಂದ 400 ಅಧಿಕ ವಿದ್ಯಾರ್ಥಿಗಳು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್, ವಿಭಾಗದ ಮುಖ್ಯಸ್ಥೆ ವನಿತಾ ಪ್ರಭು, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ವಿದ್ಯಾರ್ಥಿ ಸಂಯೋಜಕಿ ಸಮೀಕ್ಷಾ ಎಸ್ ಹಾಗೂ ಶಿಶಿರ್ ಎಸ್ ಉಪಸ್ಥಿತರಿದ್ದರು. ಶ್ರೀಶ್ ಕೋಟೆಗಾರ ಕಾರ್ಯಕ್ರಮ ನಿರೂಪಿಸಿದರು.

ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು

Article Image

ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು

ಉಜಿರೆ, ಮಾ.12: ಹೆಣ್ಣುಮಕ್ಕಳಿಗೆ ಶಿಕ್ಷಣ ಎನ್ನುವುದು ಪಠ್ಯವಲ್ಲ, ಅದು ಅವರ ಸಶಕ್ತೀಕರಣದ ಸಾಧನ. ಪ್ರಸ್ತುತ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ. ಹೆಣ್ಣು ಶಕ್ತಿಯಾದಾಗ ಸಮಾಜ ಮತ್ತಷ್ಟು ಬೆಳೆಯಲು ಸಾಧ್ಯ ಎಂದು ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆ ಹೇಳಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇಂದು (ಮಾ. 12) ಮಹಿಳಾ ಕುಂದುಕೊರತೆ ನಿವಾರಣಾ ಕೋಶ, ಆಂತರಿಕ ದೂರುಗಳ ಸಮಿತಿ, ಮಹಿಳಾ ಅಭಿವೃದ್ಧಿ ಕೋಶ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಆಯೋಜಿಸಿದ್ದ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. “ಮಹಿಳೆ ಎಂದರೆ ಕೇವಲ ಗೃಹಿಣಿಯಲ್ಲ, ಅವಳು ಧೈರ್ಯ, ಸಾಹಸ, ಛಲದ ಪ್ರತೀಕ. ಎಲ್ಲಿ ಮಹಿಳೆಗೆ ಗೌರವ ಸಿಗುತ್ತದೆಯೋ ಅಲ್ಲಿ ಸಮೃದ್ಧಿ ಲಭಿಸುತ್ತದೆ. ಮಹಿಳೆಯರು ದೇಶದ ಆಸ್ತಿಯಾಗಬೇಕು. ನಮ್ಮ ಯೋಜನೆಗಳಿಂದ ಅನೇಕ ಗ್ರಾಮೀಣ ಮಹಿಳೆಯರು ಪ್ರಗತಿ ಸಾಧಿಸಿದ್ದು ಸಂತಸದಾಯಕ" ಎಂದು ಅವರು ಹೇಳಿದರು. “ನಮ್ಮ ಹಲವು ಯೋಜನೆಗಳಿಂದ ಅನೇಕ ಗ್ರಾಮೀಣ ಮಹಿಳೆಯರು ಪ್ರಗತಿ ಸಾಧಿಸಿದ್ದು, ಜ್ಞಾನ ವಿಕಾಸ, ಗೆಳತಿ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಅನೇಕ ಮನೆಗಳಿಗೆ ಒಳಿತಾಗಿದೆ. ನಮ್ಮ ಯೋಜನೆಗಳಿಂದ ಸಬಲರಾದ ಅನೇಕ ಮಹಿಳೆಯರು ತಮ್ಮ ಸಾಧನೆಗಳನ್ನು ಹಂಚಿಕೊಂಡಾಗ ಅವರ ಕಣ್ಣಲ್ಲಿ ಹೆಮ್ಮೆ ಕಾಣುತ್ತದೆ" ಎಂದರು. ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, "ಮಹಿಳೆಯರ ಸಶಕ್ತೀಕರಣದ ವಿಚಾರ ಬಂದಾಗ ಕಲ್ಪನಾ ಚಾವ್ಲಾ, ಇಂದಿರಾ ಗಾಂಧಿ, ರಾಣಿ ಅಬ್ಬಕ್ಕ ಅವರಂತಹ ಹೆಮ್ಮೆಯ ನಾರಿಯರು ನೆನಪಿಗೆ ಬರುತ್ತಾರೆ. ಇವರು ಯಾವುದೇ ಕ್ಷೇತ್ರದಲ್ಲೂ ಮಹಿಳೆಯರು ಕಮ್ಮಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಅವರ ಹಾದಿಗಳು ಇಂದಿನ ಮಹಿಳೆಯರಿಗೆ ಆದರ್ಶ ಮತ್ತು ಸ್ಫೂರ್ತಿದಾಯಕ. ಯಾವ ದೇಶದಲ್ಲಿ ಹೆಣ್ಣನ್ನು ಪೂಜಿಸುತ್ತಾರೋ ಆ ದೇಶ ಸಶಕ್ತವಾಗುತ್ತದೆ"ಎಂದು ಹೇಳಿದರು. "ಮಹಿಳಾಭಿವೃದ್ಧಿಗಾಗಿ ಡಾ. ಹೇಮಾವತಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಶ್ರೀ ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಅನೇಕ ಹೆಣ್ಣು ಮಕ್ಕಳು ಸ್ವಾವಲಂಬಿಗಳಾಗಿದ್ದಾರೆ" ಎಂದರು. ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, "ದೇಶದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇರಬಹುದು. ಆದರೆ ಉನ್ನತ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚು ಎನ್ನುವುದು ಹೆಮ್ಮೆಯ ವಿಚಾರ. ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ, ಮಹಿಳೆಯರು ಇನ್ನಷ್ಟು ಶಿಕ್ಷಣ ಪಡೆಯಬೇಕು ಮತ್ತು ದೇಶದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಬೇಕು. ಈ ಕಾರ್ಯ ಮುಂದುವರಿಯಲು ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಬೇಕಾಗುತ್ತದೆ" ಎಂದರು. ದೇಶದ ಮಹಿಳೆಯರ ಕೊಡುಗೆ ಮತ್ತು ಸಾಧನೆಗಳನ್ನು ನೆನೆಯಲು, ವಿದ್ಯಾರ್ಥಿನಿಯರಿಂದ ಕಿರು ರೂಪಕ ಪ್ರದರ್ಶಶಿಸಲಾಯಿತು. ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು ಎಂಬ ವಿಷಯದ ಕುರಿತು ಬೆಂಗಳೂರಿನ ಜನಮನ್ ಫಾರ್ಮಸುಟಿಕಲ್ಸ್ ಪ್ರೈ.ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ ಅನಿಲಾ ದೀಪಕ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮ ಸಂಚಾಲಕರಾದ ಮಾಲಿನಿ ಅಂಚನ್ ಸ್ವಾಗತಿಸಿ, ಅಕ್ಷತಾ ಜೈನ್ ವಂದಿಸಿದರು. ವಿದ್ಯಾರ್ಥಿನಿಯರಾದ ಪೂರ್ವಿ ಮತ್ತು ತಂಡ ಪ್ರಾರ್ಥಿಸಿದರು. ಮಾನಸ ಅಗ್ನಿಹೋತ್ರಿ, ಹರ್ಷಿನಿ ಹಾಗೂ ಧರಿತ್ರಿ ಭಿಡೆ ನಿರೂಪಿಸಿದರು. ವಾಣಿಜ್ಯ ಕ್ಷೇತ್ರದ ತಜ್ಞರು, ಉದ್ಯಮಿಗಳು, ಮತ್ತು ಅಂತರಸಂಸ್ಥಾ ಪ್ರತಿನಿಧಿಗಳು ಭಾಗವಹಿಸಿ, ಕ್ರಿಯಾಶೀಲತೆಯ ಮಹತ್ವ ಕುರಿತು ಚರ್ಚೆ ನಡೆಸಿದರು. ಚರ್ಚಾ ಕೂಟದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕಿ ಮತ್ತು ಅಧ್ಯಕ್ಷೆ ಡಾ. ಪ್ರೀತಿ ಕೀರ್ತಿ ಡಿಸೋಜ ವಹಿಸಿದ್ದರು. ಚರ್ಚೆಯಲ್ಲಿ ಉಜಿರೆಯ ಶ್ರೀ ಧ.ಮಂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಟಿ. ಎನ್. ಕೇಶವ, ಸಂಧ್ಯಾ ಫ್ರೆಶ್‌ನ ಸಹಸಂಸ್ಥಾಪಕಿ ಮನೋರಮಾ ಭಟ್ಟ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಪೂರ್ವಾಧ್ಯಕ್ಷೆ ಅರ್ಚನಾ ರಾಜೇಶ್ ಪೈ ಭಾಗವಹಿಸಿದರು. ಮಹಿಳೆ ಮತ್ತು ಹೂಡಿಕೆ ಎಂಬ ವಿಷಯದ ಕುರಿತು ವಿಶೇಷ ಸಂವಾದಾತ್ಮಕ ಚಟುವಟಿಕೆ ನಡೆಯಿತು. ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ. ಜ್ಞಾನ ವಿಕಾಸ ಯೋಜನಾಧಿಕಾರಿ ಸಂಗೀತಾ ಮತ್ತು ಬೆಳ್ತಂಗಡಿ ತಾ.ಪಂ. ಕ್ಲಸ್ಟರ್ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ‘ಎಂಪವರ್ ಎಕ್ಸ್ಪೋ’ ವಿಶಿಷ್ಟ ಪ್ರದರ್ಶನ ಮತ್ತು ಮಾರಾಟ ಮಳಿಗೆ ಏರ್ಪಡಿಸಲಾಗಿತ್ತು, ಇದರಲ್ಲಿ ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿದರು. ಡಾ ಹೇಮಾವತಿ ವೀ ಹೆಗ್ಗಡೆ ಉದ್ಘಾಟಿಸಿದರು.

ಆಳ್ವಾಸ್ ಕಾಲೇಜಿನ ಹಿಂದಿ ವಿಭಾಗದಿಂದ ಉಮಂಗ್-2025

Article Image

ಆಳ್ವಾಸ್ ಕಾಲೇಜಿನ ಹಿಂದಿ ವಿಭಾಗದಿಂದ ಉಮಂಗ್-2025

ವಿದ್ಯಾಗಿರಿ: ‘ಉಮಂಗ್ ಮೇ ಮತ್ ಫಾಸ್ ಯೇ ದುನಿಯಾ ಕಾ ಖೇಲ್ ಹೇ’ (ಅತ್ಯುತ್ಸಾಹದಲ್ಲಿ ಮುಳುಗದಿರು, ಇದು ಜಗದ ಆಟ) ಎಂದು ಮೂಡುಬಿದಿರೆಯ ಜೈನ್ ಪ್ರೌಢಶಾಲೆಯ ನಿವೃತ್ತ ಹಿಂದಿ ಶಿಕ್ಷಕ ರಾಯಿ ರಾಜಕುಮಾರ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ 'ಉಮಂಗ್-2025' ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಎಲ್ಲಾ ಭಾಷೆಯು ನಮಗೆ ಉಪಯೋಗಿಯಾಗಿರುತ್ತೆ. ಅದು ಇಂಗ್ಲಿಷ್, ಹಿಂದಿ, ಕನ್ನಡ ಯಾವುದೇ ಭಾಷೆ ಆಗಲಿ. ಅವುಗಳನ್ನು ಬಳಸಿಕೊಂಡು ನಮ್ಮನು ನಾವು ಬೆಳಸಿಕೊಳ್ಳಬೇಕಾದ ಅವಶ್ಯಕತೆ ಇದೆ’ ಎಂದರು. ಉಮಂಗ್ ಎಂದರೆ ಖುಷಿ, ಆನಂದ, ಉಲ್ಲಾಸ, ಅತ್ಯುತ್ಸಾಹ. ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ, ಸುಖದ ಅನುಭವ ಎಲ್ಲರಿಗೂ ಸಿಗಬೇಕು ಅದುವೇ ಉಮಂಗ್ ಎಂದರು. ಯಾವುದೇ ಕೆಲಸವಾಗಲಿ, ಅದನ್ನು ಮನಸ್ಸಿನಿಂದ ಮಾಡಿದಾಗಲೇ ಉತ್ಸಾಹ. ಖುಷಿ ಎನ್ನುವಂತದ್ದು, ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ನಮ್ಮ ಬದುಕನ್ನು ನಾವು ಎಷ್ಟರ ಮಟ್ಟಿಗೆ ಉಪಯೋಗಿಸಿಕೊಳ್ಳುತ್ತೇವೆ. ಅಷ್ಟರ ಮಟ್ಟಿಗೆ ನಾವು ಬೆಳೆಯಲು ಸಾಧ್ಯವಿದೆ’ ಎಂದರು. ಝೆಂಕೊ.ಐಒ ಸಂಸ್ಥೆಯ ಸಿಇಒ ಡಿಂಪಲ್ ಪರ್ಮಾರ್ ಮಾತನಾಡಿ, ‘ಹಿಂದಿ ಕೇವಲ ಒಂದು ಭಾಷೆಯಲ್ಲ. ಅದು ನಮ್ಮ ಸಾಂಸ್ಕೃತಿಕ ಗುರುತು ಹಾಗೂ ಘನತೆಯಾಗಿದೆ. ಭಾಷೆಯಯೊಂದಿಗೆ ಅಭಿವೃದ್ಧಿ ಹೊಂದುವ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತದೆ. ಹಿಂದಿ ನಮ್ಮನು ಪ್ರೀತಿ ಸೂತ್ರದಲ್ಲಿ ಒಂದಾಗಿಸುತ್ತದೆ. ಇದು ಸಂವಹನದ ಮಾದ್ಯಮವಷ್ಟೇ ಅಲ್ಲ. ಇದು ಸಂವೇದನೆಯ ಆತ್ಮವಾಗಿದೆ. ಭಾಷೆ ಗಟ್ಟಿಯಾಗಿದ್ದರೆ, ಆ ಭಾಷಿಕರ ಯೋಚನೆಯೂ ದೃಢವಾಗಿರುತ್ತದೆ. ನಿಮಗೆ ಜೀವನದಲ್ಲಿ ದೊಡ್ಡ ಸವಾಲುಗಳು ಬರಲಿವೆ. ನಾವು ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ ಎಂದರು. ಜೀವನದಲ್ಲಿ ಫಲಿತಾಂಶದ ಬಗ್ಗೆ ಯೋಚಿಸಬೇಡಿ, ಯಾವಾಗಲೂ ನೀವು ಸ್ಪರ್ಧೆಯನ್ನು ಹೇಗೆ ಎದುರಿಸುತ್ತೀರಿ ಎಂಬುದರ ಮೇಲೆ ನಿಮ್ಮ ಗುರಿಯನ್ನು ಕೇಂದ್ರೀಕರಿಸಿ. ನೀವು ನಿಮ್ಮ ಮೇಲೆ ನಂಬಿಕೆ ಇಡಿ. ಏಕೆಂದರೆ ಸೋಲು ಗೆಲುವು ಮುಖ್ಯವಲ್ಲ. ನಿಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪ ಮಾತ್ರ ಮುಖ್ಯವಾಗುತ್ತದೆ. ನೀವು ನಿಮ್ಮನ್ನು ಯಾರಿಗೂ ಸಾಬೀತುಪಡಿಸುವ ಅಗತ್ಯವಿಲ್ಲ ನೀವು ಸುಧಾರಿಸಿಕೊಳ್ಳುವುದು ಮುಖ್ಯ. ಅದಕ್ಕಾಗಿ ನಿರಂತರ ಪ್ರಯತ್ನ ಮುಂದುವರಿಸಿ’ ಎಂದರು. ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ ಎನ್ ಪಿ ನಾರಾಯಣ ಶೆಟ್ಟಿ, ಮಾತನಾಡಿ ಭಾಷೆ ಮನುಷ್ಯನ ವಿಕಾಸಕ್ಕೆ ದಾರಿಯನ್ನು ಒದಗಿಸುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಸಾಮಾನ್ಯ. ಸೋತಾಗ ಧೃತಿಗೆಡದೆ, ಧೈರ್ಯದಿಂದ ಎದುರಿಸಬೇಕು ಎಂದರು. ‘ಉಮಂಗ್-2025' ರ ಅಂಗವಾಗಿ ನಡೆದ ಸ್ಪರ್ಧೆಗಳಾದ ಚರ್ಚಾ ಸ್ಪರ್ಧೆ, ಸ್ಟ್ಯಾಂಡ್ ಅಪ್ ಕಾಮಿಡಿ, ಭಾಷಾಂತರ, ರೀಲ್ಸ್, ಕಿರು ಪ್ರಹಸನದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದರು. ಸೈಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿವಿಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಹಿಂದಿ ವಿಭಾಗದ ಸಂಯೋಜಕ ಡಾ. ದತ್ತಾತ್ರೇಯ ಹೆಗ್ಡೆ, ಹಿರಿಯ ವಿದ್ಯಾರ್ಥಿಗಳಾದ ತನೀಷಾ, ಸ್ಪರ್ಷ, ವಿದ್ಯಾರ್ಥಿ ಸಂಯೋಜಕರಾದ ಖುಷಿ ಕುಡಾಲ್ಕರ್ ಮತ್ತು ಜೊನಾಥನ್ ಡಿ’ಸೋಜಾ ಇದ್ದರು. ವಿದ್ಯಾರ್ಥಿನಿ ವಿನೆಟ್ ವಾಸ್, ವೃದ್ಧಿ ರೈ ನಿರೂಪಿಸಿದರು.

