ವೀರರಾಣಿ ಅಬ್ಬಕ್ಕ ಜೈನ ಮಹಿಳಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ ಆಯೋಜನೆ
Published Date: 07-Oct-2026
ಮಂಗಳೂರು: ವೀರರಾಣಿ ಅಬ್ಬಕ್ಕ ಜೈನ ಮಹಿಳಾ ಸಂಘದ ವತಿಯಿಂದ ದಶಲಕ್ಷಣ ಪರ್ವ ಆಚರಣೆಯ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮವು ಮುನಿರಾಜ ರೆಂಜಾಳ ಅವರಿಂದ ಮಂಗಳೂರಿನ ಲಾರ್ಡ್ ಮಹಾವೀರ ಬೋರ್ಡಿಂಗ್‌ನ ವರ್ಧಮಾನ ಸಿದ್ಧಾರ್ಥ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರರಾಣಿ ಅಬ್ಬಕ್ಕ ಜೈನ ಮಹಿಳಾ ಸಂಘದ ಅಧ್ಯಕ್ಷರಾದ ಸುಮನ ಪೂವಣಿಯವರು ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಗೆ ದಶಲಕ್ಷಣ ನಿಮಿತ್ತ ಸ್ಪರ್ದೆಗಳ ಆಯೋಜಿಸಲಾಗಿತ್ತು. ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರು ಜೈನ್ ಮಿಲನ್ ಅಧ್ಯಕ್ಷರಾದ ಸಚಿನ್ ರವರು ಉಪಸ್ಥಿತರಿದ್ದರು. ಸಂಧ್ಯಾ ಗುಣಪಾಲ್ ಕಾರ್ಯಕ್ರಮ ನಿರೂಪಿಸಿದರು ಮತ್ತು ಸಂಘದ ಕಾರ್ಯದರ್ಶಿಗಳಾದ ಶಿಲ್ಪಾ ಸಂದೀಪ್ ಎಲ್ಲರನ್ನು ಸ್ವಾಗತಿಸಿ ,ವಂದಿಸಿದರು.