ವಿದುಷಾ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Published Date: 01-Oct-2026
ಪುದುಚೇರಿಯ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆದ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2026ರಲ್ಲಿ ಅಂಡರ್-18 ಮಹಿಳೆಯರ 3000 ಮೀಟರ್ ರೇಸ್ ವಾಕ್ ವಿಭಾಗದಲ್ಲಿ ಚಿಕ್ಕಮಗಳೂರಿನ ಪೂರ್ಣಪ್ರಜ್ಞ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದೂಷಾ ಜೈನ್ ರವರು ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದು, ರಾಷ್ಟ್ರಮಟ್ಟದ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಕಳಸಾದ ಕೆಳಂಗಡಿ ನಿವಾಸಿಯಾದ ಸತ್ಯೇಂದ್ರ ಜೈನ ಹಾಗೂ ವೀಣಾ ಚೈನ್ ದಂಪತಿಗಳ ಪುತ್ರಿ.