ಉಜಿರೆ ಎಸ್‌.ಡಿ.ಎಂ. ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವ

Article Image

ಉಜಿರೆ ಎಸ್‌.ಡಿ.ಎಂ. ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವ

ಉಜಿರೆ: ಯುವ ಪತ್ರಕರ್ತರು ಯಾವುದೇ ಬೆದರಿಕೆಗಳಿಗೆ ಬಗ್ಗದೆ ನಿರ್ಭೀತ ನಡೆಯಿಂದ ವೃತ್ತಿಪರತೆಯಿಂದ ಕಾರ್ಯಪ್ರವೃತ್ತರಾದಾಗ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಶಿರಾದ ವರ್ಧಮಾನ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ, ಶಿಕ್ಷಣ ತಜ್ಞ ಸಂಜಯ್ ಎಸ್. ಗೌಡ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಯೋಗದೊಂದಿಗೆ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ (ಪದವಿ ಮತ್ತು ಸ್ನಾತಕೋತ್ತರ), ಬಿ.ವೋಕ್ ವಿಭಾಗ (ಡಿಜಿಟಲ್ ಮೀಡಿಯಾ ಆ್ಯಂಡ್ ಫಿಲ್ಮ್ ಮೇಕಿಂಗ್) ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ 'ಸಮೂಹ ಮಾಧ್ಯಮ ವೃತ್ತಿಪರತೆ ಮತ್ತು ಸದ್ಯದ ಸವಾಲುಗಳು' ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ವೇಗವಾಗಿ ಪ್ರಸಾರವಾಗುತ್ತಿವೆ. ಅವುಗಳಲ್ಲಿ ಸತ್ಯ ಮತ್ತು ವಸ್ತುನಿಷ್ಠತೆ ಕಾಯ್ದುಕೊಳ್ಳುವುದು ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಅಗತ್ಯವಾಗಿದೆ. ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಂಶೋಧನಾತ್ಮಕವಾಗಿ ಕಾರ್ಯನಿರ್ವಹಿಸಿದರೆ ಸುದ್ದಿಗಳಲ್ಲಿ ನಿಖರತೆ ಕಾಯ್ದುಕೊಳ್ಳಬಹುದು. ಯುವಜನರ ವ್ಯವಸ್ಥಿತ ಭಾಗವಹಿಸುವಿಕೆಯಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಪದವೀಧರರಾಗಿ ಹೊರಹೋದ ನಂತರವೂ ಕಾಲೇಜಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಇದು ಪರಸ್ಪರರ ಅಭಿವೃದ್ಧಿಗೆ ಅವಶ್ಯ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಾಧ್ಯಮಗಳು ಪ್ರಜಾಪ್ರಭುತ್ವದ ಜೀವಾಳ. ಪತ್ರಕರ್ತರು ಸಮರ್ಪಕವಾಗಿ ಕೆಲಸ ಮಾಡಿದಾಗ ಪ್ರಜಾಪ್ರಭುತ್ವ ಸದೃಢವಾಗಿ ಉಳಿಯುತ್ತದೆ ಎಂದು ಹೇಳಿದರು. ಸರಿಯಾದ ಸಮಯದಲ್ಲಿ ಮಾಹಿತಿ ಮತ್ತು ತರಬೇತಿ ಪಡೆದುಕೊಳ್ಳುವುದರಿಂದ ಆವಶ್ಯಕ ಕೌಶಲ್ಯಗಳನ್ನು ವೃತ್ತಿಬದುಕಿನಲ್ಲಿ ಹೊಂದಬಹುದು. ವಿದ್ಯಾರ್ಥಿಗಳು ಅವಕಾಶಗಳು ಸಿಕ್ಕಿದಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಕಾರ್ಯಕ್ರಮದ ಪ್ರಧಾನ ಆಶಯವನ್ನು ಪ್ರಸ್ತುತಪಡಿಸಿ ಮಾತನಾಡಿದರು. ನಂಬಿಕೆ, ವಿಶ್ವಾಸ ಮತ್ತು ನಿರೀಕ್ಷೆಗಳನ್ನು ಸಮಾಜದಲ್ಲಿ ಮೂಡಿಸುವುದು ಮಾಧ್ಯಮಗಳ ಕೆಲಸವಾಗಿದೆ. ಮಾಧ್ಯಮಗಳು ಸಮಾಜದ ನಂಬಿಕೆ ಉಳಿಸಿಕೊಳ್ಳಬೇಕಾದರೆ ದಮನಿತರ ಧ್ವನಿಯಾಗಬೇಕು. ಆಗ ಅವುಗಳ ಅಸ್ತಿತ್ವವೂ ಉಳಿಯುತ್ತದೆ. ಸಾಮಾಜಿಕ ಮಾಧ್ಯಮಗಳ ಕಾರಣದಿಂದ ಮುಖ್ಯವಾಹಿನಿಯ ಮಾಧ್ಯಮಗಳಿಗೆ ಸವಾಲುಗಳು ಎದುರಾಗಿವೆ. ಇವುಗಳನ್ನು ಎದುರಿಸಬೇಕಾದರೆ ಮಾಧ್ಯಮದ ವಿದ್ಯಾರ್ಥಿಗಳು ಪತ್ರಿಕೋದ್ಯಮದ ಆಶಯ ಮತ್ತು ನೈತಿಕತೆಯನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸದ್ಯ ಪಾಸಿಟಿವ್ ಜರ್ನಲಿಸಂ ವಿಸ್ತರಿಸುವ ಅಗತ್ಯವಿದೆ. ಸುದ್ದಿ ಕೆರಳಿಸುವಂತಿರದೆ, ಶಮನ ನೀಡುವಂತಿರಬೇಕು ಎಂದರು. ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ವಿರಾಟ್ ಪದ್ಮನಾಭ ಅವರ 'ಬೆಟ್ಟದ ಹೂವು' ಪುಸ್ತಕ ಇತ್ತೀಚೆಗೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಲಾಯಿತು. ಉದ್ಘಾಟನಾ ಸಮಾರಂಭದ ಕುರಿತು ಪದವಿ ಪತ್ರಿಕೋದ್ಯಮ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ತಕ್ಷಣಕ್ಕೆ ಸಂಯೋಜಿಸಿದ ‘ಚಿಗುರು’ ಭಿತ್ತಿಪತ್ರಿಕೆಯ ವಿಶೇಷ ಸಂಚಿಕೆ ಅನಾವರಣಗೊಳಿಸಲಾಯಿತು. ವಿಚಾರ ಸಂಕಿರಣದೊಂದಿಗೆ ಆಯೋಜಿಸಿರುವ ಮಾಧ್ಯಮ ಪರ್ವ ಫೆಸ್ಟ್ ಥೀಮ್ ಸಾಂಗ್ ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಆಯೇಶಾ ಖಾನಂ, ಸಂಜಯ್ ಎಸ್. ಗೌಡ ಮತ್ತು ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ., ಉಜಿರೆಯ ಮಂಜುಶ್ರೀ ಪ್ರಿಂಟರ್ಸ್ ಪ್ರಬಂಧಕ ಶೇಖರ್ ಮತ್ತು ಉದ್ಯಮಿ ಶ್ರೀನಿವಾಸ ಗಲಗಲಿ ಅವರನ್ನು ಸನ್ಮಾನಿಸಲಾಯಿತು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಪ್ರಸ್ತಾವಿಸಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನೈದಿಲೆ ಮತ್ತು ಸಿಂಚನ ನಿರೂಪಿಸಿದರು. ಸಹನಾ ವಂದಿಸಿದರು.

ಉದ್ಯಮದಲ್ಲಿ ಯಶಸ್ಸಿಗಿಂತ ಪ್ರಗತಿ ಅಗತ್ಯ : ವಾಲ್ಟರ್ ನಂದಳಿಕೆ

Article Image

ಉದ್ಯಮದಲ್ಲಿ ಯಶಸ್ಸಿಗಿಂತ ಪ್ರಗತಿ ಅಗತ್ಯ : ವಾಲ್ಟರ್ ನಂದಳಿಕೆ

ಮೂಡುಬಿದಿರೆ: ಯಾವುದೇ ಉದ್ಯಮದಲ್ಲಿ ಯಶಸ್ಸು ಗಳಿಸುವುದಕ್ಕಿಂತಲೂ ಪ್ರಗತಿ ಹೊಂದುವುದು ಮುಖ್ಯ, ಸೋಲು ಕಂಡ ವ್ಯಕ್ತಿ ಗೆಲ್ಲುವ ಗುಟ್ಟನ್ನು ಚೆನ್ನಾಗಿ ಕಲಿಸಬಲ್ಲನು ಎಂದು ದೈಜಿವರ್ಲ್ಡ್ ವಾಹಿನಿಯ ಸ್ಥಾಪಕ ಹಾಗೂ ಮುಖ್ಯ ಸಂಪಾದಕ ವಾಲ್ಟರ್ ನಂದಳಿಕೆ ಹೇಳಿದರು. ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ‘ಟ್ರೈಬ್ಲೇಜ್’ ವಿದ್ಯಾರ್ಥಿ ವೇದಿಕೆವತಿಯಿಂದ ಹಮ್ಮಿಕೊಂಡ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ದೈಜಿವರ್ಲ್ಡ್ ಸಂಸ್ಥೆ ಮುಖಾಂತರ ಕಂಡುಕೊಂಡ ಉದ್ಯಮಶೀಲತೆಯ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಉದ್ಯಮಿಗಳಾಗಲು ಆಶಯ ಹೊಂದಿರುವ ವಿದ್ಯಾರ್ಥಿಗಳು ಶಿಕ್ಷಣದ ಪ್ರಮಾಣ ಪತ್ರಗಳ ಜತೆಗೆ ಆತ್ಮವಿಶ್ವಾಸದೊಂದಿಗೆ ಸಂವಹನ ನಡೆಸುವದನ್ನೂ ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮಕ್ಕೆ ಯಾವುದೇ ಪರ್ಯಾಯ ವಿಧಾನ ಇಲ್ಲ, ಹೊಸ ವಿಷಯಗಳನ್ನು ತಿಳಿದುಕೊಂಡು ಆಯಾ ಕಾಲದ ಪ್ರವೃತ್ತಿಗಳಿಗೆ ಅನುಗುಣವಾಗಿ ನವೀಕರಿಸಿಕ್ಕೊಳ್ಳುವುದು ಯಶಸ್ವಿ ಉದ್ಯಮಕ್ಕೆ ಬಹಳ ಅಗತ್ಯ. ಅವಮಾನಗಳಿಗೆ ಹಿಂಜರಿಯದೆ ಉತ್ಸಾಹವಿರುವ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಹಾಗೂ ಉತ್ತಮ ಜೀವನ ಶೈಲಿಗೆ ಬದಲಾವಣೆಯಾಗಲು ಆರಂಭಿಕ ಹಂತದಲ್ಲಿ ಸ್ವಲ್ಪ ಕಷ್ಟವೆನಿಸಿದರೂ ಅಪ್ಡೇಟ್, ಅಪ್‌ಗ್ರೇಡ್ ಹಾಗೂ ಅಪ್ಲಿಫ್ಟ್ ಎನ್ನುವ ರೂಡಿಯನ್ನು ಪ್ರತಿಯೊಬ್ಬರೂ ಕಂಡುಕೊಳ್ಳಿ ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಪುಸ್ತಕ ಓದುವುದರಿಂದ ಜ್ಞಾನ ವೃದ್ಧಿಯಾಗಬಹುದು, ಯಶಸ್ವಿ ವ್ಯಕ್ತಿಯನ್ನು ಅನುಸರಿಸುವುದರಿಂದ ಜೀವನಕ್ಕೆ ಪರಿಣಾಮಕಾರಿಯಾದ ಪ್ರೇರಣೆ ದೊರಕುತ್ತದೆ. ಬದುಕಿನಲ್ಲಿ ಸವಾಲುಗಳನ್ನು ಎದುರಿಸಿದಾಗ ಮಾತ್ರ ಹೊಸ ಕಲಿಕೆಯ ಆರಂಭವಾಗುತ್ತದೆ. ಹೊಸ ಪ್ರಯತ್ನದ ದಾರಿಯಲ್ಲಿ ಹಲವಾರು ಟೀಕೆಗಳು ಎದುರಾದರೂ ಯಶಸ್ಸು ದೊರೆತಾಗ ಸಹಜವಾಗಿಯೇ ಸಮಾಜ ಒಪ್ಪಿಕೊಳ್ಳುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ವಿಭಾಗ ಮುಖ್ಯಸ್ಥೆ ಸುರೇಖಾ, ಟ್ರೈಬ್ಲೇಜ್ ವಿದ್ಯಾರ್ಥಿ ವೇದಿಕೆ ಮಾರ್ಗದರ್ಶಕಿ ಸೋನಿ, ವಿದ್ಯಾರ್ಥಿ ಸಂಯೋಜಕರಾದ ಆದರ್ಶ್ ಶೆಟ್ಟಿ, ಭೂಮಿಕಾ ಉಪಸ್ಥಿತರಿದ್ದರು. ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಖುಷಿ ಶೆಟ್ಟಿ ಸ್ವಾಗತಿಸಿ, ಸಮೃದ್ಧಿ ಪ್ರಭು ವಂದಿಸಿದರು.

ಮಾ. 12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

Article Image

ಮಾ. 12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಮಾ. 12ರಂದು (ನಾಳೆ) ಬೆಳಗ್ಗೆ 10ಕ್ಕೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ. ಕಾಲೇಜಿನ ಮಹಿಳಾ ಕುಂದುಕೊರತೆ ನಿವಾರಣಾ ಕೋಶ, ಆಂತರಿಕ ದೂರುಗಳ ಸಮಿತಿ ಮತ್ತು ಮಹಿಳಾ ಅಭಿವೃದ್ಧಿ ಕೋಶದ ವತಿಯಿಂದ ಆಂತರಿಕ ಗುಣಮಟ್ಟ ಖಾತರಿ ಕೋಶ (ಐಕ್ಯುಎಸಿ) ಸಹಯೋಗದೊಂದಿಗೆ ನಡೆಯಲಿರುವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಹೇಮಾವತಿ ವೀ. ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಜನಮನ್ (JANMAN) ಫಾರ್ಮಾಸುಟಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ (Chief Executive Director) ಅನಿಲಾ ದೀಪಕ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಜೆ 4ಕ್ಕೆ ಸೆಮಿನಾರ್ ಹಾಲ್ ನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನ್ಯೂಸ್ ಫಸ್ಟ್ ಕನ್ನಡ ಸುದ್ದಿ ವಾಹಿನಿಯ ಆ್ಯಂಕರ್ ಹಾಗೂ ಅಸೋಸಿಯೇಟ್ ಎಡಿಟರ್ ವಿದ್ಯಾಶ್ರೀ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪರೀಕ್ಷಾಂಗ ಕುಲಸಚಿವೆ ನಂದ ಕುಮಾರಿ ಕೆ.ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಐಕ್ಯುಎಸಿ ಸಂಯೋಜಕ ಗಜಾನನ ಆರ್. ಭಟ್ ಉಪಸ್ಥಿತರಿರಲಿದ್ದಾರೆ.

ಎಸ್.ಡಿ.ಎಂ ವಾಣಿಜ್ಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ

Article Image

ಎಸ್.ಡಿ.ಎಂ ವಾಣಿಜ್ಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ, ಮಾರ್ಚ್ 11: ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರಜ್ಞಾನ ವಲಯದಲ್ಲಿ ಆಗುತ್ತಿರುವ ಕ್ಷಿಪ್ರ ಬೆಳವಣಿಗೆಗಳ ನಡುವೆ ವಿನೂತನವಾಗಿ ಆಲೋಚಿಸುವ ಸಾಮರ್ಥ್ಯ ಹೊಸ ಬಗೆಯ ಔದ್ಯೋಗಿಕ ಅವಕಾಶಗಳನ್ನು ಪಡೆಯಲು ನೆರವಾಗುತ್ತದೆ ಎಂದು ಮಂಗಳೂರಿನ ಎ. ಜೆ. ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ. ವಿಭಾಗದ ಮುಖ್ಯಸ್ಥರಾದ ಡಾ. ಶರಣ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆ ವಿಭಾಗವು ‘ಸುಸ್ಥಿರ ಬೆಳವಣಿಗೆಗಾಗಿ ವಿವಿಧ ಕಾರ್ಯತಂತ್ರಗಳು ಕುರಿತ ‘ಎಕ್ಸ್ಪ್ಯಾಂಡಿಂಗ್ ಹಾರಿಜನ್’ ಶೀರ್ಷಿಕೆಯ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಜಗತ್ತಿನಲ್ಲಿ ವಿಶೇಷ ರೀತಿಯಲ್ಲಿ ಹೊಸ ಆಲೋಚನೆಗಳಿಂದ ಮತ್ತು ವಿಶೇಷ ರೀತಿಯ ಕೆಲಸಗಳಿಂದ ವಿದ್ಯಾರ್ಥಿಗಳು ತಮ್ಮನ್ನು ಗುರುತಿಸಿಕೊಳ್ಳಬೇಕು. ಈ ಬಗೆಯ ಕ್ರಿಯಾಶೀಲ ಗುರುತಿಸಿಕೊಳ್ಳುವಿಕೆಯಿಂದ ಔದ್ಯೋಗಿಕ ಅವಕಾಶಗಳ ಬಾಗಿಲು ತೆರೆಯುತ್ತದೆ. ತಂತ್ರಜ್ಞಾನದ ಅವಲಂಬನೆ ಹೆಚ್ಚಾದಾಗಲೂ ಆತಂಕ ಪಡುವ ಅನಿವಾರ್ಯತೆ ಎದುರಾಗುವುದಿಲ್ಲ ಎಂದರು. ಉದೋಗ್ಯ ಅವಕಾಶಗಳನ್ನು ಕಲ್ಪಿಸಿಕೊಳ್ಳುವುದು ಇಂದಿನ ದಿನಗಳಲ್ಲಿ ತುಂಬಾ ಕಷ್ಟಕರ ಸಂಗತಿಯಾಗಿದೆ. ಉಳಿದವರಿಗಿಂತ ಭಿನ್ನವಾಗಿ ಆಲೋಚಿಸುವ ಪ್ರಯತ್ನಗಳ ಕಡೆಗೆ ಹೆಚ್ಚಿನ ಗಮನವಿರಬೇಕು. ಎ.ಐ ತಂತ್ರಜ್ಞಾನಗಳಿಂದ ಉದೋಗ್ಯ ಅವಕಾಶಗಳು ಕುಗ್ಗುತ್ತವೆ. ಪ್ರತಿದಿನವೂ ಹೊಸ ಸಂಶೋಧನೆಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಒಂದೇ ಆದಾಯದ ಮೇಲಿನ ಆವಲಂಬನೆ ಕಡಿಮೆಯಾಗಬೇಕು. ಮಾರುಕಟ್ಟೆಯ ಏರಿಳಿತಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಸಾಮರ್ಥ್ಯವನ್ನು ಮರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ.ಅವರು ಮಾತನಾಡಿದರು. ವಿದ್ಯಾರ್ಥಿಗಳು ರಾಷ್ಟ್ರೀಯ ವಿಚಾರ ಸಂಕಿರಣಗಳಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾನಾಭಿವೃದ್ದಿ ಸಾಧ್ಯವಾಗುತ್ತದೆ. ಪಾಠಗಳ ಜೊತೆಗೆ ಹೊರಗಿನ ವಿದ್ಯಮಾನಗಳನ್ನು ತಿಳಿದುಕೊಳ್ಳಬೇಕು. ಉದ್ಯೋಗ ಅವಕಾಶಗಳು ವಿಭಿನ್ನವಾದ ಆಲೋಚನೆಯನ್ನು ಮಾಡುವ ವ್ಯಕ್ತಿಯನ್ನು ಹುಡುಕಿಕೊಂಡು ಬರುತ್ತವೆ. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಭಾರತವನ್ನು ಅಭಿವೃದ್ದಿ ಹೊಂದಿದ ರಾಷ್ಟçವನ್ನಾಗಿ ಮಾಡುವುದು ನಮ್ಮ ಕರ್ತವ್ಯ.ಎಂದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಪ್ರಿಯಾಕುಮಾರಿ ಎಸ್.ವಿ ಹಾಗೂ ಉಜಿರೆ ಎಸ್.ಡಿ.ಎಂಕಾಲೇಜಿನ ವಾಣಿಜ್ಯ ನಿಕಾಯದ ಡೀನ್ ಶಂಕುತಲಾ, ಸಂಘಟನಾ ಕಾರ್ಯದರ್ಶಿ ಡಾ. ಸುರೇಶ ಬಾಬು, ಕೆ.ಎನ್, ಹರ್ಷಿತ್‌ ಕುಮಾರ್ ಶೆಟ್ಟಿ ಎನ್, ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ ಬಿ.ಕೆ. ಸ್ವಾಗತಿಸಿದರು, ಡಾ. ಸುರೇಶ್ ಬಾಬು ಕೆ.ಎನ್ ವಂದಿಸಿದರು. ದೀಕ್ಷಾ ಮತ್ತು ಕ್ಷಮಾ ಆಚಾರ್ಯ ನಿರೂಪಿಸಿದರು.

