ಶೃತ ಪಂಚಮಿ ಆಚರಣೆ
Published Date: 22-May-2026
ಹೊಂಬುಜ: ಅತಿಶಯ ಶ್ರೀಕ್ಷೇತ್ರದಲ್ಲಿ ಪೂರ್ವ ಪರಂಪರೆಯಂತೆ ನಡೆದುಕೊಂಡು ಬಂದಿರುವ ಶೃತ ಪಂಚಮಿ ಮಹೋತ್ಸವವನ್ನು ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಜೂನ್. 19 ಶುಕ್ರವಾರದಂದು ನೆರವೇರಲಿದೆ. ಅಂದು 8 ವರ್ಷ ಮೇಲ್ಪಟ್ಟ ಜೈನ ಬಾಲಕ-ಬಾಲಕಿಯರಿಗೆ ಸಾಮೂಹಿಕ ವ್ರತೋಪದೇಶ ಹಾಗೂ ಎರಡರಿಂದ ಮೂರು ವರ್ಷದ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ‍್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ವಿಶೇಷ ಜಿನಪೂಜೆಯೊಂದಿಗೆ ಶಾಸ್ತ್ರಗಳನ್ನು ಪೂಜಿಸಿ, ಪಠಿಸಿ ಜಿನವಾಣಿಗೆ ಭಕ್ತಿಭಾವದ ನಮನ ಸಲ್ಲಿಸಲಾಗುವುದು. ವ್ರತೋಪದೇಶ ಹಾಗೂ ಅಕ್ಷರಾಭ್ಯಾಸದಲ್ಲಿ ಭಾಗವಹಿಸುವವರು ಶ್ರೀಮಠದ ಆಡಳಿತ ಕಾರ್ಯಾಲಯದಲ್ಲಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ: 08185-262722, 9481453653, 9483801460