‘ಸಕ್ಷಮ’ ಆಳ್ವಾಸ್ ವುಮೆನ್ಸ್ ಅಸೋಸಿಯೇಷನ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 2025

Article Image

‘ಸಕ್ಷಮ’ ಆಳ್ವಾಸ್ ವುಮೆನ್ಸ್ ಅಸೋಸಿಯೇಷನ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 2025

ವಿದ್ಯಾಗಿರಿ: ‘ಮಹಿಳೆ ಇಲ್ಲದೇ ಪ್ರಕೃತಿ ಇಲ್ಲ. ‘ಶಕ್ತಿ’ ಇಲ್ಲದೆ ಶಿವನೂ ನಿಶ್ಶಕ್ತ. ಶೋಷಣೆ ಮೆಟ್ಟಿ ನಿಲ್ಲುವವಳೇ ನಿಜವಾದ ‘ಹೆಣ್ಣು’. ಹೆಣ್ಣಿಗೆ ವಿದ್ಯೆಯೇ ಸೌಂದರ್ಯ, ತೇಜಸ್ಸು’ ಎಂದು ಹಿರಿಯ ರಂಗಕರ್ಮಿ, ಬೆಳ್ಳಿತೆರೆ ಮತ್ತು ಕಿರುತೆರೆ ನಟಿ ಗಿರಿಜಾ ಲೋಕೇಶ್ ಹೇಳಿದರು. ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣ (ಕೃಷಿಸಿರಿ) ವೇದಿಕೆಯಲ್ಲಿ ಶನಿವಾರ ಆಳ್ವಾಸ್ ಮಹಿಳಾ ವೇದಿಕೆ ‘ಸಕ್ಷಮ’ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡರ ಸ್ಮರಣೆಯಲ್ಲಿ ಆಯೋಜಿಸಿದ ‘ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ-2025’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಮಹಿಳೆ ಇಲ್ಲದೇ ಪ್ರಕೃತಿಯ ಇಲ್ಲ. ಆದರೆ ಹಿಂದೆ ಪುರಷನೂ ಬೇಕು ಎಂಬುದು ಗುಟ್ಟು’ ಎಂದು ನಸುನಕ್ಕ ಅವರು, ‘ವಿದ್ಯೆ- ವಿನಯ ಇಲ್ಲದವರಿಗೆ ಮೇಕಪ್ ಹೆಚ್ಚು ಬೇಕು’ ಎಂದು ಚಟಾಕಿ ಹಾರಿಸಿದರು. ‘ಅಮ್ಮ ಹೊಡೆದು ತಿದ್ದಿ ತೀಡಿದಾಗ ಗೊತ್ತಾಗಲಿಲ್ಲ. ಈಗ ಅದರ ಫಲ ಅನುಭವಿಸುತ್ತಿದ್ದೇನೆ. ಅಮ್ಮನ ಋಣ ಹೇಗೆ ತೀರಿಸಲಿ’ ಎಂದು ಭಾವುಕರಾದರು. ‘ಆಳ್ವಾಸ್’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ನನ್ನ ಬಹುದಿನದ ಕನಸು. ಕರೆದುದಕ್ಕೆ ಧನ್ಯವಾದ ಎಂದು ಗ್ರೀಷ್ಮಾ ಆಳ್ವ ಅವರಿಗೆ ಹೇಳಿದರು. ‘ಆಳ್ವಾಸ್ ಆವರಣದ ಶಿಸ್ತು ಮತ್ತು ನೈರ್ಮಲ್ಯ ದೇಶಕ್ಕೆ ಮಾದರಿ. ಹೀಗಾಗಿ ಇಲ್ಲಿ ಕಲಿತರೆ ದೇಶದ ಉತ್ತಮ ಪ್ರಜೆ ಆಗುವ ಅವಕಾಶ ಮಕ್ಕಳಿಗೆ ಲಭಿಸುತ್ತದೆ. ಆಳ್ವಾಸ್ ನಲ್ಲಿ ಓದುವುದು ದೊಡ್ಡ ಹೆಮ್ಮೆ’ ಎಂದ ಅವರು, ‘ಡಾ. ಮೋಹನ ಆಳ್ವರಿಗೂ ನಮಗೂ 50 ವರ್ಷಗಳ ನಂಟು. ಆದರೆ ವಯಸ್ಸಾಗಲಿಲ್ಲ. ಏಕೆಂದರೆ ಅವರ ಸಾಮಾಜಿಕ ಕೊಡುಗೆ ಅಪಾರ’ ಎಂದು ಶ್ಲಾಘಿಸಿದರು. ‘ನೀವು ಗ್ರಾಮೀಣ ಮಹಿಳೆ ಸುಕ್ರಿ ಬೊಮ್ಮನಗೌಡ ಅವರಿಗೆ ನೀಡಿದ ಗೌರವ ಶ್ಲಾಘನೀಯ. ಇಂದಿನ ‘ಸಿ’ ಶಸ್ತ್ರಚಿಕಿತ್ಸೆ ಹೆರಿಗೆಯ ನಡುವೆ ಸೂಲಗಿತ್ತಿಯರು ಅಂದು ನಿರ್ವಹಿಸಿದ ಪಾತ್ರ ಬಹುಮುಖ್ಯ. ಅದೇ ರೀತಿ ಸಾಲುಮರ ತಿಮ್ಮಕ್ಕ ಅವರ ಸಾಧನೆ’ ಎಂದು ಕೊಂಡಾಡಿದರು. ‘ನಾಳೆ ಎಲ್ಲ ನಮ್ಮದೂ’ ಎಂದು ವಿದ್ಯಾರ್ಥಿಗಳಿಗೆ ಹಾಡುವ ಮೂಲಕ ಮಹಿಳಾ ದಿನಾಚರಣೆಯ ಶುಭ ಕೋರಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಮಾತನಾಡಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 2025ರ “ಸಮಾನತೆಗಾಗಿನ ಪ್ರಯತ್ನವನ್ನು ವೇಗಗೊಳಿಸಿ’’ ಎಂಬ ಧ್ಯೇಯವಾಕ್ಯವನ್ನು ವಿಶ್ವದೆಲ್ಲೆಡೆ ಕಾರ್ಯಗತಗೊಳಿಸುವ ಕೆಲಸವಾಗಬೇಕಿದೆ ಎಂದು ಕರೆ ನೀಡಿದರು. ಪುರುಷರಲ್ಲಿ ಸೌಂದರ್ಯ ಪ್ರಜ್ಞೆಯ ಗುಣವನ್ನು ಬಿತ್ತಿದ ಕೀರ್ತಿ ಮಹಿಳೆಗೆ ಸಲ್ಲುತ್ತದೆ. ಮಹಿಳೆಯು ವಿಭಿನ್ನ ಮತ್ತು ಜವಾಬ್ದಾರಿಯುತ ಪಾತ್ರದ ಮೂಲಕ ಪುರುಷರ ಬದುಕಿನಲ್ಲಿ ಪ್ರಜ್ಞೆ ಮತ್ತು ಶಕ್ತಿಯನ್ನು ಮೂಡಿಸುವಲ್ಲಿ ಕಾರಣಿಕರ್ತೆಯಾಗಿದ್ದಾಳೆ. ಸಮಾಜದಲ್ಲಿ ಹೆಣ್ಣಿಂದು ಅನೇಕ ರೀತಿಯ ಪಾತ್ರಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿಕೊಂಡು ಬರುತ್ತಿದ್ದಾಳೆ. ಪ್ರಸ್ತುತ ಕಾಲಮಾನದಲ್ಲಿ ಮಹಿಳೆ- ನರ್ಸ್, ಆಶಾ ಕಾರ್ಯಕರ್ತೆ, ಅಧ್ಯಾಪನಾ ವೃತ್ತಿ, ಪೊಲೀಸ್, ಪೈಲೆಟ್, ಲೋಕೋ ಪೈಲೆಟ್, ಉದ್ಯಮ ಕ್ಷೇತ್ರ , ಕ್ರೀಡೆ, ರಾಜಕೀಯ, ಸರ್ಕಾರೇತರ ಉದ್ಯೋಗ, ವಕೀಲಿ ವೃತ್ತಿ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ತನ್ನನ್ನು ತಾನು ಪುರುಷನಿಗೆ ಸಮಾನಳಾಗಿ ಸ್ಫರ್ಧೆ ನೀಡುತ್ತಾ ಬಂದಿದ್ದಾಳೆ. ಪುರುಷ ಪ್ರದಾನ ಸಮಾಜದಲ್ಲಿ ಹಿಂದೆ ಸ್ಥಳೀಯ ಜನಪದ ಕಲೆಗಳಾದ ಕಂಬಳ, ಹುಲಿವೇಷ, ಯಕ್ಷಗಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಸ್ಥಾನವಿರಲಿಲ್ಲ. ಆದರೆ, ಇಂದು ಮಹಿಳೆ ಹಂತ ಹಂತವಾಗಿ ಪುರುಷನ ಸಮಾನಕ್ಕೆ ತೆರೆದುಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಬೆಂಗಳೂರಿನ ಎಸ್-ವ್ಯಾಸ ಪರಿಗಣಿತ ವಿಶ್ವವಿದ್ಯಾಲಯದ ಯೋಗ ಮತ್ತು ಮಾನವಿಕ ವಿಭಾಗದ ಡೀನ್, ಪ್ರೊ ಕರುಣಾ ವಿಜಯೇಂದ್ರ ಮಾತನಾಡಿ, ತಾಳ್ಮೆ , ಸಹಜತೆ ಮತ್ತು ಅಭಿವ್ಯಕ್ತಿ ಸ್ವಾತಂತ್ಯವನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕು. ಮಹಿಳೆಯ ಆತ್ಮಶಕ್ತಿಯ ಮುಂದೆ ಎಲ್ಲವೂ ನಗಣ್ಯ. ಛಲದಿಂದ ಸಶಕ್ತರಾಗಿ ನಿಂತು ಆಸಕ್ತ ಕ್ಷೇತ್ರದಲ್ಲಿ ಮುನ್ನಡೆಯಲು ಮಹಿಳೆಯರು ಮುಂಬರಬೇಕು ಎಂದು ಸಲಹೆ ನೀಡಿದರು. ಯುವಜನತೆಯ ವಯೋಸಹಜ ಆಕರ್ಷಣೆಗಳ ಎಲ್ಲೆ ಮೀರದೆ ತಮ್ಮ ನೆಲದ ಸಂಸ್ಕೃತಿಯನ್ನು ಕಾಪಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು. ಮಂಗಳೂರಿನ ಸಂಚಾರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರುಕಿ ಮಾತನಾಡಿ, ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬ ಸಂಸ್ಕೃತಿಯನ್ನು ಪರಿಪಾಲಿಸುವುದು ಪ್ರಸ್ತುತತೆಗೆ ಹೆಚ್ಚು ಅಗತ್ಯವಿದೆ. ಮಾಡುವ ಎಲ್ಲಾ ಒಳ್ಳೆಯ ಕಾರ್ಯದಲ್ಲಿ ಆತ್ಮ ವಿಶ್ವಾಸ, ಧೈರ್ಯ ಮತ್ತು ಪರಿಶ್ರಮವಹಿಸುವ ಮನಸ್ಥಿತಿ ಇದ್ದಾಗ ಗುರಿಯನ್ನು ಸಾಧಿಸಲು ಸಾಧ್ಯ ಎಂದರು. ಇಂದಿನ ಮಹಿಳಾ ಸಮಾಜಕ್ಕೆ ಹಾಲಕ್ಕಿ ಜನಾಂಗದ ಸುಕ್ರಿ ಬೊಮ್ಮಗೌಡರ ಸರಳ ಜೀವನ ಆದರ್ಶಪ್ರಾಯ. ಪ್ರತಿ ಮಹಿಳೆ ತನ್ನಲ್ಲಿ ಅಡಗಿರುವ ಅಮೋಘ ಶಕ್ತಿಯನ್ನು ಅರಿತುಕೊಳ್ಳಬೇಕು. ದೇಶದ ಮಹಿಳೆ ವಿದ್ಯಾವಂತಳಾದರೆ ಶಿಶು ಮರಣವನ್ನು ಗಣನೀಯವಾಗಿ ತಡೆಯಲು ಸಾಧ್ಯ ಎಂದು ತಿಳಿಸಿದ ಯುನೆಸ್ಕೋ ಸಂಸ್ಥೆ ವರದಿಯನ್ನು ಉಲ್ಲೇಶಿಸಿದರು. ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಲರ್ನಿಂಗ್(ಸಿಎಫ್‌ಎಎಲ್)ನ ಸಂಶೋಧನಾ ನಿರ್ದೇಶಕಿ ಪ್ರೊ. ಸ್ಮಿತಾ ಹೆಗ್ಡೆ ಮಾತನಾಡಿ, 1908ರಲ್ಲಿ ನ್ಯೂಯಾರ್ಕ್ ಪಟ್ಟಣದ ಬೀದಿಬದಿಯಲ್ಲಿ ಮಹಿಳೆಯರು ತಮ್ಮ ವೃತ್ತಿಯಲ್ಲಿ ಸಮಾನತೆಯನ್ನು ಕೋರಿ ಪ್ರತಿಭಟನೆ ಮಾಡುವುದರ ಮೂಲಕ ಮಹಿಳಾ ಚಳುವಳಿಗೆ ನಾಂದಿ ಹಾಡಿದರು. ಮುಂದೆ ವಿಶ್ವಸಂಸ್ಥೆ 1977 ಮಾರ್ಚ್ 8ರಂದು ಮಹಿಳಾ ದಿನಾಚರಣೆಯನ್ನು ಜಗತ್ತಿನಾದ್ಯಂತ ಆಚರಿಸಲು ಅವಕಾಶ ನೀಡಿತು. ಸಾಮಾಜಿಕ ಮತ್ತು ಸಂತಾನೋತ್ಪತ್ತಿ ಹಕ್ಕು ಮಹಿಳೆಗೆ ದೊರೆತ ಅತ್ಯಂತ ದೊಡ್ಡ ಶಕ್ತಿ ಎನ್ನುವುದನ್ನು ಎಲ್ಲರು ಅರಿಯಬೇಕು ಎಂದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ಮೂವರು ಸಾಧಕಿಯರನ್ನು ಮಹಿಳಾ ದಿನಾಚರಣೆಯ ಅಂಗವಾಗಿ ಗೌರವಿಸಲಾಯಿತು. ಮಹಿಳಾ ಉದ್ಯಮಿ ಮತ್ತು ಇವೊಲ್ವ್ ಸಂಸ್ಥೆಯ ಅಧ್ಯಕ್ಷೆ ದಿವ್ಯಾ ಡಿ’ಸೋಜಾ, ರಾಷ್ಟ್ರೀಯ ಚಿಂತಕಿ ಮಾತಾ ಮೀನಾಕ್ಷಿ, ಭತ್ತದ ತಳಿಯನ್ನು ಸಂಗ್ರಹಿಸಿ ಪೋಷಿಸುವ ಸಾಣೂರಿನ ಸಾಧಕಿ ಬಾಲಕಿ ಮರಿಯಂ ಅಫ್ನಾ ಅವರನ್ನು ಗೌರವಿಸಲಾಯಿತು. ಗಿರಿಜಾ ಲೋಕೇಶ್‌ರವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಆಳ್ವ ಫಾರ್ಮಸಿಯ ಆಡಳಿತ ನಿರ್ವಾಹಕಿ ಡಾ ಗ್ರೀಷ್ಮಾ ಆಳ್ವ, ಜಯಶ್ರೀ ಅಮರನಾಥ ಶೆಟ್ಟಿ, ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಹೆಲ್ತ್ ಸೆಂಟರ್‌ನ ಸ್ತ್ರೀರೋಗ ತಜ್ಞೆ ಡಾ| ಹನ ಶೆಟ್ಟಿ ಇದ್ದರು. ಬಂಟ್ಸ್ ಅಸೋಸಿಯೇಶನ್‌ನ ಸದಸ್ಯರು, ಸಂಸ್ಥೆಯ ಹಿತೈಷಿಗಳು, ಸಕ್ಷಮದ ಪದಾಧಿಕಾರಿಗಳು, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ‍್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಆಳ್ವಾಸ್ ಪ.ಪೂ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ಡಾ ಸುಧಾರಾಣಿ ನಿರೂಪಿಸಿ, ಸಕ್ಷಮ ವುಮೆನ್ಸ್ ಅಸೋಸಿಯೇಷನ್ ಅಧ್ಯಕ್ಷೆ ಮೂಕಾಂಬಿಕಾ ಸ್ವಾಗತಿಸಿ, ಆಳ್ವಾಸ್ ಪ. ಪೂ ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ರುಚಿಕಾ ವಂದಿಸಿದರು. ತದನಂತರ, ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಸಂಸ್ಥೆಯ ಮಹಿಳಾ ಸಿಬ್ಬಂದಿ, ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಈ ಕರ‍್ಯಕ್ರಮವನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಚರ‍್ಯ ಸದಾಕತ್, ಆಳ್ವಾಸ್ ಸಹಕಾರ ಬ್ಯಾಂಕ್‌ನ ಮುಖ್ಯ ಪ್ರಬಂಧಕಿ ಅರ್ಪಿತಾ ಶೆಟ್ಟಿ ನರವೇರಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡವರಲ್ಲಿ ಒಬ್ಬರನ್ನು “ಲಕ್ಕಿ ಸ್ಟಾರ್” ಎಂದು ಗುರುತಿಸಿ ಈ ವರ್ಷದ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಪದವಿಪೂರ್ವ ಕಾಲೇಜಿನ ಅಧ್ಯಾಪಕವೃಂದದಿಂದ ಸೆಮಿಕ್ಲಾಸಿಕಲ್ ನೃತ್ಯ ಪ್ರದರ್ಶನಗೊಂಡಿತು. ನಂತರ ಝುಂಬಾ ಟ್ರೈನರ್ ನಿತೇಶ್ ಕುಲಾಲ್‌ರಿಂದ ನಡೆದ ಝುಂಬಾ ಡ್ಯಾನ್ಸ್ ಸಭಿಕರನ್ನು ಸಂಗೀತಕ್ಕೆ ಅನುಗುಣವಾಗಿ ನೃತ್ಯ ಮಾಡಲು ಹುರಿದುಂಬಿಸಿತು. ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ ನಮೃತಾ ಕುಲಾಲ್ ನಡೆಸಿಕೊಟ್ಟರು. ಆರಂಭದಲ್ಲಿ ಅತಿಥಿಗಳನ್ನು ಸಾಂಸ್ಕೃತಿಕ ಕಲಾತಂಡಗಳು, ಸಾಧಕಿಯರ ವೇಷಭೂಷಣಧಾರಿ ಮಕ್ಕಳು ಸೇರಿದಂತೆ ವಿಜೃಂಭಣೆಯಿಂದ ವೇದಿಕೆಗೆ ಕರೆದುಕೊಂಡು ಬರಲಾಯಿತು.

ಸತ್ತೂರು,ಧಾರವಾಡ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

Article Image

ಸತ್ತೂರು,ಧಾರವಾಡ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯವು ಮಾರ್ಚ್ 08ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು, ಇದು ವಿವಿಧ ವಿಭಾಗಗಳಲ್ಲಿ ಮಹಿಳೆಯರ ಸಾಧನೆಗಳನ್ನು ಗೌರವಿಸಲು ಮತ್ತು ಜಾಗತಿಕವಾಗಿ ಲಿಂಗ ಸಮಾನತೆಯನ್ನು ಮುನ್ನಡೆಸಲು ಉದ್ದೇಶಿಸಲಾಗಿದೆ. ತಾಯಂದಿರು, ಸಹೋದರಿಯರು, ಪತ್ನಿಯರು, ಸಹೋದ್ಯೋಗಿಗಳು ಮತ್ತು ಸ್ನೇಹಿತರಾಗಿ ಮಹಿಳೆಯರು ವಹಿಸುವ ಅಮೂಲ್ಯ ಪಾತ್ರಗಳನ್ನು ಶ್ಲಾಘಿಸುವ ದಿನವೂ ಆಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಮುಖ್ಯ ಅತಿಥಿಯಾಗಿದ್ದರು ಮತ್ತು ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಗೌರವ ಅತಿಥಿಯಾಗಿದ್ದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಮಾನಸಿಕ ಆರೋಗ್ಯ, ಮಹಿಳೆಯರಿಗೆ ಪೋಷಣೆ ಮತ್ತು ಮಹಿಳೆಯರಿಗೆ ಸದೃಢತೆ ಎಂಬ ವಿಷಯಗಳ ಕುರಿತು ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗಿತ್ತು. ಮಹಿಳೆಯರಿಗಾಗಿ ರಸಪ್ರಶ್ನೆ ಸ್ಪರ್ಧೆ, ಕಿರು ನಾಟಕ ಮತ್ತು ಮೋಜಿನ ಆಟಗಳನ್ನು ನಡೆಸಲಾಯಿತು. ಸಮಾರಂಭದಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಜೀವರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಮತ್ತು ಹಿರಿಯ ಶಿಕ್ಷಕಿಯವರಾದ ಡಾ. ವಿದ್ಯಾ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಡಾ. ಶುಭ ಅಕಾದಾಸ್ ಅತಿಥಿಗಳನ್ನು ಸ್ವಾಗತಿಸಿ ಮತ್ತು ಡಾ. ವಿದ್ಯಾ ಪಾಟೀಲ್ ಅವರನ್ನು ಪರಿಚಯಿಸಿದರು. ಡಾ. ಸಂಗೀತಾ ಅಪ್ಪನ್ನವರ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಶ್ವೇತಾ ಕುಲಕರ್ಣಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸಂಯೋಜಿಸಿದರು. ಡಾ. ಜ್ಯೋತಿ ಜೀವಣ್ಣನವರ ವಂದನಾರ್ಪಣೆ ಸಲ್ಲಿಸಿದರು.

ದೂರ ಶಿಕ್ಷಣ: ಆಳ್ವಾಸ್‌ನಲ್ಲಿ ಅವಕಾಶ

Article Image

ದೂರ ಶಿಕ್ಷಣ: ಆಳ್ವಾಸ್‌ನಲ್ಲಿ ಅವಕಾಶ

ವಿದ್ಯಾಗಿರಿ: ಆಳ್ವಾಸ್ ಪದವಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಹಯೋಗದ ‘ಆಳ್ವಾಸ್‌ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು 2024- 2025ರ ಜನವರಿ ಆವೃತ್ತಿಯ ಪ್ರಥಮ ವರ್ಷದ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಈ ಕೇಂದ್ರದ ಮೂಲಕ ವಿದ್ಯಾರ್ಥಿಗಳು ಸ್ನಾತಕ (ಯುಜಿ)ದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸಿ, ಬಿ.ಬಿ.ಎ, ಬಿ.ಎಸ್.ಡಬ್ಲೂ, ಬಿ.ಎಸ್ಸಿ (ಸಂಯೋಜನೆಗಳು), ಬಿ.ಎಸ್‌ಸಿ ಹೋಮ್ – ಇನ್ಫಾರ್ಮೇಷನ್ ಟೆಕ್ನಾಲಜಿ, ಬಿ.ಸಿ.ಎ (ಬ್ಯಾಚುರಲ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್) ಪದವಿಗಳನ್ನು ಮಾಡಬಹುದಾಗಿದೆ. ಸ್ನಾತಕೋತ್ತರ ವಿಭಾಗದಲ್ಲಿ ಎಂ.ಎ- ಶಿಕ್ಷಣ, ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ಇತಿಹಾಸ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಉರ್ದು, ಸಂಸ್ಕೃತ, ಸಮಾಜಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಎಂ.ಎಸ್.ಡಬ್ಲೂ, ಎಂ.ಬಿ.ಎ-ಆನ್‌ಲೈನ್ ಪ್ರವೇಶ ಪರೀಕ್ಷೆ ಮೂಲಕ (ಫೈನಾನ್ಸ್, ಮಾರ್ಕೆಟಿಂಗ್, ಎಚ್.ಆರ್. ಆಪರೇಷನ್. ಟೂರಿಸಂ ಕಾಪ್ರೊರೇಟ್ ಲಾ, ಇನ್‌ಫರ್ಮನೇಷನ್ ಟೆಕ್ನಾಲಜಿ, ಆಸ್ಪತ್ರೆ ಮತ್ತು ಆರೋಗ್ಯ ಕಾಳಜಿ ನಿರ್ವಹಣೆ.), ಎಂ.ಕಾಂ ಡ್ಯುಯೆಲ್ ಸ್ಪೆಷಲೈಜೇಷನ್ (ಅಕೌಂಟಿಂಗ್ ಮತ್ತು ಫೈನಾನ್ಸ್ / ಎಚ್‌ಆರ್‌ಎಂ ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್ ಮತ್ತು ಎಚ್‌ಆರ್‌ಎಂ / ಫೈನಾನ್ಸ್), ಎಂ.ಸಿ.ಎ, ಎಂ.ಲಿಬ್.ಐ.ಎಸ್‌ಸಿ, ಎಂ.ಎಸ್‌ಸಿ (ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ, ಬಯೋಕೆಮಿಸ್ಟ್ರಿ, ಬಯೋಟೆಕ್ನಾಲಜಿ, ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯಟಿಷಿಯನ್, ಪರಿಸರ ವಿಜ್ಞಾನ, ಭೂಗೋಳಶಾಸ್ತ್ರ, ಮೈಕ್ರೋಬಯಾಲಜಿ ಮನಃಶಾಸ್ತ್ರ, ಸಸ್ಯಶಾಸ್ತ್ರ ಪ್ರಾಣಿಶಾಸ್ತ್ರ, ಫುಡ್‌ ಮತ್ತು ನ್ಯೂಟ್ರಿಷನ್ ಸೈನ್ಸ್ ಮಾಹಿತಿ ತಂತ್ರಜ್ಞಾನ ಡಾಟಸೈನ್, ಕಂಪ್ಯೂಟರ್‌ಸೈನ್ಸ್). ಪಿಜಿ ಸರ್ಟಿಫಿಕೇಟ್‌ ಕಾರ್ಯಕ್ರಮಗಳು- ಇಂಗ್ಲಿಷ್, ಕಮ್ಯುನಿಕೇಶನ್, ಇಂಗ್ಲಿಷ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಕುವೆಂಪು ಸಾಹಿತ್ಯ, ಹಣಕಾಸು ನಿರ್ವಹಣೆ ಮಾನವ ಸಂಪನ್ಮೂಲ ನಿರ್ವಹಣೆ, ಬಿಸಿನೆಸ್ ಲಾ, ಬಿಸಿನೆಸ್ ಅಡ್ಮಿನಿಸ್ಟ್ರೆಷನ್ ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್, ಅಂಬೇಡ್ಕರ್ ಅಧ್ಯಯನಗಳನ್ನು ಅಭ್ಯಸಿಸಬಹುದಾಗಿದೆ. ಡಿಪ್ಲೋಮ ಶಿಕ್ಷಣ ಕಾರ್ಯಕ್ರಮಗಳಾದ ಕನ್ನಡ, ಪತ್ರಿಕೋದ್ಯಮ, ನ್ಯೂಟ್ರಿಷನ್ ಮತ್ತು ಹೆಲ್ತ್ಎಜುಕೇಷನ್, ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ‌ ಅಪ್ಲಿಕೇಷನ್, ಅರ್ಲಿ ಚೈಲ್ಡ್ಹುಡ್‌ಕೇರ್ ಎಜುಕೇಷನ್‌ ಹಾಗೂ ಸರ್ಟಿಫಿಕೇಟ್ ಶಿಕ್ಷಣ ಕಾರ್ಯಕ್ರಮಗಳಾದ(ಆರು ತಿಂಗಳು)- ಪಂಚಾಯತ್‌ರಾಜ್, ನ್ಯೂಟ್ರಿಷನ್ ಮತ್ತು ಫುಡ್, ಮಾಹಿತಿ ಸಂವಹನ ತಂತ್ರಜ್ಞಾನದ (ಐಸಿಟಿ) ಕೋರ್ಸಗಳನ್ನು ಮಾಡಬಹುದಾಗಿದೆ. ಈ ಮೇಲಿನ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮಾಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ +917090715010, 9591546202 ಸಂಪರ್ಕಿಸಬಹುದು. ಇಲ್ಲವೇ, ಇಮೇಲ್:administration@alvas.org ಮೂಲಕವೂ ಮಾಹಿತಿ ಪಡೆದುಕೊಳ್ಳಬಹುದು. ಆಳ್ವಾಸ್‌ನಲ್ಲಿ ಪರೀಕ್ಷಾ ಕೇಂದ್ರವನ್ನೂ ಹೊಂದಿರುವ ಕಾರಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುವ ಜೊತೆಯಲ್ಲಿ ಈ ಶೈಕ್ಷಣಿಕ ಸಾಲಿನಿಂದ ಪ್ರವೇಶಾತಿ ಪಡೆಯುವ ವಿಜ್ಞಾನ ವಿಷಯದ ಅಭ್ಯರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಔದ್ಯೋಗಿಕ ನೆಲೆಯಲ್ಲಿ ಸ್ನಾತಕೋತ್ತರ, ಪದವಿ, ಒಂದು ವರ್ಷದ ಡಿಪ್ಲೊಮಾ ಹಾಗೂ ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಗಳನ್ನು ವಿವಿಧ ವಿಷಯಗಳಲ್ಲಿ ಮಾಡಲು ಅವಕಾಶವಿದ್ದು, ಉದ್ಯೋಗ ಮಾಡಿಕೊಂಡು ಕೋರ್ಸ್ ಮಾಡಲು ಸುವರ್ಣಾವಕಾಶ ದೊರೆತಿದೆ.

ಕಬಡ್ಡಿ ಪಂದ್ಯಾವಳಿಗೆ ಚಾಲನೆ

Article Image

ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಉಜಿರೆ ಮಾರ್ಚ್ 7: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯನ್ನು ವ್ಯಕ್ತಿಗತ ದಿನಚರಿಯ ಭಾಗವಾಗಿಸಿಕೊಂಡರೆ ಮಾನಸಿಕ ಸೌಕರ್ಯ, ಬೌದ್ಧಿಕ ಬೆಳವಣಿಗೆ ಮತ್ತು ಭಾವನಾತ್ಮಕ ಸಮತೋಲನದ ಪ್ರಜ್ಞೆಯೊಂದಿಗೆ ವ್ಯಕ್ತಿತ್ವವನ್ನು ಸಮಗ್ರಗೊಳಿಸಿಕೊಳ್ಳಬಹುದು ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಆಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾಲಯ ಮತ್ತು ಉಜಿರೆಯ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ಪುರುಷ ಕಬ್ಬಡ್ಡಿ ಪಂದ್ಯಾವಳಿಯನ್ನು ಇಂದ್ರಪ್ರಸ್ಥ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಯ ದಿನಚರಿಯಲ್ಲಿ ಕ್ರೀಡೆಯನ್ನು ಅಳವಡಿಸಿಕೊಂಡಾಗ ವ್ಯಕ್ತಿತ್ವ ವಿಕಸನವಾಗುತ್ತದೆ. ಮಾನಸಿಕವಾಗಿ ಬೌದ್ಧಿಕವಾಗಿ ಭಾವನಾತ್ಮಕವಾಗಿ ಒಬ್ಬ ವ್ಯಕ್ತಿ ಬೆಳವಣಿಗೆಗೆ ಕ್ರೀಡೆ ಬಹಳ ಮುಖ್ಯ. ಅದರ ಜೊತೆಗೆ ಕ್ರೀಡಾಸ್ಪೂರ್ತಿಯು ಅವಶ್ಯಕ. ವಿದ್ಯಾರ್ಥಿಗಳು ಕೇವಲ ಭೌದ್ಧಿಕ ಚಟುವಟಿಕೆಯಲ್ಲದೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು. ದೇಶದ ಅನೇಕ ಕಡೆ ನಡೆದ ಕ್ರೀಡಾಕೂಟಗಳಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆಗೈದಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈಯ್ಯುವುದಕ್ಕೆ ಪೂರಕವಾದ ಸ್ಫೂರ್ತಿದಾಯಕ ವಾತಾವರಣ ಎಸ್.ಡಿ.ಎಂ ಕಾಲೇಜಿನಿಂದ ದೊರಕುತ್ತಿದೆ. ವಿದ್ಯಾರ್ಥಿಗಳು ಅಂಕ ಗಳಿಕೆಯ ಜೊತೆ ಜೊತೆಗೆ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಆಗ ವ್ಯಕ್ತಿತ್ವದ ಸಮಗ್ರ ಬೆಳವಣಿಗೆ ಸಾಧ್ಯ ಎಂದರು. ಕಬ್ಬಡ್ಡಿ ಒಂದು ಚುರುಕಿನ ಆಟ. ಇಂತಹ ಆಟಗಳು ವ್ಯಕ್ತಿಯನ್ನು ಆರೋಗ್ಯಕರ ,ಸಮೃದ್ಧ ಹಾಗೂ ಕ್ರೀಯಾಶೀಲರನ್ನಾಗಿಸುತ್ತವೆ. ಸೋಲು ಮತ್ತು ಗೆಲುವುಗಳನ್ನು ಸಮವಾಗಿ ಸ್ವೀಕರಿಸುವ ಮನೋಭಾವನೆಯನ್ನು ಬೆಳೆಸುವಲ್ಲಿ ಇಂತಹ ಕ್ರೀಡೆಗಳ ಪಾತ್ರ ಅಪಾರ ಎಂದರು. ಕಾರ್ಯಕ್ರಮದ ಅಧ್ಯಕ್ಷ್ಯತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ ಅವರು ಮಾತನಾಡಿದರು. ಕಬ್ಬಡ್ಡಿಯಂತಹ ತಂಡಸ್ಫೂರ್ತಿಯ ಆಟಗಳು ಒಬ್ಬ ಆಟಗಾರನಲ್ಲಿ ತಂಡದ ನಿರ್ವಹಣೆ, ನಾಯಕತ್ವದ ಗುಣ ಹಾಗೂ ಸಂವಹನ ಕಲೆಯನ್ನು ಅಭಿವೃದ್ಧಿಗೊಳಿಸುತ್ತವೆ ಎಂದರು. ಇತ್ತೀಚಿನ ದಿನಗಳಲ್ಲಿ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಪಾಲ್ಗೊಳ್ಳಲು ಇಂತಹ ಕ್ರೀಡಾಕೂಟಗಳು ಪ್ರೋತ್ಸಾಹಿಸುತ್ತವೆ. ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶವನ್ನು ಪ್ರಾರಂಭದಿಂದಲೂ ನೀಡುತ್ತಾ ಬಂದಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕರಾದ ರಮೇಶ್ ಎಚ್, ಶಾರದಾ, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಅವರು ಉಪಸ್ಥಿತರಿದ್ದರು. ಅಧ್ಯಾಪಕ ಡಾ.ಸುವೀರ್ ಜೈನ್ ನಿರೂಪಿಸಿದರು.

ಸಾಧಕರ ಸನ್ಮಾನ

Article Image

ಸಾಧಕರ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ಆಶ್ರಯದಲ್ಲಿ ಪ್ರೊ. ಗಣಪತಿ ಕುಳಮರ್ವ, ಬೆಳಾಲು ಎಸ್.ಡಿ.ಎಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಚೊಕ್ಕಾಡಿ ಮತ್ತು ದಾಸಪ್ಪ ಗೌಡ ಕೊಲ್ಲಿ ಇವರ ಸೇವೆ-ಸಾಧನೆಯನ್ನು ಮನ್ನಿಸಿ ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆದ ಸಂಘದ ಮಾಸಿಕ ಸಭೆಯಲ್ಲಿ ಗೌರವಿಸಲಾಯಿತು. ಹಿರಿಯರನ್ನು ಗೌರವಿಸಿ ಸನ್ಮಾನಿಸಿದ ಪ್ರಜಾವಾಣಿ ಪತ್ರಿಕೆಯ ವರದಿಗಾರ ಆರ್.ಎನ್. ಪೂವಣಿ ಮಾತನಾಡಿ, ಮೂರು ಮಂದಿ ಹಿರಿಯ ಸಾಧಕರ ಸೇವೆ, ಸಾಧನೆ ಕಿರಿಯರಿಗೆ ಪ್ರೇರಕ ಶಕ್ತಿಯಾಗಿ ಸ್ಪೂರ್ತಿಯಾಗಿದೆ. ಅವರ ದಕ್ಷ ಸೇವೆಗೆ ಅಭಿನಂದಿಸಿ ಶುಭ ಹಾರೈಸಿದರು. ಸಂಘದ ಕಟ್ಟಡ ನಿರ್ಮಾಣಕ್ಕೆ ಒಂದು ಲಕ್ಷ ರೂ. ಗೂ ಅಧಿಕ ದೇಣಿಗೆ ನೀಡಿದ ನಿವೃತ್ತ ಮುಖ್ಯೋಪಾಧ್ಯಾಯ ಬಿ. ಸೋಮಶೇಖರ ಶೆಟ್ಟಿ ಇವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ಬಿ. ವಿಠಲ ಶೆಟ್ಟಿ ಅವರ ದಕ್ಷ ನೇತೃತ್ವದಲ್ಲಿ ಸರ್ವ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲೆಂದು ಪೂವಣಿ ಅವರು ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಇತೀಚೆಗೆ ನಿಧನರಾದ ನಿವೃತ್ತ ಮುಖ್ಯೋಪಾಧ್ಯಾಯ ಕಾಶ್ಮೀರ್ ಮಿನೇಜಸ್ ಅವರ ಬಗ್ಗೆ ತೆರೆಸಾ ಲೋಬೊ ನುಡಿನಮನ ಸಲ್ಲಿಸಿ, ಬಳಿಕ ಮಿನೆಜಸ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯದರ್ಶಿ ವಿಶ್ವಾಸ ರಾವ್ ಗತ ಸಭೆಯ ವರದಿ ಸಾದರಪಡಿಸಿದರು. ವಸಂತ ಸುವರ್ಣ ಧನ್ಯವಾದವಿತ್ತರು.

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆ

Article Image

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2025-26ನೇ ಸಾಲಿನ, 6 ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ನಡೆಯಿತು. ರಾಜ್ಯಾದ್ಯಾಂತ 32 ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಗಡಿಭಾಗದ ಜಿಲ್ಲೆಯಾದ ಕಾಸರಗೋಡು ಹಾಗೂ ಮಹಾರಾಷ್ಟ್ರದ ಗಡಿಜಿಲ್ಲೆಗಳಿಂದ 20134 ವಿದ್ಯಾರ್ಥಿಗಳು ಅನ್‌ಲೈನ್ ಮೂಲಕ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 18634 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಂತರ ಮಾತನಾಡಿದ ಅವರು ಈ ಕನ್ನಡನಾಡಿನಲ್ಲಿ ಜನ್ಮತಾಳಿ, ಬದುಕನ್ನ ನಡೆಸಿ, ಸಂಪಾದನೆಯನ್ನು ಗಳಿಸಿದ ನಮಗೆ ಈ ಕನ್ನಡ ನಾಡಿನ ಋಣ ಎಷ್ಟಿದೆ ಎಂಬುದನ್ನು ನಾವೆಲ್ಲ ಅರಿಯಬೇಕಿದೆ. ನಮ್ಮೆಲ್ಲರ ಕನ್ನಡದ ಬಗೆಗಿನ ಪ್ರೀತಿ ವೇದಿಕೆಯಲ್ಲಿ ಭಾಷಣ ಮಾಡಲು ಮಾತ್ರ ಸೀಮಿತವಾಗಿದೆ. ರಾಜಕಾರಣಿಗಳು ಅಥವಾ ಕನ್ನಡದ ಸಂಘ ಸಂಸ್ಥೆಗಳು ಕನ್ನಡಕ್ಕೆ ಕಿಂಚಿತ್ತು ಸಮಸ್ಯೆಯಾದರೂ ಗಂಭೀರವಾಗಿ ಮಾತನಾಡಲು, ಹೋರಾಟ ಮಾಡಲು ಮುಂದೆ ಬಂದರೂ, ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿಗತಿಯನ್ನು ಸುಧಾರಿಸಲು ಅವರ ಕೂಡುಗೆ ಸಾಲದು. ಕನ್ನಡ ಮಾಧ್ಯಮ ಶಾಲೆ ಗಟ್ಟಿಗೊಳಿಸದೆ ವಿನಃ ಕನ್ನಡ ಭಾಷೆಗೆ ಭವಿಷ್ಯವಿದೆ ಎಂದು ಹೇಳಲು ತಾನು ಸಿದ್ದನಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಜನರು ಮಾತನಾಡುವ ಭಾಷೆಯಾಗಿ ಸ್ವಲ್ಪ ಸಮಯ ಉಳಿಯಬಹುದೇ ಹೊರತು, ಕನ್ನಡದ ಸಾಹಿತ್ಯ, ಅದರ ಸಾಂಸ್ಕೃತಿಕ ವಿಚಾರವನ್ನು ಸೂರ್ಯ ಚಂದ್ರರಿರುವಷ್ಟು ಕಾಲ ಮುಂದೆ ಕೊಂಡುಹೋಗಲು ಸಾಧ್ಯವಿಲ್ಲ. ಈ ಶಕ್ತಿ ಕನ್ನಡ ಮಾಧ್ಯಮ ಶಾಲೆಗಳಿಂದ ಮಾತ್ರ ಸಾಧ್ಯ. ಸರಕಾರದ 1800 ಪ್ರಾಥಮಿಕ ಶಾಲೆಗಳು ಈ ವರ್ಷ ಮುಚ್ಚಲ್ಪಟ್ಟಿವೆ. 1200ಗಳಷ್ಟು ಶಾಲೆಗಳಲ್ಲಿ ಏಳು ಕ್ಲಾಸುಗಳಿಗೆ ಒಬ್ಬ ಉಪಾಧ್ಯಯರಿರುವುದು ಶೋಷನೀಯ. ನಮ್ಮ ರಾಜ್ಯದಲ್ಲಿ 2000ನೇ ಇಸವಿಯ ತನಕ ಹತ್ತು ಹಲವು ವಸತಿ ಶಾಲೆಗಳು ಅಂಬೇಡ್ಕರ್ ಶಾಲೆಗಳು, ಮೋರಾರ್ಜಿ ದೇಸಾಯಿ ಶಾಲೆಗಳು, ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗಳು, ನಾರಾಯಣ ಗುರುವಿನ ಶಾಲೆಗಳು, ಅಬ್ದುಲ್ ಕಲಾಂ ಶಾಲೆಗಳು, ಅಟಲ್ ಬಿಹಾರಿ ವಾಜಪೇಯಿ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಉತ್ತಮ ಶಿಕ್ಷಣವನ್ನು ನೀಡುತ್ತಿದ್ದವು. 3ತದನಂತರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಸುಮಾರು 840 ವಸತಿ ಶಾಲೆಗಳನ್ನು ನಿರ್ಮಿಸಿದವು. ಒಂದು ವಸತಿ ಶಾಲೆಯನ್ನು ನಿರ್ಮಿಸಲು ಕನಿಷ್ಠ 10 ಎಕರೆಯಷ್ಟು ಜಾಗ, 24.5 ಕೋಟಿಯಷ್ಟು ಹಣ, ಒಬ್ಬ ವಿದ್ಯಾರ್ಥಿಯ ಶಿಕ್ಷಣಕ್ಕೆ ಸರಿಸುಮಾರು 2 ಲಕ್ಷದಷ್ಟು ಹಣವನ್ನು ವ್ಯಯಿಸುತ್ತಿದೆ. ಒಟ್ಟು 840 ವಸತಿ ಶಾಲೆಗಳ ಮೇಲೆ ಸರಕಾರ ವಾರ್ಷಿಕವಾಗಿ 36 ಸಾವಿರ ಕೋಟಿ ರೂಪಾಯಿಗಳ ಬಜೆಟ್‌ನ್ನು ಮೀಸಲಿಟ್ಟಿದೆ. ಆದರೆ ಈ ಎಲ್ಲಾ 840 ವಸತಿ ಶಾಲೆಗಳ ಪೈಕಿ ಚಾಮರಾಜಪೇಟೆಯ ಒಂದು ಶಾಲೆಯನ್ನು ಹೊರತುಪಡಿಸಿ ಉಳಿದೆಲ್ಲಾ ಶಾಲೆಗಳು ಇಂಗ್ಲೀಷ್ ಮಾಧ್ಯಮ ಶಾಲೆಗಳಾಗಿ ಬದಲಾಗಿರುವುದು ಮಾತ್ರ ದುರಂತವೇ ಸರಿ. ನಾವಿಂದು ಬಡಮಕ್ಕಳಿಗೆ ಕನ್ನಡ ಮಾಧ್ಯಮ, ಸ್ಥಿತಿವಂತರಿಗೆ ಇಂಗ್ಲೀಷ್ ಮಾಧ್ಯಮ ಎಂಬ ಮನಸ್ಥಿತಿಗೆ ಬಂದಿದ್ದೇವೆ. ಇದು ಸಲ್ಲದು. ಬುದ್ದಿವಂತಿಕೆಗೆ ಬಾಷೆಯ ತೊಡಕಿಲ್ಲ ಎಂಬುದನ್ನು ಜರ್ಮನಿ, ಜಪಾನ್, ಚೀನಾ, ರಷ್ಯಾ ದೇಶಗಳು ಸಾಬೀತುಪಡಿಸಿವೆ. ಇನ್ನೂ ಮುಂದಾದರೂ ಜಿಲ್ಲೆಗೊಂದರಂತೆ ಮಾದರಿ ಕನ್ನಡ ಮಾಧ್ಯಮ ಶಾಲೆಯನ್ನು ತೆರೆಯಲು ಸರಕಾರ ಮುಂದಾಗಬೇಕು. ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯನ್ನು 15 ವರ್ಷಗಳ ಹಿಂದೆ ಪ್ರಾರಂಭಿಸಿ ಸದ್ಯ 640 ವಿದ್ಯಾರ್ಥಿಗಳು ಸಂಪೂರ್ಣ ಉಚಿತ ಶಿಕ್ಷಣದಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಈ ಶಾಲೆಗಾಗಿ ನಮ್ಮ ಪ್ರತಿಷ್ಠಾನ ಪ್ರತಿ ವಿದ್ಯಾರ್ಥಿಯ ಮೇಲೆ 1.30 ಲಕ್ಷದಂತೆ ಸುಮಾರು 8ಕೋಟಿಯಷ್ಟು ಹಣವನ್ನು ವಿನಿಯೋಗಿಸುತ್ತಿದೆ. ಸರಕಾರ, ಇಲಾಖೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯನ್ನು ಮಾದರಿಯಾಗಿ ಪರಿಗಣಿಸಿ, ಇದೇ ರೀತಿಯ ಗುಣಾತ್ಮಕ ಶಿಕ್ಷಣವನ್ನು ನೀಡಿದರೆ ಕನ್ನಡ ಮಾಧ್ಯಮ ಶಾಲೆಗಳಿಗೆ ಎಂದು ಸೋಲಾಗದು. ನಮ್ಮ ರಾಜ್ಯದಲ್ಲಿರುವ ಹತ್ತು ಹಲವು ಶ್ರೀಮಂತ ಸಂಸ್ಥೆಗಳು, ಖಾಸಗಿ ಕಂಪೆನಿಗಳು, ಕಾರ್ಪೋರೇಟ್ ಸಂಸ್ಥೆಗಳು ಆಳ್ವಾಸ್ ಮಾದರಿಯ ಕನ್ನಡ ಮಾಧ್ಯಮ ಶಾಲೆಗಳನ್ನು ನಿರ್ಮಿಸಲು ಮುಂದೆ ಬರಬೇಕು. ತಮ್ಮ ಸಿಎಸ್‌ಆರ್ ಫಂಡ್‌ನ್ನು ಈ ನೆಲೆಯಲ್ಲಿ ವಿನಿಯೋಗಿಸಲು ಮನಸ್ಸು ಮಾಡಬೇಕು. ಈ ಸಂಸ್ಥೆಗಳು ತಮ್ಮ ಸಿಎಸ್‌ಆರ್ ಫಂಡ್‌ನ್ನು ಕನ್ನಡ ಮಾಧ್ಯಮ ಶಾಲೆಗಳನ್ನು ನಿರ್ಮಿಸಲು ಅಥವಾ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಅಭಿವೃದ್ಧಿಗೆ ಬಳಸಲು ಮುಂದೆ ಬಂದರೆ ತಾನೇ ಖುದ್ದಾಗಿ ಜವಾಬ್ದಾರಿಯನ್ನು ವಹಿಸಿಕೊಂಡು ಮಕ್ಕಳಿಗೆ ಈ ಕಾಲಕ್ಕುನುಗುಣವಾದ ಶಿಕ್ಷಣವನ್ನು ನೀಡಲು ಸಿದ್ದ. ಯಾರೇ ಒಬ್ಬ ವ್ಯಕ್ತಿ, ಸಂಘ ಸಂಸ್ಥೆ ಅಥವಾ ಸರಕಾರವಿರಬಹುದು ತನಗೆ ಇಂತಹ ಅವಕಾಶವನ್ನು ನೀಡಿ, ವಿಶ್ವಾಸಕ್ಕೆ ತೆಗೆದುಕೊಂಡರೆ, ಅವರ ಹೆಸರಿನಲ್ಲಿ ತನ್ನ ಕ್ಯಾಂಪಸನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ತಾನು ಉತ್ಸುಕನಾಗಿದ್ದೆನೆ. ಸರಕಾರವು ಬಯಸಿದಲ್ಲಿ ಆಳ್ವಾಸ್ ಕ್ಯಾಂಪಸ್‌ನಲ್ಲೆ ಒಂದು ಮಾದರಿ ಕನ್ನಡ ಮಾಧ್ಯಮ ಶಾಲೆಯನ್ನು ತೆರೆಯಲು ಮುಂದೆ ಬಂದರೆ, ಈ ವರ್ಷದಲ್ಲೆ ಅಂತಹ ಶಾಲೆಯನ್ನು ಪ್ರಾರಂಭಿಸಲು ಸಿದ್ಧ ಎಂದರು. 35ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸಿದ್ದರೂ ಬಹಳ ಅಚ್ಚುಕಟ್ಟಿನ ವ್ಯವಸ್ಥೆಯೊಂದಿಗೆ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಆಳ್ವಾಸ್ ಸಂಸ್ಥೆಯ ವತಿಯಿಂದ ವ್ಯವಸ್ಥಿತ ಶೌಚಾಲಯದೊಂದಿಗೆ ಉಚಿತ ತಂಗುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಸದ್ಯ ಇಡೀ ಕನ್ನಡ ಮಾಧ್ಯಮ ಶಾಲೆಯಲ್ಲಿ 6ರಿಂದ 9ನೇ ತರಗತಿಯವರೆಗೆ 640ಕ್ಕೂ ಅಧಿಕ ಮಕ್ಕಳಿದ್ದು, ಉಚಿತ ಊಟ, ವಸತಿ ವ್ಯವಸ್ಥೆಯಲ್ಲಿ ವಿಧ್ಯಾಭ್ಯಾಸ ಪಡೆಯುತ್ತಿದ್ದಾರೆ. ವಾರ್ಷಿಕ ಈ ವಿದ್ಯಾರ್ಥಿಗಳ ಮೇಲೆ ಸಂಸ್ಥೆ ಸುಮಾರು 8 ಕೋಟಿಯಷ್ಟು ಹಣವನ್ನು ವ್ಯಯಿಸುತ್ತಿದೆ. 6 ರಿಂದ 9ನೇ ತರಗತಿಯವರೆಗಿನ ಪಠ್ಯ ವಿಷಯಗಳು ಮತ್ತು ತಾರ್ಕಿಕ ಸಾಮರ್ಥ್ಯ ಸೇರಿ ಒಟ್ಟು 2 ಗಂಟೆ 30 ನಿಮಿಷದಂತೆ 150 ಅಂಕಗಳಿಗೆ ಪರೀಕ್ಷೆ ನಡೆದಿದೆ. ಈಗಾಗಲೇ ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಗಾಗಿ ಪತ್ರಿಕಾ ಪ್ರಕಟಣೆ ನೀಡಿದ್ದು, ಕ್ರೀಡಾ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶೇಷ ಆದ್ಯತೆಯನ್ನು ನೀಡಿ ಪ್ರತ್ಯೇಕ ಆಯ್ಕೆ ಶಿಬಿರಗಳನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.

ಮುಳಿಯ ಜ್ಯುವೆಲ್ಸ್‌ ನಲ್ಲಿ ಡೈಮಾಂಡ್ ಫೆಸ್ಟ್ ಗೆ ಚಾಲನೆ

Article Image

ಮುಳಿಯ ಜ್ಯುವೆಲ್ಸ್‌ ನಲ್ಲಿ ಡೈಮಾಂಡ್ ಫೆಸ್ಟ್ ಗೆ ಚಾಲನೆ

ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮಾನಸದಲ್ಲಿ ನಲ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ ನಲ್ಲಿ 3ರಂದು ನಡೆದ ಡೈಮಾಂಡ್ ಫೆಸ್ಟ್ ಚಾಲನೆ ಸಮಾರಂಭದಲ್ಲಿ ಮಾತನಾಡಿದರು. ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ, ಚಿನ್ನಾಭಾರಣಗಳಲ್ಲಿ ಉತ್ತಮ ಗುಣ ಮಟ್ಟವನ್ನು ನೀಡುತ್ತಾ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವ್ಯವಹಾರಕ್ಕೆ ಸಾಮಾಜಿಕವಾಗಿ ತೊಡಗಿಸಿಕೊಂಡು ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಸಂಸ್ಥೆ ಮುಳಿಯ ಎಂದು ಅಭಿಪ್ರಾಯಪಟ್ಟರು. ಮರ‍್ಕೇಟಿಂಗ್ ಕನ್ಸಲ್‌ಟೆಂಟ್ ವೇಣುಶರ್ಮ ಮಾತನಾಡಿ, ಚಿನ್ನಾಭರಣ ಸುರಕ್ಷಿತ ಹೂಡಿಕೆಯ ಉದ್ಯಮವಾಗಿದೆ. ವಿಶಿಷ್ಟ ಹಾಗೂ ವಿನೂತನ ವಜ್ರಾಭರಣಗಳ ಸಂಗ್ರಹಣೆ ಈ ಬಾರಿಯ ಡೈಮಾಂಡ್ ಫೆಸ್ಟ್ ನಲ್ಲಿದೆ. ಜೀವನದ ಮೊದಲ ವಜ್ರಾಭರಣ ಖರೀದಿಯನ್ನು ಮುಳಿಯೊಂದಿಗೆ ಪ್ರಾರಂಭಿಸಿ ಎಂದು ಹೇಳಿದರು. ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್‌ ಸ್ವಾಗತಿಸಿ, ಸಿಬ್ಬಂದಿ ಅಶ್ವಥ್ ವಂದಿಸಿ, ಕನ್ನಿಕಾ ನಿರೂಪಿಸಿದರು.

ಆಳ್ವಾಸ್‌ನಲ್ಲಿ ಫಿಸಿಯೋ ಕನೆಕ್ಟ್ - 2025 ವಿಚಾರ ಸಂಕಿರಣ

Article Image

ಆಳ್ವಾಸ್‌ನಲ್ಲಿ ಫಿಸಿಯೋ ಕನೆಕ್ಟ್ - 2025 ವಿಚಾರ ಸಂಕಿರಣ

ಮೂಡುಬಿದಿರೆ: ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಫಿಸಿಯೋ ಕನೆಕ್ಟ್ - 2025 ವಿದ್ಯಾಗಿರಿಯ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತೇಜಸ್ವಿನಿ ಆಸ್ಪತ್ರೆಯ ಆರ್ಥೋಸ್ಕೊಪಿ ಹಾಗೂ ಸ್ಪೋರ್ಟ್ಸ್ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಸುಮಂತ್ ನಾಯಕ್, ಶಸ್ತ್ರಚಿಕಿತ್ಸೆಯು ಆರೋಗ್ಯದ ಸಮಸ್ಯೆಗೆ ಪರಿಹಾರ ನೀಡಬಲ್ಲದು ಆದರೆ ನಿಜವಾದ ಸವಾಲು ರೋಗಿಯ ಚೇತರಿಕೆಯಲ್ಲಿ ಕಂಡುಬರುತ್ತದೆ. ಫಿಸಿಯೋತೆರಪಿಸ್ಟ್ ಗಳು ಅಂತಹ ಸವಾಲುಗಳನ್ನು ಬಗೆಹರಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು. ಅದ್ಯಕ್ಷತೆ ವಹಿಸಿದ್ದ ಆಳ್ವಾಸ್ ಹೆಲ್ತ್ ಸೆಂಟರ್‌ನ ಪ್ರಸೂತಿ ತಜ್ಞೆ ಡಾ. ಹನಾ ಶೆಟ್ಟಿ ಮಾತನಾಡಿ, ಕಲಿಯುವಿಕೆಯು ಒಂದು ನಿರಂತರ ಪ್ರಕ್ರಿಯೆ. ಈ ವಿಚಾರ ಸಂಕಿರಣದ ಮೂಲಕ ಪ್ರತಿಯೊಬ್ಬರು ಸವಾಲನ್ನು ಅರಿಯುವ ಜೊತೆಗೆ, ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿ. ಜ್ಞಾನದ ವಿನಿಮಯವಾಗುವುದು ಅಗತ್ಯ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನ ಪ್ರಾಧ್ಯಪಕ ಡಾ. ಪ್ರಭು ರಾಜ ಗಾಯಗಳ ಚೇತರಿಕೆಯಲ್ಲಿ ಉಂಟಾಗುವ ತೋರಕೊಲಂಬರ್ ಫಾಸಿಯ ಕುರಿತು ಮಾಹಿತಿ ನೀಡಿದರು. ಆಕ್ಸ್ಫರ್ಡ್ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ವಸಂತನ್, ಸ್ಟ್ರೋಕ್ಉಂಟಾದ ರೋಗಿಗಳಿಗೆ ಕೊಡಮಾಡುವ ಫಿಸಿಯೋಥೆರಪಿ ವ್ಯಾಯಾಮದ ಕುರಿತು ಮಾತನಾಡಿದರು. ಚೆನ್ನೈನ ಸವಿತ ಫಿಸಿಯೋಥೆರಪಿ ಕಾಲೇಜಿನ ಪ್ರಾಧ್ಯಾಪಕ ಡಾ. ಸರವನ ಕುಮಾರ್ ಜೆಐಸಿಯು ರೋಗಿಗಳ ನಿರ್ವಹಣೆಯಲ್ಲಿ ಫಿಸಿಯೋಥೆರಪಿ ಪಾತ್ರದ ಕುರಿತು ಹಾಗೂ ಡಾ. ಪರ್ತಿಪನ್ ರಾಮಸ್ವಾಮಿ ವ್ಯವಹಾರಿಕ ಉದ್ಯಮವಾಗಿ ಫಿಸಿಯೋಥೆರಪಿ ಎಂಬ ವಿಷಯದ ಕುರಿತು ವಿಚಾರ ಮಂಡಿಸಿದರು. ವಿಚಾರ ಸಂಕಿರಣದಲ್ಲಿ ಭಾರತದ ವಿವಿಧ ಕಾಲೇಜುಗಳಿಂದ 420 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕ್ಷಮಾ ಶೆಟ್ಟಿ ಉಪಸ್ಥಿತರಿದ್ದರು. ಡಾ. ಉಮ್ಮೆ ಸೌದಾ ಕಾರ್ಯಕ್ರಮ ನಿರೂಪಿಸಿದರು.

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Article Image

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಉಜಿರೆ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಭೌತಶಾಸ್ತ್ರ ಅಧ್ಯಯನ ವಿಭಾಗ ಮತ್ತು ಪದವಿ ಭೌತಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಮಾರ್ಚ್ 1, 2025 ರಂದು “ಕ್ವಾಂಟಮ್ ಟು ಕಾಸ್ಮೊಸ್” ಉಪನ್ಯಾಸ ಸರಣಿ ಆಯೋಜಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನ 2025 ಅನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಐಐಟಿ ದೆಹಲಿಯಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಡಾ. ವಿ. ರವಿಶಂಕರ್ "ಕ್ವಾಂಟಮ್ ಮಾಹಿತಿಗೆ ಆಹ್ವಾನ" ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಕ್ವಾಂಟಮ್ ಮಾಹಿತಿಯ ಪ್ರಾಮುಖ್ಯತೆ, ಪಾತ್ರ ಮತ್ತು ಮುಂದಿನ ದಿನಗಳಲ್ಲಿ ಅದರ ಪರಿಣಾಮಗಳನ್ನು ಕುರಿತಾಗಿ ಅವರು ಚರ್ಚಿಸಿದರು. ಮಣಿಪಾಲ ನೈಸರ್ಗಿಕ ವಿಜ್ಞಾನ ಕೇಂದ್ರ ಮಾಹೆ, ನಿರ್ದೇಶಕ ಡಾ.ಪಿ.ಶ್ರೀಕುಮಾರ್ "ಭಾರತದಲ್ಲಿ ಮುಂಬರುವ ಖಗೋಳಶಾಸ್ತ್ರದ ಪ್ರಮುಖ ಯೋಜನೆಗಳು" ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿ ಮಾತನಾಡಿದರು. ಅವರು ವೀಕ್ಷಣೆ-ಆಧಾರಿತ ಖಗೋಳಶಾಸ್ತ್ರದ ಮೂಲ ಪರಿಕಲ್ಪನೆಗಳು ಮತ್ತು ಈ ಕ್ಷೇತ್ರದಲ್ಲಿ ಸಂಶೋಧನೆಯ ಪ್ರಮುಖ ಆಯಾಮಗಳ ಬಗ್ಗೆ ವಿವರಿಸಿದರು. ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ಎಸ್ ಕಾರ್ಯಕ್ರಮ ಉದ್ಘಾಟಿಸಿದರು. ವಿಶ್ವಸಂಸ್ಥೆಯು ಈ ವರ್ಷವನ್ನು "ಅಂತಾರಾಷ್ಟ್ರೀಯ ಕ್ವಾಂಟಮ್ ವಿಜ್ಞಾನ ಮತ್ತು ತಂತ್ರಜ್ಞಾನ ವರ್ಷ" ಎಂದು ಘೋಷಿಸಿದೆ ಮತ್ತು ಮುಂಬರುವ ವರ್ಷಗಳಲ್ಲಿ ಭೌತಶಾಸ್ತ್ರವು ಮಹತ್ವದ ಸ್ಥಾನ ಪಡೆಯಲಿದೆ ಎಂದು ಅವರು ಹೇಳಿದರು. ಎಸ್‌ಡಿಎಂ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಪೇಕ್ಷಾ ಜೈನ್‌ ಉಪಸ್ಥಿತರಿದ್ದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿಸಲಾಯಿತು.

ಉಜಿರೆ ಎಸ್.ಡಿ.ಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ವಿಶ್ವನಾಥ್ ಪಿ. ನೇಮಕ

Article Image

ಉಜಿರೆ ಎಸ್.ಡಿ.ಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ವಿಶ್ವನಾಥ್ ಪಿ. ನೇಮಕ

ಉಜಿರೆ, ಮಾರ್ಚ್ 1: ಉಜಿರೆಯ ಶ್ರೀ ಧ.ಮ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಿರಿಯ ಅಧ್ಯಾಪಕ ಡಾ. ವಿಶ್ವನಾಥ ಪಿ ನೇಮಕಗೊಂಡಿದ್ದಾರೆ. ಡಾ.ಕುಮಾರ ಹೆಗ್ಡೆ ಅವರ ವಯೋಸಹಜ ನಿವೃತ್ತಿಯಿಂದ ತೆರವಾಗಿದ್ದ ಪ್ರಾಂಶುಪಾಲರ ಹುದ್ದೆಗೆ ವಿಶ್ವನಾಥ ಅವರು ಆಯ್ಕೆಯಾಗಿದ್ದಾರೆ. 34 ವರ್ಷಗಳ ಬೋಧನಾನುಭವವುಳ್ಳ ವಿಶ್ವನಾಥ ಅವರು ಕಳೆದ ಐದು ವರ್ಷಗಳಿಂದ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ, ವಿಭಾಗದಲ್ಲಿ ಅಧ್ಯಯನ ಪೂರೈಸಿ 1990ರಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಆರ್ಗ್ಯಾನಿಕ್ ಕೆಮಿಸ್ಟ್ರೀ ವಿಷಯದಲ್ಲಿ ವಿಶೇಷ ಪರಿಣತಿ ಪಡೆದವರು. ನವದೆಹಲಿಯ ಯುಜಿಸಿಯ ಫ್ಯಾಕಲ್ಟಿ ಇಂಪ್ರೂವ್‌ಮೆಂಟ್ ಪ್ರೋಗ್ರಾಂನ ಭಾಗವಾಗಿ ಇವರು ಹೀಟರಾಸೈಕ್ಲಿಕ್ ಕೆಮಿಸ್ಟ್ರೀ ವಲಯದಲ್ಲಿ ನಡೆಸಿದ ಸಂಶೋಧನಾ ಅಧ್ಯಯನಕ್ಕಾಗಿ 1999ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಸ್ನಾತಕೋತ್ತರ ಅಧ್ಯಯನ ಪೂರ್ಣಗೊಳಿಸಿದ ನಂತರ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿ ಒಂದು ವರ್ಷದವರೆಗೆ ಸೇವೆ ಸಲ್ಲಿಸಿದ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅಧ್ಯಾಪಕರಾಗಿ 1991ರಲ್ಲಿ ಸೇರ್ಪಡೆಗೊಂಡರು. ಕಾಲೇಜಿನಲ್ಲಿ 2008ರಲ್ಲಿ ಆರಂಭಗೊಂಡ ಸ್ನಾತಕೋತ್ತರ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಯೋಜಕ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ಇವರ ಹೆಗಲೇರಿತು. ವಿಭಾಗದ ಮುಖ್ಯಸ್ಥರಾಗಿ 2013ರಲ್ಲಿ ಬಡ್ತಿ ಹೊಂದಿ ಏಳು ವರ್ಷಗಳ ಕಾಲ ಕಾರ್ಯನಿರ್ವಹಿಸಿದರು. ನಂತರ 2020ರಲ್ಲಿ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಆಗಿ ನೇಮಕಗೊಂಡರು. ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು ಯುಜಿಸಿ ನೂತನ ನಿಯಮಾನುಸಾರ ರಸಾಯನಶಾಸ್ತ್ರ ಪ್ರಾಧ್ಯಾಪಕರನ್ನಾಗಿಸಿ ಬಡ್ತಿ ನೀಡಿತು. ದಕ್ಷಿಣ ಕನ್ನಡದ ಖಾಸಗಿ ಕಾಲೇಜುಗಳ ಪೈಕಿ ಮೊದಲ ಬಾರಿಗೆ ಡಾ. ವಿಶ್ವನಾಥ ಪಿ ಅವರಿಗೆ ಪ್ರಾಧ್ಯಾಪಕ ಹುದ್ದೆ ಲಭಿಸಿರುವುದು ವಿಶೇಷ. ಡಾ.ವಿಶ್ವನಾಥ ಪಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳು, ಕಾರ್ಯಾಗಾರಗಳು ಮತ್ತು ವಿಚಾರ ಗೋಷ್ಠಿಗಳು ಸೇರಿದಂತೆ ಅನೇಕ ಮಹತ್ವದ ಶೈಕ್ಷಣಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ. ತಮ್ಮ ಸಂಶೋಧನಾ ಅಧ್ಯಯನದ ಆಧಾರದಲ್ಲಿ 38 ಸಂಶೋಧನಾ ಪ್ರಬಂಧಗಳನ್ನು ಪೀರ್ ರೀವ್ಯೂವ್ಡ್ ಮತ್ತು ಯುಜಿಸಿ ಕೇರ್ ಲಿಸ್ಟ್ನಲ್ಲಿ ಆದ್ಯತೆ ಪಡೆದ ಸಂಶೋಧನಾ ನಿಯತಕಾಲಿಕೆಗಳಲ್ಲಿ ಪ್ರಕಟಿಸಿದ್ದಾರೆ. ಅಲ್ಲದೇ 12 ಸಂಶೋಧನಾ ಪ್ರಬಂಧಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಮಂಡಿಸಿದ್ದಾರೆ. ತುಮಕೂರು ವಿಶ್ವವಿದ್ಯಾಲಯದಿಂದ ಸಂಶೋಧನಾ ಮಾರ್ಗದರ್ಶಕರಾಗಿ ನಿಯೋಜಿತರಾಗಿರುವ ಇವರ ಮಾರ್ಗದರ್ಶನದಲ್ಲಿ ಒಬ್ಬರು ಪಿ.ಎಚ್.ಡಿ ಮತ್ತು ಒಬ್ಬರು ಎಂ.ಫಿಲ್ ಪದವಿ ಪಡೆದಿದ್ದಾರೆ. ಯುಜಿಸಿಯಿಂದ ಅನುಮೋದಿತ ಮೂರು ಕಿರಿಯ ಸಂಶೋಧನಾ ಯೋಜನೆಗಳನ್ನು ನಿರ್ವಹಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದು ರಸಾಯನಶಾಸ್ತ್ರ ವಿಭಾಗದಿಂದ ನಿರ್ವಹಿಸಲ್ಪಟ್ಟ ಸಂಶೋಧನಾ ಯೋಜನೆಗೆ ಕೋ ಇನ್ವೆಸ್ಟಿಗೇಟರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ಅನುಮೋದಿತಗೊಂಡ ಮಹತ್ವದ ಸಂಶೋಧನಾ ಯೋಜನೆಯ ಸ್ನಾತಕೋತ್ತರ ಹಂತದಲ್ಲಿ ಯೋಜನಾನುಷ್ಠಾನ ಸಮೂಹದ ಅಧ್ಯಕ್ಷ ಹುದ್ದೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಬೋಧನೆ, ಸಂಶೋಧನಾ ಅಧ್ಯಯನ ಮತ್ತು ಸಾಂಸ್ಥಿಕ ಆಡಳಿತಾತ್ಮಕ ಹುದ್ದೆಗಳ ಸಮರ್ಥ ನಿರ್ವಹಣೆ – ಇವು ಡಾ.ವಿಶ್ವನಾಥ ಪಿ ಅವರ ಶೈಕ್ಷಣಿಕ ವೃತ್ತಿಪರತೆ ಮತ್ತು ನಾಯಕತ್ವದ ಗುಣಾತ್ಮಕ ಅಂಶಗಳು. ರಸಾಯನಶಾಸ್ತ್ರದ ಅಕ್ಯಾಡೆಮಿಕ್ ಹಿನ್ನೆಲೆಯೊಂದಿಗೆ ಎಸ್.ಡಿ.ಎಂ ಸಂಸ್ಥೆಯ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಜವಾಬ್ದಾರಿಗಳನ್ನು ಶ್ರದ್ಧೆಯಿಂದ ನಿಭಾಯಿಸಿದವರು. ಬೋಧಕರು ಅಳವಡಿಸಿಕೊಳ್ಳಬೇಕಾದ ಶೈಕ್ಷಣಿಕ ಶಿಸ್ತನ್ನು ನೆಲೆಗೊಳಿಸಿದವರು. ವ್ಯವಸ್ಥಿತ ರೀತಿಯಲ್ಲಿ ಸಹೋದ್ಯೋಗಿಗಳ ತಂಡವನ್ನು ಕಟ್ಟುವ ಜಾಣ್ಮೆ ಇವರ ಶಕ್ತಿ. ವೃತ್ತಿಪರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿಗೆ ಪ್ರೇರಣೆ ನೀಡುವ ಅನನ್ಯತೆ ಇವರದು. ಡಾ.ವಿಶ್ವನಾಥ ಪಿ ನಿರ್ವಹಿಸಿದ ಹುದ್ದೆಗಳು ಮತ್ತು ಹೊಣೆಗಾರಿಕೆಗಳು ರೋವರ್/ರೇಂಜರ್ ಕಾರ್ಯಕ್ರಮ ಅಧಿಕಾರಿ, 1994ರಿಂದ 2003 ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ, 2003-07 ಅಧ್ಯಕ್ಷರು, 2008-2013 ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರು, ಎಸ್.ಡಿ.ಎಂ ಕಾಲೇಜ್(ಸ್ವಾಯತ್ತ), ಉಜಿರೆ, 2013ರವರೆಗೆ ಕಾರ್ಯದರ್ಶಿಗಳು, ಎಸ್.ಡಿ.ಎಂ ಅಧ್ಯಾಪಕರ ಸಂಘ, 2015-16 ಉಪಾಧ್ಯಕ್ಷರು, ಮಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘ (ಅಮುಕ್ತ್) 2015-2017 ಸಂಯೋಜಕರು, ಸಿ.ಪಿ.ಇ ಸ್ಕೀಮ್, ಯುಜಿಸಿ, ನವದೆಹಲಿ, ಎಸ್‌ಡಿಎಂ ಕಾಲೇಜ್, ಉಜಿರೆ. 2014-2019 ಸದಸ್ಯರು, ಐಕ್ಯೂಎಸಿ, ಅಕ್ಯಾಡೆಮಿಕ್ ಕೌನ್ಸಿಲ್, ಎಸ್.ಡಿ.ಎಂ ಕಾಲೇಜ್, ಉಜಿರೆ 2014ರವರೆಗೆ ಅಧ್ಯಕ್ಷರು, ಟೀಚಿಂಗ್, ಲರ್ನಿಂಗ್ ಮತ್ತು ಇವ್ಯಾಲ್ಯುವೇಷನ್, 2014ತೊ 2020 ನಿರ್ದೇಶಕರು, ಎಸ್.ಡಿ.ಎಂ ಸಂಶೋಧನಾ ಕೇಂದ್ರ, ತುಮಕೂರು ವಿಶ್ವವಿದ್ಯಾಲಯ, 2016ರಿಂದ 2021 ಸಂಯೋಜಕರು, ಎಂ.ಎಸ್.ಸಿ (ಮೆಡಿಸಿನಲ್ ಕೆಮಿಸ್ಟ್ರೀ, ಕೆಮಿಸ್ಟ್ರೀ ಆರ್ಗ್ಯಾನಿಕ್ ಕೆಮಿಸ್ಟ್ರೀ, 2008ರಿಂದ ಸಂಯೋಜಕರು, ಎಸ್.ಡಿ.ಎಂ ಮಣ್ಣು ಪರೀಕ್ಷಾ ಕೇಂದ್ರ 2016ರಿಂದ ಉಪಾಧ್ಯಕ್ಷರು, ಎಸ್.ಡಿ.ಎಂ ಸಿಬ್ಬಂದಿ ಸೌಹಾರ್ದ ಸಹಕಾರಿ ನಿಯಮಿತ(ರಿ), ಉಜಿರೆ. 2019ರಿಂದ ಕನ್ಸಲ್ಟಂಟ್, ವಾಟರ್ ಕ್ವಾಲಿಟಿ ಮೇಂಟೇನೆನ್ಸ್, ಎಸ್.ಡಿ.ಎಂ ಸ್ವಿಮ್ಮಿಂಗ್ ಪೂಲ್, 2020ರ ಜುಲೈ ತಿಂಗಳಿಂದ ಸದಸ್ಯರು, ಐಕ್ಯೂಎಸಿ, ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆ, 2024ರಿಂದ ಕಾರ್ಯಕಾರಿ ಮಂಡಳಿ ಸದಸ್ಯರು, ಎಸ್.ಡಿ.ಎಂ ಕಾಲೇಜು(ಸ್ವಾಯತ್ತ), ಉಜಿರೆ, 2025ರಿಂದ ಅಧ್ಯಕ್ಷರು, ಅಧ್ಯಯನ ಮಂಡಳಿ, ಎಂಎಸ್‌ಸಿ ಕೆಮಿಸ್ಟ್ರೀ/ಆರ್ಗ್ಯಾನಿಕ್ ಕೆಮಿಸ್ಟ್ರೀ, ಎಸ್.ಡಿ.ಎಂ ಕಾಲೇಜ್, ಉಜಿರೆ ಸದಸ್ಯರು, ಅಧ್ಯಯನ ಮಂಡಳಿ, ಸೇಂಟ್ ಅಲೋಷಿಯಸ್ ಕಾಲೇಜ್, ಮಂಗಳೂರು 2020ರಿಂದ 2022ರವರೆಗೆ, ಸರ್ಕಾರಿ ವಿಜ್ಞಾನ ಕಾಲೇಜು, ಹಾಸನ. 2022ರಿಂದ 2024ರವರೆಗೆ, ವಿವೇಕಾನಂದ ಕಾಲೇಜ್, ಪುತ್ತೂರು 2022ರಿಂದ 2025ರವರೆಗೆ ಆಂತರಿಕ ಪರೀಕ್ಷಾ ಮಂಡಳಿ ಸದಸ್ಯರು, ಸೇಂಟ್ ಅಲೋಷಿಯಸ್ ಕಾಲೇಜ್, ಮಂಗಳೂರು, ಸರ್ಕಾರಿ ವಿಜ್ಞಾನ ಕಾಲೇಜು, ಹಾಸನ, ಯೆನಪೊಯಾ ವಿಶ್ವವಿದ್ಯಾಲಯ, ತುಮಕೂರು ವಿಶ್ವವಿದ್ಯಾಲಯ

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Article Image

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಎಸ್.ಡಿ.ಎಂ. ವಿಶ್ವವಿದ್ಯಾಲಯದಿಂದ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಆಚರಣೆಯ ಅಂಗವಾಗಿ ಎಸ್.ಡಿ.ಎಂ. ವಿಶ್ವವಿದ್ಯಾಲಯ ಮತ್ತು ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಪೋಸ್ಟರ್ ಮತ್ತು ಮಾಡಲ್ ಪ್ರಸ್ತುತಿ ಸ್ಪರ್ಧೆಗಳನ್ನು ನಡೆಸಲಾಯಿತು. ಈ ವರ್ಷ ಸುಮಾರು 62 ತಂಡದವರಿಂದ ವೈಜ್ಞಾನಿಕ ಪೋಸ್ಟರ್‌ಗಳನ್ನು ಮತ್ತು 32 ಮಾಡಲ್‌ಗಳನ್ನು ತಯಾರಿಸಿ ಪ್ದರ್ಶಿಸಲಾಯಿತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಮಾಡಲ್ ಪ್ರದರ್ಶನವನ್ನು ಉದ್ಘಾಟಿಸಿದರು. ಹೈದರಾಬಾದ್‌ನ ಡಾ. ರೆಡ್ಡೀಸ್ ಇನ್ಸ್ಟಿಟ್ಯೂಟ್ ಆಫ್ ಲೈಫ್ ಸೈನ್ಸಸ್‌ನ ನಿರ್ದೇಶಕರಾದ ಡಾ. ಶ್ರೀನಿವಾಸ ಓರಗಂಟಿ ಅವರು ಮುಖ್ಯ ಅತಿಥಿಗಳಾಗಿ ಪೋಸ್ಟ ಪ್ರದರ್ಶನವನ್ನು ಉದ್ಘಾಟಿಸಿದರು ಮತ್ತು ಅವರು ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತೀಯ ಫಾರ್ಮಾ ಕಂಪನಿಗಳು ಜಾಗತಿಕ ಮಾರುಕಟ್ಟೆಯಲ್ಲಿ ಮುಂಚ್ಛೂಣಿಯಲ್ಲಿವೆ. ಯುವ ವಿದ್ಯಾರ್ಥಿಗಳು ಸಂಶೋಧನೆ ಮತ್ತು ನಾವೀನ್ಯತೆಗಳಲ್ಲಿ ಸಕ್ರೀಯ ಆಸಕ್ತಿಯನ್ನು ಹೊಂದಬೇಕು. ಭಾರತದಲ್ಲಿ ಆರೋಗ್ಯ ವೃತ್ತಿಪರರು ಮತ್ತು ಸಂಶೋಧಕರಿಗೆ ಸಾಕಷ್ಟು ಅವಕಾಶಗಳಿವೆ ಎಂದರು . ಮುಖ್ಯ ಅತಿಥಿಗಳಾದ ಡಾ. ಶ್ರೀನಿವಾಸ ಓರಗಂಟಿ, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ ಮತ್ತು ಡಾ. ನೈದಿಲ ಶೆಟ್ಟಿ ಅವರು ವಿಜೇತರಿಗೆ ನಗದು ಪ್ರಶಸ್ತಿ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ ಮತ್ತು ಸಂಸ್ಥೆಗಳ ಸಂಯೋಜಕರಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಪೊಸ್ಟರ್ ವಿಭಾಗದಲ್ಲಿ ಶ್ರುಪ್ತಾ ಪಡಿವಾಳ ಮತ್ತು ತಂಡ ಪ್ರಥಮ ಬಹುಮಾನವನ್ನು ಪಡೆದಿದೆ. ಮಾಡಲ್ ವಿಭಾಗದಲ್ಲಿ ಡಾ. ಮಂಜುನಾಥ ಮೇಟಿ ಮತ್ತು ತಂಡ ಪ್ರಥಮ ಬಹುಮಾನ ಗಳಿಸಿದೆ. ಬೋಧಕೇತರ ವಿಭಾಗದಲ್ಲಿ ಪ್ರವೀಣ ಹೋಳೆಮ್ಮನವರ ಮತ್ತು ತಂಡಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪಕುಲಪತಿಗಳಾದ ವಿ. ಜೀವಂಧರ ಕುಮಾರ, ಕುಲಸಚಿರಾದ ಡಾ. ಚಿದೇಂದ್ರ ಶೆಟ್ಟರ, ಉಪ ಕುಲಸಚಿವರಾದ ಡಾ. ಅಜಂತಾ ಜಿ. ಎಸ್., ಹಣಕಾಸು ಅಧಿಕಾರಿಗಳಾದ ವಿ. ಜಿ. ಪ್ರಭು, ಸಂಶೋಧನಾ ನಿರ್ದೇಶಕರಾದ ಡಾ. ಕೆ. ಸತ್ಯಮೂರ್ತಿ, ಅಂಗ ಸಂಸ್ಥೆಗಳ ಮುಖ್ಯಸ್ಥರು, ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ ಎಲ್. ಚಕ್ರಸಾಲಿ ಮತ್ತಿತರರು ಉಪಸ್ಥಿತರಿದ್ದರು. ಡಾ. ರಮೇಶ ಕುಮಾರ, ಪ್ರಾಧ್ಯಾಪಕರು, ಸ್ತ್ರಿ ರೋಗ ಮತ್ತು ಪ್ರಸೂತಿ ವಿಭಾಗ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಟಿ. ಜಿ. ವಾಸುದೇವನ್ ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ದೀಕ್ಷಾ ದೇವರ ಪ್ರಾರ್ಥನೆ ಮಾಡಿದರು. ಡಾ. ಶರ್ಮಿಳಾ ದುಧಾನಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ವಾಚಿಸಿದರು. ಡಾ. ಸಲೀಮಾ ಬಿಜಾಪುರಿ ವಂದನಾರ್ಪಣೆ ಮಾಡಿದರು. ಡಾ. ರೇಣುಕಾರಾಧ್ಯ ಕೆ. ಮಠ ಕಾರ್ಯಕ್ರಮವನ್ನು ನಿರೂಪಿಸಿದರು.

ಎಸ್.ಡಿ.ಎಂ ಪಿಜಿ ಸೆಂಟರ್ ಕೆಮಿಸ್ಟ್ರಿ ವಿಭಾಗದಿಂದ ವಿಜ್ಞಾನ ದಿನಾಚರಣೆ

Article Image

ಎಸ್.ಡಿ.ಎಂ ಪಿಜಿ ಸೆಂಟರ್ ಕೆಮಿಸ್ಟ್ರಿ ವಿಭಾಗದಿಂದ ವಿಜ್ಞಾನ ದಿನಾಚರಣೆ

ಉಜಿರೆ ಮಾರ್ಚ್1: ತಾರ್ಕಿಕ ಚಿಂತನೆಯೊAದಿಗೆ ಗುರುತಿಸಿಕೊಂಡರೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮನ್ನಣೆ ಪಡೆಯುವಂಥ ಸಾಧನೆ ಸಾಧ್ಯವಾಗಿಸಿಕೊಳ್ಳಬಹುದು ಎಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಪ್ರೊ. ನಂದಕುಮಾರಿಕೆ.ಪಿ ಅಭಿಪ್ರಾಯಪಟ್ಟರು. ಉಜಿರೆ ಶ್ರೀ ಧ. ಮಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಶನಿವಾರದಂದು ರಸಾಯನ ಶಾಸ್ತ್ರ ವಿಭಾಗ ಹಾಗೂ ಕಾಂಕೇಮ್ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಸಾಯನ ಶಾಸ್ತ್ರ ವಿಜ್ಞಾನದ ಹೃದಯ ಭಾಗವಾಗಿದ್ದು, ದೈನಂದಿನ ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಖ್ಯವಾದ ಪಾತ್ರವಹಿಸುತ್ತಿದೆ. ಆಧುನಿಕ ಜೀವನದ ಪ್ರತಿಯೊಂದು ಅಂಶವನ್ನೂ ರೂಪಿಸುತ್ತಿದೆ. ತಂತ್ರಜ್ಞಾನದ ಮೂಲಕ ಜ್ಞಾನಾರ್ಜನೆ ಸಾಧ್ಯವಾಗಿಸಿಕೊಳ್ಳಬೇಕು. ವೈಜ್ಞಾನಿಕ ಸಂಶೋಧನೆಗಳು ವೇಗಗತಿಯಲ್ಲಿ ಸಾಗುತ್ತಿರುವ ಈ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಅದಕ್ಕೆತಕ್ಕಂತೆ ವೃದ್ಧಿಸಿಕೊಳ್ಳಬೇಕು. ಇಲ್ಲವಾದರೆ ಉದ್ಯೋಗ ಅವಕಾಶಗಳು ಲಭಿಸುವುದಿಲ್ಲ ಎಂದರು. ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ಅಪೂರ್ವ ಸಂಶೋಧನೆ. ರಾಮನ್ ಪರಿಣಾಮದ ವಿವರಗಳನ್ನು 1928 ಫೆ. 28ರಂದು ಜಗತ್ತಿಗೆ ತಿಳಿಸಿದ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವೆಂದು ಆಚರಿಸಲಾಗುತ್ತದೆ. ಅವರ ಸಂಶೋಧನೆ ಅನ್ವಯದ ಮನವರಿಕೆಯಿಂದಾಗಿ 1930 ನೊಬೆಲ್ ಪಾರಿತೋಷಕ ನೀಡಿ ಗೌರವಿಸಲಾಯಿತು. ಹಲವಾರು ವಿಜ್ಞಾನಿಗಳು ನಡೆದು ಬಂದ ಹಾದಿಯನ್ನು ಸ್ಮರಿಸಲೇಬೇಕು. ನಮ್ಮ ಸಣ್ಣ ಸಣ್ಣ ಆವಿಷ್ಕಾರಗಳೇ ದೊಡ್ಡ ಸಾಧನೆಗೆ ಮೈಲಿಗಲ್ಲುಗಳಾಗುತ್ತವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅವರು ಮಾತನಾಡಿದರು. ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆಯು ವಿದ್ಯಾರ್ಥಿಗಳನ್ನು ವಿಜ್ಞಾನ ವಿಷಯಗಳತ್ತ ಆಸಕ್ತಿ ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ. ಸಂಶೋಧನಾ ವಲಯದಲ್ಲಿ ಮಹತ್ವದ ಸಾಧನೆ ಕೈಗೊಳ್ಳಲು ಪ್ರೇರಣೆ ನೀಡುತ್ತದೆ ಎಂದರು. ರಸಾಯನಶಾಸ್ತ್ರ ವಿಭಾಗವು ಕಾಲೇಜಿನಲ್ಲಿಯೇ ಅತ್ಯಂತ ಅಧಿಕ ಸಂಶೋಧನೆಗಳನ್ನು ಕೈಗೊಂಡಿರುವ ವಿಭಾಗವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿಭಾಗದ ಪ್ರತಿಷ್ಠೆಯನ್ನು ಹೆಚ್ಚಿಸುವ ಹಾಗು ಮುಂದಿನ ಪೀಳಿಗೆಗೆ ಮಾದರಿಯಾಗುವಲ್ಲಿ ಕಾರ್ಯನಿರ್ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕಿ ಡಾ.ಸೌಮ್ಯ ಬಿ.ಪಿ, ಕಾಂಕೇಮ್ ಕಾರ್ಯದರ್ಶಿ ಡಾ.ನವೀನ್‌ಕುಮಾರ್, ಜಂಟಿ ಕಾರ್ಯದರ್ಶಿ ಡಾ. ಸುಜಯ್ ಎಂ ಎಂ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಕ್ಷಾ ನಿರೂಪಿಸಿದರು. ಕಾವ್ಯ ಶೆಟ್ಟಿ ಸ್ವಾಗತಿಸಿದರು. ಅನನ್ಯ ಪಿ. ವಂದಿಸಿದರು.

ಶಿವರಾತ್ರಿ: ಧರ್ಮಸ್ಥಳದಲ್ಲಿ ರಥೋತ್ಸವ

Article Image

ಶಿವರಾತ್ರಿ: ಧರ್ಮಸ್ಥಳದಲ್ಲಿ ರಥೋತ್ಸವ

ಧರ್ಮಸ್ಥಳ: ಶಿವರಾತ್ರಿ ಆಚರಣೆ ಅಂಗವಾಗಿ ಗುರುವಾರ ಬೆಳಗ್ಗಿನ ಜಾವ “ರಥೋತ್ಸವ” ನಡೆಯಿತು. ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ .ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

ಧರ್ಮಸ್ಥಳಕ್ಕೆ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Article Image

ಧರ್ಮಸ್ಥಳಕ್ಕೆ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

ಉಜಿರೆ: ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ಸ್ನಾತಕೋತ್ತರ ಪದವಿ ತರಗತಿ ವಿದ್ಯಾರ್ಥಿಗಳು ಗುರುವಾರ ಧರ್ಮಸ್ಥಳಕ್ಕೆ ಬಂದು ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಶಿಸ್ತುಬದ್ಧವಾಗಿ ನಡೆಯುತ್ತಿರುವ ಬಹುಮುಖಿ ಸೇವಾಚಟುವಟಿಕೆಗಳನ್ನು ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಅಪೂರ್ವ ಅನುಭವ ಪಡೆದರು. ವಿಶೇಷವಾಗಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ತಮ್ಮ ಅನೇಕ ಪ್ರಶ್ನೆಗಳಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ಪಡೆದರು. ಇತ್ತೀಚೆಗೆ ಭಾರತದ ಉಪರಾಷ್ಟ್ರಪತಿ ಮಾನ್ಯ ಜಗದೀಪ್ ಧನ್‌ಕರ್ ಉದ್ಘಾಟಿಸಿದ ದೇವರ ದರ್ಶನಕ್ಕಾಗಿ ``ಶ್ರೀ ಸಾನ್ನಿಧ್ಯ’’ ಸರದಿ ಸಾಲಿನ ವ್ಯವಸ್ಥೆಯನ್ನು ವಿದ್ಯಾರ್ಥಿಗಳು ಪ್ರತ್ಯಕ್ಷವಾಗಿ ಆಸಕ್ತಿಯಿಂದ ವೀಕ್ಷಿಸಿ, ಗಮನಿಸಿ ಸಂತೋಷ ಮತ್ತು ಅಚ್ಚರಿ ವ್ಯಕ್ತಪಡಿಸಿದರು. ಭಕ್ತಾದಿಗಳ ಅನುಕೂಲಕ್ಕಾಗಿ ಶೀಘ್ರ ದೇವರ ದರ್ಶನಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಬಳಸಿ ಅಳವಡಿಸಿದ ಸೌಲಭ್ಯ, ಸವಲತ್ತುಗಳ ಬಗ್ಗೆ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ``ಅನ್ನಪೂರ್ಣ’’ ಭೋಜನಾಲಯದಲ್ಲಿ ಪ್ರತಿದಿನ ಸರಾಸರಿ 50,000 ಮಂದಿ ಭಕ್ತಾದಿಗಳಿಗೆ ಶುಚಿ-ರುಚಿಯಾದ ಸರಳ ಸಾತ್ವಿಕ ಆಹಾರ-ಅನ್ನ, ಸಾರು, ಸಾಂಬಾರು, ಮಜ್ಜಿಗೆ ಹಾಗೂ ಕುಡಿಯುವ ನೀರು ಎಲ್ಲವನ್ನೂ ಸ್ವಚ್ಛತೆಯೊಂದಿಗೆ ಬಳಸುವ ವಿಧಾನ, ಶಿಸ್ತು ಮತ್ತು ಊಟ ಮಾಡಿದ ಹಾಳೆತಟ್ಟೆ, ಬಾಳೆ ಎಲೆ ಇತ್ಯಾದಿಗಳ ನಿರ್ವಹಣೆ, ಅಡುಗೆ ಕೋಣೆಯಲ್ಲಿ ಬಳಸಿದ ನೀರನ್ನು ಶುದ್ಧೀಕರಿಸಿ ಮುಳಿಕ್ಕಾರು ತೋಟದ ಗಿಡಗಳಿಗೆ ಬಳಕೆ ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳು ಸಮಗ್ರ ಮಾಹಿತಿ ಕಲೆ ಹಾಕಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ ಹಾಗೂ ಕುತೂಹಲಕಾರಿ ಪ್ರಶ್ನೆಗಳಿಗೆ ಪೂಜ್ಯರ ಸಮರ್ಪಕ ಉತ್ತರದಿಂದ ವಿದ್ಯಾರ್ಥಿಗಳು ಅಚ್ಚರಿ ವ್ಯಕ್ತಪಡಿಸಿದರು. ಅನ್ನದಾನ, ವಿದ್ಯಾದಾನ, ನ್ಯಾಯದಾನ ಮತ್ತು ಔಷಧದಾನ ಎಂಬ ಚತುರ್ವಿಧ ದಾನಗಳ ಪರಂಪರೆ ಮತ್ತು ಮಾಹಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದರು. ``ನೋಡಿ ತಿಳಿ, ಮಾಡಿ ಕಲಿ’’ ತತ್ವವನ್ನು ಇಲ್ಲಿ ಪ್ರತ್ಯಕ್ಷವಾಗಿ ಅನುಭವಿಸಿದರು. ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದಲ್ಲಿ ಸತ್ಯ, ಧರ್ಮ, ನ್ಯಾಯ, ನೀತಿ, ಕಲೆ, ಸಂಸ್ಕೃತಿ, ಪರಂಪರೆಯ ಸಂರಕ್ಷಣೆಯೊಂದಿಗೆ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ವಿದ್ಯಾರ್ಥಿಗಳಿಗೂ, ಪ್ರೊಫೆಸರುಗಳಿಗೂ ಹೊಸ ಅಪೂರ್ವ ಅನುಭವವನ್ನು ನೀಡಿತು. ಪ್ರಾಚೀನ ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಯೊಂದಿಗೆ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಯಶಸ್ವಿ ಬಳಕೆಯೊಂದಿಗೆ ಧರ್ಮಸ್ಥಳದ ಜನಮಂಗಳ ಕಾರ್ಯಗಳನ್ನು ಪ್ರತ್ಯಕ್ಷವಾಗಿ ಕಂಡು ಅನುಭವಿಸಿದ ಎಂ.ಬಿ.ಎ. ಸ್ನಾತಕೋತ್ತರ ಪದವಿ ತರಗತಿ ವಿದ್ಯಾರ್ಥಿಗಳು ``ಅಯ್ಯಯ್ಯ, ಎಂಚ ಪೊರ್ಲಾಂಡ್’’ ಎಂದು ಅಚ್ಚರಿ ಮತ್ತು ಸಂತೋಷ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಧ್ಯಾಪಕರುಗಳಾದ ಎಂ.ಬಿ.ಎ. ವಿಭಾಗದ ಮುಖ್ಯಸ್ಥರಾದ ಡಾ. ಶರಣ್‌ಕುಮಾರ್ ಶೆಟ್ಟಿ ಹಾಗೂ ಪ್ರೊ. ದಿಶಾ ಸಿ. ಶೆಟ್ಟಿ, ಪ್ರೊ. ಕೀರ್ತನ್ ದೀಕ್ಷಿತ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಧರ್ಮಸ್ಥಳಕ್ಕೆ ಅಧ್ಯಯನ ಪ್ರವಾಸದಲ್ಲಿ ಬಂದು ಅದ್ಭುತ ಅನುಭವ ಪಡೆದರು.

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ

Article Image

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ

ಉಜಿರೆ: ಶಿವರಾತ್ರಿ ಅಂದರೆ ಪವಿತ್ರ ಹಾಗೂ ಮಂಗಳಕರ ರಾತ್ರಿ ಎಂದು ಅರ್ಥ. ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ ಕಳೆದು ಪುಣ್ಯ ಸಂಚಯವಾಗುತ್ತದೆ. ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ. ಜಪ-ತಪ, ಧ್ಯಾನದೊಂದಿಗೆ ವೃತ ನಿಯಮಗಳ ಪಾಲನೆ ಮಾಡಿದಾಗ ಜೀವನ ಪಾವನವಾಗುತ್ತದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಮಾತು ಬಿಡ ಮಂಜುನಾಥ ಎಂಬ ಮಾತು ಪ್ರಚಲಿತವಿದೆ. ನಮ್ಮ ಮಾತು ಮತ್ತು ಕೃತಿಗೆ ಅಂತರವಿರಬಾರದು. ನುಡಿದಂತೆ ನಡೆಯಬೇಕು. ಆಗ ಸತ್ಯ, ಧರ್ಮ, ನ್ಯಾಯ, ನೀತಿಯ ಪಾಲನೆಯೊಂದಿಗೆ ಎಲ್ಲವೂ ಸುಗಮವಾಗಿ ಜೀವನ ಪಾವನವಾಗುತ್ತದೆ. ಮನದಲ್ಲಿರುವ ಕೆಟ್ಟ ಯೋಚನೆ, ಭಾವನೆಗಳನ್ನು ತ್ಯಜಿಸಿ ಎಲ್ಲರೂ ಸುಖಿಗಳಾಗಿರಲಿ ಎಂಬ ಉದಾತ್ತ ಭಾವನೆಯೊಂದಿಗೆ ಲೋಕಕಲ್ಯಾಣವಾಗಲಿ ಎಂದು ಶುಭ ಚಿಂತನೆ ಮಾಡಬೇಕು. ಆಗ ಕಾಲಕ್ಕೆ ಸರಿಯಾಗಿ ಮಳೆ, ಬೆಳೆ ಆಗಿ ಎಲ್ಲೆಲ್ಲೂ ಸುಖ-ಶಾಂತಿ ಮತ್ತು ನೆಮ್ಮದಿ ನೆಲೆಸುತ್ತದೆ ಎಂದು ಹೆಗ್ಗಡೆಯವರು ಹೇಳಿದರು. ಬಳಿಕ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ ಆಹೋ ರಾತ್ರಿ ನಡೆಯಿತು. ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ದೇವರಿಗೆ ಶತರುದ್ರಾಭಿಷೇಕ ಮತ್ತು ಸೀಯಾಳ ಅಭಿಷೇಕ ಸೇವೆ ಅರ್ಪಿಸಿ ಧನ್ಯತೆಯನ್ನು ಹೊಂದಿದರು. ಹೇಮಾವತಿ ವಿ. ಹೆಗ್ಗಡೆಯವರು, ಸುಪ್ರಿಯಾ ಹರ್ಷೇಂದ್ರ ಕುಮಾರ್, ಬೆಂಗಳೂರಿನ ಹನುಮಂತಪ್ಪ ಗುರೂಜಿ ಮತ್ತು ಮರಿಯಪ್ಪ . ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಮತ್ತು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು. ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು ಉಪಸ್ಥಿತರಿದ್ದರು.

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Article Image

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

ಪರಿಶುದ್ಧವಾದ ಭಕ್ತಿ ಮತ್ತು ದೃಢನಂಬಿಕೆಯಿಂದ ನಮ್ಮ ಎಲ್ಲಾ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ ಪಾದಯಾತ್ರೆಯಲ್ಲಿ ಬಂದ ಭಕ್ತಾದಿಗಳಿಗೆ ಶುಭಹಾರೈಸಿ, ಆಶೀರ್ವದಿಸಿದರು. ದೇವರಲ್ಲಿ ಭಕ್ತಿ ಮತ್ತು ನಂಬಿಕೆಯಲ್ಲಿ ಯಾವುದೇ ರೀತಿಯ ಭಯ, ಸಂಶಯ ಇರಬಾರದು. ನಾವು ಕೊಂಚ ತಪ್ಪಿದರೂ ದೇವರು ನಮ್ಮ ರಕ್ಷಣೆ ಮಾಡುತ್ತಾರೆ. ನಂಬಿಕೆಗಳು ಮತ್ತು ವಿಶ್ವಾಸದಿಂದ ನಮ್ಮ ದೋಷಗಳ ದಮನವಾಗುತ್ತದೆ. ಭಕ್ತಿಯಲ್ಲಿ ದೈಹಿಕ ಶಕ್ತಿಗಿಂತಲೂ ಮಾನಸಿಕ ಶಕ್ತಿ, ಸಂಕಲ್ಪ ಮಿಗಿಲಾದುದು. ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ. ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ ಸತ್ಯ ಮತ್ತು ನ್ಯಾಯಮಾರ್ಗದಲ್ಲಿ ನಡೆದರೆ ಅವರಿಗೆ ದೇವರ ಪೂರ್ಣ ಅನುಗ್ರಹವಿರುತ್ತದೆ. ತ್ಯಾಗ ಮಾಡುವುದರಿಂದ ನಾವು ಶಾಶ್ವತ ಸುಖ-ಶಾಂತಿ, ನೆಮ್ಮದಿ ಪಡೆಯಬಹುದು ಎಂದು ಹೆಗ್ಗಡೆಯವರು ಹೇಳಿ, ಪಾದಯಾತ್ರಿಗಳಿಗೆ ಶುಭ ಹಾರೈಸಿದರು. ಪಾದಯಾತ್ರಿಗಳಿಗೆ ನಿರಂತರ ಪ್ರೇರಣೆ, ಮಾರ್ಗದರ್ಶನ ನೀಡುತ್ತಿರುವ ಬೆಂಗಳೂರಿನ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಬಳಗದವರನ್ನು ಹೆಗ್ಗಡೆಯವರು ಅಭಿನಂದಿಸಿದರು. ನಾಗಸಾಧು ಧನಂಜಯ ಗಿರಿ ಗುರೂಜಿ, ಧರ್ಮಸ್ಥಳ ಕ್ಷೇತ್ರದ ಬಗ್ಯೆ ಅಪಾರ ಭಕ್ತಿ, ಗೌರವ ವ್ಯಕ್ತಪಡಿಸಿ ಗರ್ಭಗುಡಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನವಾದರೆ, ನಾವು ಹೊರಗೆ ಬಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಮಾತನಾಡುವ ಮಂಜುನಾಥನ ದರ್ಶನ, ಆಶೀರ್ವಾದ ಪಡೆದು ಪುನೀತರಾಗುತ್ತೇವೆ. ಹೆಗ್ಗಡೆಯವರ ಮೂಲಕ ನಾವು ಶ್ರೀ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದರು. ಸ್ವಚ್ಛತೆಯನ್ನು ಕಾಪಾಡಿ: ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ ಬಂದವರು ನೇತ್ರಾವತಿ ನದಿಯಲ್ಲಿ ಮಿಂದು ಬಟ್ಟೆ, ಸಾಬೂನು, ತ್ಯಾಜ್ಯಗಳನ್ನು ನೀರಿಗೆ ಹಾಕಿ ಅಪವಿತ್ರ ಮಾಡಬಾರದು. ಇದರಿಂದ ಪಾಪಪ್ರಜ್ಞೆ ಹೆಚ್ಚಾಗುತ್ತದೆ ಎಂದು ಅವರು ಭಕ್ತರಿಗೆ ಎಚ್ಚರಿಕೆ ನೀಡಿದರು. ಶಿವಕ್ಷೇತ್ರ ಯಾವಗಲೂ ಶಾಂತವಾಗಿದ್ದು, ಪವಿತ್ರ ಧರ್ಮಸ್ಥಳವನ್ನು ಹಾಗೂ ನೇತ್ರಾವತಿ ನದಿಯನ್ನು ಸ್ವಚ್ಛವಾಗಿಡಲು ಸಹಕರಿಸಿ. ಧರ್ಮಸ್ಥಳದ ಅನ್ನದಾನ ವಿಶ್ವವಿಖ್ಯಾತವಾಗಿದೆ. ಭಕ್ತರು ಕೂಡಾ ಈ ಪವಿತ್ರ ಕಾಯಕಕ್ಕೆ ದಾನ ನೀಡಬಹುದು ಎಂದರು. ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ ಶುಭ ಹಾರೈಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದು ಸಹಕರಿಸಿದರು. ಮರಿಯಪ್ಪ ಸ್ವಾಗತಿಸಿದರು. ಶಶಿಕುಮಾರ ಧನ್ಯವಾದವಿತ್ತರು.

ಮುಳಿಯ ಜುವೆಲ್ಸ್ ನಲ್ಲಿ ನಡೆದಿದ್ದ ಡೈಮಾಂಡ್ ಫೆಸ್ಟ್ ಲಕ್ಕಿ ಕೂಪನ್ ಡ್ರಾ ವಿಜೇತರಿಗೆ ಕಾರ್‌ ಕೀ ಹಸ್ತಾಂತರ

Article Image

ಮುಳಿಯ ಜುವೆಲ್ಸ್ ನಲ್ಲಿ ನಡೆದಿದ್ದ ಡೈಮಾಂಡ್ ಫೆಸ್ಟ್ ಲಕ್ಕಿ ಕೂಪನ್ ಡ್ರಾ ವಿಜೇತರಿಗೆ ಕಾರ್‌ ಕೀ ಹಸ್ತಾಂತರ

ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಆಶಾ ಹಾಗೂ ಪ್ರಭಾಕರ್ ರವರಿಗೆ ಇಂದು (ಫೆ.25 ) ಕಾರ್ ಕೀಯನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ಲೋಹಿತ್‌ ಕುಮಾರ್‌, ಉಪ ಶಾಖಾ ಪ್ರಬಂಧಕಾರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಆಳ್ವಾಸ್‌ಗೆ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿ

Article Image

ಆಳ್ವಾಸ್‌ಗೆ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್‌ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ಸ್‌ನಲ್ಲಿ ಆಳ್ವಾಸ್ ತಂಡ ತಮಿಳುನಾಡುವಿನ ಪಿ.ಎಸ್.ಎನ್.ಎ ದಿಂಡಿಗಲ್ ತಂಡವನ್ನು 35-31 ಅಂಕಗಳಿಂದ ಮಣಿಸಿ ಗೋಲ್ಡ್ ಮೆಡಲ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿಜೇತ ಆಳ್ವಾಸ್ ತಂಡವು ಸೂಪರ್ ಲೀಗ ಹಾಗೂ ಇತರ ಪಂದ್ಯಗಳಲ್ಲಿ ಆತಿಥೇಯ ಮೇರಿ ಗೋ ರೌಂಡ್ ಹಾಗೂ ಟಿಬಿಬಿಸಿ ತಿರುವತ್ತೂರು ತಂಡಗಳನ್ನು ಸೋಲಿಸಿತ್ತು. ಟೂರ್ನಿಯಲ್ಲಿ ರಾಷ್ಟ್ರದ 10 ಪ್ರಮುಖ ಆಹ್ವಾನಿತ ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ತಂಡದ ಲಕ್ಷ್ಮೀದೇವಿ ಟೂರ್ನಿಯ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

ವಿಶೇಷ ಉಪನ್ಯಾಸ ಕಾರ್ಯಕ್ರಮ

Article Image

ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಜಿರೆ, ಫೆ. 24: ಪರಿಸರ ಸಂಬಂಧಿತ ಮಾಹಿತಿ ಕಲೆಹಾಕುವ ಸಂಯಮ ಮತ್ತು ಸಂಗ್ರಹಿತ ವಿವರಗಳನ್ನು ವಿವೇಚಿಸಿ ಅಭಿವ್ಯಕ್ತಿಸುವ ಪ್ರಯತ್ನಗಳ ಮೂಲಕ ಪರಿಸರ ಪರವಾದ ಕಾಳಜಿಯನ್ನು ಮೂಡಿಸಬಹುದು ಎಂದು ಪರಿಸರ ಚಿಂತಕ, ಲೇಖಕ ಶಿವಾನಂದ ಕಳವೆ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪರಿಸರ ಕೇಂದ್ರಿತ ಚಿಂತನೆ ಮತ್ತು ಅಭಿವ್ಯಕ್ತಿ’ ಕುರಿತು ಮಾತನಾಡಿದರು. ಗಮನಿಸುವಿಕೆ, ದಾಖಲಿಸಿಕೊಳ್ಳುವಿಕೆ, ಪ್ರಶ್ನಿಸುವಿಕೆ, ಪರಿಚಯಿಸುವಿಕೆ ಆಧಾರಿತ ಬರವಣಿಗೆಯ ಅಭಿವ್ಯಕ್ತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಬೆಳವಣಿಗೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಪತ್ರಕರ್ತರಾಗಬಯಸುವವರಿಗೆ ಹೊಸದನ್ನು ಹುಡುಕುವ ಚಿಕಿತ್ಸಕ ಕಣ್ಣು ಇರಬೇಕು. ಸಮಗ್ರ ಜ್ಞಾನದೊಂದಿಗೆ ಇದ್ದರೆ ಮಹತ್ವದ್ದನ್ನು ದಾಟಿಸುವ ಸಂವಹನಕಾರರಾಗಬಹುದು ಎಂದರು. ಯಾರೂ ಗಮನಿಸದೇ ಇರುವ ಸಂಗತಿಯನ್ನು ಬರೆದರೆ ಜನ ಓದುತ್ತಾರೆ. ಪರಿಸರದಲ್ಲಿ ತಿಳಿದುಕೊಳ್ಳಬೇಕಾದ ಅನೇಕ ಕೌತುಕದ ಅಂಶಗಳು ಅಡಗಿವೆ. ಅವುಗಳನ್ನು ತಿಳಿದುಕೊಂಡು ಜನರಿಗೆ ದಾಟಿಸುವ ಕಾಳಜಿ ತೋರಬೇಕು. ಆ ಮೂಲಕ ಪರಿಸರದ ಪರವಾದ ಸಂವಹನದ ವಿನೂತನ ಮಾದರಿಗಳನ್ನು ಸೃಷ್ಟಿಸಬಹುದು ಎಂದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ಕೈ ಎಲೆಕ್ಟ್ರಿಕಲ್ಸ್‌ ಸರ್ವೀಸ್‌ ಮತ್ತು ಪ್ರೈಮ್‌ ಅಸೋಸಿಯೇಟ್ಸ್‌: ಅಳದಂಗಡಿ ಶಾಖೆಯ ಉದ್ಘಾಟನಾ ಸಮಾರಂಭ

Article Image

ಸ್ಕೈ ಎಲೆಕ್ಟ್ರಿಕಲ್ಸ್‌ ಸರ್ವೀಸ್‌ ಮತ್ತು ಪ್ರೈಮ್‌ ಅಸೋಸಿಯೇಟ್ಸ್‌: ಅಳದಂಗಡಿ ಶಾಖೆಯ ಉದ್ಘಾಟನಾ ಸಮಾರಂಭ

ಅಳದಂಗಡಿ: ಇಲ್ಲಿನ ಶ್ರೀ ಸೋಮನಾಥೇಶ್ವರೀ ದೇವಸ್ಥಾನ ಬಳಿಯಿರುವ ಪಾವನಿ ಕಾಂಪ್ಲೆಕ್ಸ್‌ನಲ್ಲಿ ಸ್ಕೈ ಎಲೆಕ್ಟ್ರಿಕಲ್ಸ್‌ ಸರ್ವೀಸ್‌ ಮತ್ತು ಪ್ರೈಮ್‌ ಅಸೋಸಿಯೇಟ್ಸ್‌ ಅಳದಂಗಡಿ ಶಾಖೆಯ ಉದ್ಘಾಟನಾ ಸಮಾರಂಭವು ದಿನಾಂಕ 28-02-2025ನೇ ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಉದ್ಘಾಟನೆ ಹಾಗೂ ಶುಭಾಶೀರ್ವಾದ : ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ ಮುಖ್ಯ ಅತಿಥಿಗಳು : ಶಿವಪ್ರಸಾದ್ ಅಜಿಲರು, ಆಡಳ್ತೇದಾರರು ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ದೇವೇಂದ್ರ ಹೆಗ್ಡೆ ಕೊಕ್ರಾಡಿ, ಉದ್ಯಮಿಗಳು ಬೆಂಗಳೂರು, ಅಶ್ವಿನ್ ಪಿರೇರಾ ಮೂಡಬಿದ್ರೆ ಐಕ್ಯಾರ್ ಬಿಲ್ಡರ್, ರವಿ ಪ್ರಸಾದ್ ಶೆಟ್ಟಿ ಮೂಡಬಿದ್ರೆ ಜಿಲ್ಲಾ ಉಪಾಧ್ಯಕ್ಷರು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಮಂಗಳೂರು, ಸಂದೀಪ್‌ ಕುಮಾರ್‌ ಅಳದಂಗಡಿ ಮೆಸ್ಕಾಂ ಇಂಜಿನೀಯರ್, ಸರಸ್ವತಿ ಗ್ರಾ.ಪಂ.ಅಧ್ಯಕ್ಷರು ಅಳದಂಗಡಿ, ಪೂರ್ಣಿಮ ಜೆ. ಅಳದಂಗಡಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಯವರು, ಪ್ರವೀಣ್ ಭಟ್, ಮಾಲಕರು ಪಾವನಿ ಕಾಂಪ್ಲೆಕ್ಸ್ ಅಳದಂಗಡಿ. ಸನ್ಮಾನ : ನಿರಂಜನ್ ಜೈನ್, ಜೈನ ಸಮಾಜದ ಧಾರ್ಮಿಕ ಚಿಂತಕರು ಕಾರ್ಯಕ್ರಮ ನಿರೂಪಣೆ : ವಿಜಯ ಕುಮಾರ್ ಜೈನ್ ಆಮಂತ್ರಣ ವಿಶೇಷ ಕಾರ್ಯಕ್ರಮ ವಿದ್ಯುತ್‌ ಇಲಾಖೆಯಲ್ಲಿ ಲೈನ್ ಮ್ಯಾನ್ ವೃತ್ತಿಯಲ್ಲಿ ತೊಡಗಿಕೊಂಡು ಜೀವಪಣಕ್ಕಿಟ್ಟು ಕೆಲಸ ಮಾಡುವ ಎಲ್ಲಾ ಲೈನ್ ಮ್ಯಾನ್‌ಗಳಿಗೆ ಗೌರವ ಸಲ್ಲಿಕೆಯಾಗಲಿದೆ.

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Article Image

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

ಉಜಿರೆ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉದ್ಘಾಟಿಸಿ ಶುಭ ಹಾರೈಸಿದರು. ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರವಿದೆ. ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

First Previous

Showing 7 of 15 pages

Next Last